ಸುರತ್ಕಲ್: ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿ ಪಲ್ಟಿ, ಆರು ಮಂದಿ ಮೀನುಗಾರರ ರಕ್ಷಣೆ

ಮಂಗಳೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಸಮುದ್ರಕ್ಕೆ ಬಿದ್ದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಪ್ರಬಲ ಅಲೆಗಳ ಹೊಡೆತಕ್ಕೆ ದೋಣಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ದೋಣಿ ಪಲ್ಟಿಯಾದ ತೀವ್ರತೆಗೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಸ್ಥಳೀಯ ಮೀನುಗಾರರು ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ, ಅಪಾಯದಲ್ಲಿದ್ದ ಎಲ್ಲಾ […]
Karnataka Rains: ಕರ್ನಾಟಕದಲ್ಲಿ ಮಳೆ ಚುರುಕು, ಕರಾವಳಿಯಲ್ಲಿ ಅಧಿಕ

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಹೆಚ್ಚು ಸ್ಥಳಗಳಲ್ಲಿ ಭಾರೀ ಮಳೆ ದಾಖಲು ಬೆಂಗಳೂರು: ಕರ್ನಾಟಕದಲ್ಲಿ ಜುಲೈ 8ರ ನಂತರ ಮಳೆ ಪ್ರಮಾಣ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಳೆ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಕಡೆ ಮಳೆಯಾಗಿದೆ.ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ 275 ಮಿ.ಮೀ […]
ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಬ್ರಹ್ಮಾವರ ತಾಲೂಕು ಕಾಡೂರು ಗ್ರಾಮವೃತ್ತದಲ್ಲಿ ಖಾಲಿ ಇರುವ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾಡೂರು ಗ್ರಾಮ ಆಡಳಿತ ಅಧಿಕಾರಿ ಕಚೇರಿ ಅಥವಾ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯು ಸರ್ಕಾರದ ಸೂಚನೆಯನ್ವಯ ನಡೆಯಲಿದೆ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಆಗ್ರಹ

ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನ ದಿನ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ವರದಿ ಸ್ವೀಕರಿಸಲಾಗಿದ್ದರೂ, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಕುರಿತು ಯಾವುದೇ ಕ್ರಮ […]
ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ

ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನದ ಹಣ ಬಿಡುಗಡೆಗೊಂಡಿದ್ದು, ಸರ್ಕಾರದ ನಿರ್ಧಾರವನ್ನು ಕಂಬಳ ಆಯೋಜಕರು ಹಾಗೂ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯಂತೆ ಕಂಬಳಗಳಿಗೆ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ […]