ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲವಾರು ಹಿಡಿದು ಭಯದ ವಾತಾವರಣ ಸೃಷ್ಟಿಸಿದ ಯುವಕ.!

ಮೂಡುಬಿದಿರೆ: ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಮಾರಕಾಯುಧ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಶನಿವಾರ ನಡೆದಿದೆ. ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಗೆ ತೆರಳಿದ ಆರೋಪಿ, ಅಲ್ಲಿದ್ದ ಯುವಕರಿಗೆ ಮಾರಕಾಯುಧ ಬೀಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ ಎನ್ನಲಾಗಿದೆ. ಮೊಬೈಲ್ ನೀಡಲು ನಿರಾಕರಿಸಿದ ವೇಳೆ ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆತಂಕಕ್ಕೊಳಗಾದರು. ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ಮಾದರಿಯಲ್ಲಿ ವಿವಿಧ ಕೋರ್ಸು ಸೇರ್ಪಡೆಗೆ ಅವಕಾಶ

ಉಡುಪಿ: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಸಂಬoಧಿಸಿದoತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತ್ತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ […]
ಮೂಡುಬಿದಿರೆ: ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ: ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ: ಡಾಟಾ ಎಂಟ್ರಿ ಆಪರೇಟರ್ ಬಂಧನ

ಉಡುಪಿ: ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಮಾಜಿ ಡಾಟಾ ಎಂಟ್ರಿ ಆಪರೇಟರ್‌ನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮರ್ಣೆ ಗ್ರಾಮದ ಎಣ್ಣೆಹೊಳೆ ಹಂಚಿಕಟ್ಟೆಯ ಅಕ್ಷಯ ದೇವಾಡಿಗ (29) ಎಂದು ಗುರುತಿಸಲಾಗಿದೆ. ಆರೋಪಿ 2022ರ ಡಿಸೆಂಬರ್ 1ರಿಂದ 2026ರ ಮೇ 7ರವರೆಗೆ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಒಳಪಡುವ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾಟಾ ಎಂಟ್ರಿ ಆಪರೇಟರ್ […]
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದ್ದು, ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ […]