ಹಂಪಿ ಸ್ಮಾರಕ ರಕ್ಷಣೆಗೆ ನೆರವು

ಹೊಸಪೇಟೆ (ವಿಜಯನಗರ): ಹಂಪಿಯ ಐತಿಹಾಸಿಕವಿರೂಪಾಕ್ಷ ಹಾಗೂ ವಿಜಯ ವಿಠಲ ದೇಗುಲ ಸಂರಕ್ಷಣೆಗಾಗಿ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 490 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಿದ್ದಾರೆ.ಶುಕ್ರವಾರ ಹಂಪಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು, ಗುಣಮಟ್ಟದ ಕಾಮಗಾರಿ ನಡೆಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ವಚ್ಛತೆ ಕುರಿತು ಅಸಮಮಾಧಾನ ವ್ಯಕ್ತಪಡಿಸಿದರು.
ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ನೋಂದಣಿಗೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. […]
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಕಳೆದ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4:50 ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಸಹಕಾರ ಭಾರತಿ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆ

ಉಡುಪಿ: ಸಹಕಾರ ಭಾರತಿ ಉಡುಪಿ ಜಿಲ್ಲೆಯ ಜಿಲ್ಲಾ ಕಾರ್ಯಕಾರಿಣಿ ಸಭೆ ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಕಿನ್ನಿಮುಲ್ಕಿಯ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಸಹಕಾರ ಭಾರತಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ರವರು ಮಾತನಾಡಿ, ಡಿಜಿಟಲ್ ಸದಸ್ಯತಾ ಅಭಿಯಾನ , ಹೊಸದಾಗಿ ಸದಸ್ಯರಾಗುವವರಿಗೆ ತಾಲೂಕು ಮಟ್ಟಗಳಲ್ಲಿ ಸಹಕಾರ ಭಾರತಿ ಪರಿಚಯ ವರ್ಗಗಳ ಆಯೋಜನೆ ಹಾಗೂ ಸಹಕಾರ ಭಾರತಿ ಚಟುವಟಿಕೆಗಳನ್ನು ಗ್ರಾಮ ಮಟ್ಟದ ಸಹಕಾರಿ ಸಂಸ್ಥೆಗಳ […]
ಕರ್ನಾಟಕ ಲೋಕಾಯುಕ್ತದಲ್ಲಿ 26 ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ನೇಮಕಾತಿ: ಪರೀಕ್ಷೆಯಿಲ್ಲದೆ ನೇರ ಆಯ್ಕೆಯಾಗಬಹುದು: ಹೇಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಸಿಹಿ ಸುದ್ದಿ ಸಿಕ್ಕಿದೆ. ಖಾಲಿ ಇರುವ ಗ್ರೂಪ್-ಸಿ ‘ಕ್ಲರ್ಕ್-ಕಮ್-ಟೈಪಿಸ್ಟ್’ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ನೇಮಕಾತಿ ನಡೆಸಲಾಗುತ್ತಿದೆ. ಹುದ್ದೆಗಳ ವಿವರ ಶೈಕ್ಷಣಿಕ ಅರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಜೂನಿಯರ್ ಗ್ರೇಡ್ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ ಅರ್ಜಿ ಶುಲ್ಕ […]