ಉಳ್ಳಾಲ ಸಮುದ್ರ ತೀರದಲ್ಲಿ ದಡಕ್ಕೆ ಅಪ್ಪಳಿಸಿದ ಸಾವಿರಾರು ಮೀನುಗಳು! ಕಾರಣ ಇಲ್ಲಿದೆ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮುದ್ರ ತೀರದಲ್ಲಿ ಅಪರೂಪದ ಘಟನೆಯೊಂದು ನಡೆದಿದ್ದು, ಒಂದೇ ಬಾರಿಗೆ ಸಾವಿರಾರು ಬೂತಾಯಿ ಮೀನುಗಳು ದಡಕ್ಕೆ ಅಪ್ಪಳಿಸಿದ ಪರಿಣಾಮ ಸ್ಥಳೀಯರಿಗೆ ಮೀನಿನ ಸುಗ್ಗಿಯೇ ದೊರಕಿದಂತಾಗಿದೆ. ಈ ಅಪರೂಪದ ದೃಶ್ಯವನ್ನು ನೋಡಲು ಜನರು ಮುಗಿಬಿದ್ದಿದ್ದು, ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಲಭ್ಯವಾದ ಮಾಹಿತಿಯ ಪ್ರಕಾರ, ಸಮುದ್ರದಲ್ಲಿ ಸಾಲುಸಾಲಾಗಿ ಸಂಚರಿಸುತ್ತಿದ್ದ ಬೂತಾಯಿ ಮೀನುಗಳ ದೊಡ್ಡ ಗುಂಪು, ಹಾದುಹೋಗುತ್ತಿದ್ದ ದೋಣಿಯಿಂದ ಉಂಟಾದ ಶಬ್ದಕ್ಕೆ ದಿಕ್ಕು ಬದಲಿಸಿದೆ. ಇದರಿಂದ ಮೀನುಗಳು ನೇರವಾಗಿ ಉಳ್ಳಾಲ ಸಮುದ್ರ […]
ಪ್ರೀತಿಗೆ ಗಡಿಗಳಿಲ್ಲ! ಸಂಪಾಜೆಯಲ್ಲಿ ಹಿಂದೂ ಸಂಪ್ರದಾಯದಂತೆ ಅಮೆರಿಕನ್ ಯುವತಿಯ ಮದುವೆ

ಸುಳ್ಯ: ದೇಶ, ಭಾಷೆ ಮತ್ತು ಸಂಸ್ಕೃತಿಯ ಗಡಿಗಳನ್ನು ಮೀರಿ ಕೃಷ್ಣ ಭಕ್ತಿ ಇಬ್ಬರು ಯುವ ಹೃದಯಗಳನ್ನು ಒಂದಾಗಿಸಿದ ಅಪರೂಪದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದ್ದು, ಈ ಜೋಡಿಯ ಪ್ರೇಮಕಥೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಬಿ.ಕೆ. ಕೇಶವ ಅವರ ಪುತ್ರ ಸಾಯಿ ಸಂಕೇತ್ ಹಾಗೂ ಅಮೆರಿಕದ ಚಿಕಾಗೋ ನಗರದ ಡಾ. ಚಾರ್ಲ್ಸ್ ಅವರ ಪುತ್ರಿ ಶಾನೋನ್ ಅವರು ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ […]
ಉಡುಪಿಯ ಪ್ರತಿಷ್ಠಿತ ಮಾರ್ಕೆಟಿಂಗ್ ಕಂಪನಿಯಲ್ಲಿ ಉದ್ಯೋಗಾವಕಾಶ

ಉಡುಪಿಯ ಪ್ರತಿಷ್ಠಿತ ಮಾರ್ಕೆಟಿಂಗ್ ಕಂಪನಿಯಲ್ಲಿ ಉದ್ಯೋಗಾವಕಾಶ. ಹುದ್ದೆ: CLIENT RELATIONSHIP MANAGER(MALE) / Video editor ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: [email protected] 8105732895
ಸತತ 20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದರು. ಆರೋಗ್ಯದಲ್ಲಿ ಗಂಭೀರ ಹಿನ್ನಡೆ ಕಂಡುಬಂದ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್ ನಿರ್ದೇಶನ ಹಾಗೂ ತಜ್ಞ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ಆರೈಕೆಗಾಗಿ ವಾಂಗ್ಚುಕ್ […]
ಸಕಲೇಶಪುರ ಸೇರಿ ಹಲವು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಭೀತಿ: 16 ಅಪಾಯದ ಪ್ರದೇಶಗಳ ಗುರುತು

ಹಾಸನ: ಜಿಲ್ಲೆಯ ಮಲೆನಾಡು ಭಾಗ, ವಿಶೇಷವಾಗಿ ಸಕಲೇಶಪುರ ತಾಲ್ಲೂಕಿನಲ್ಲಿ ಸಂಭವನೀಯ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತ 16 ಭೂಕುಸಿತ ಸಂಭವಿಸಬಹುದಾದ ಸ್ಥಳಗಳು ಹಾಗೂ 4 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿದೆ. ಸುರಕ್ಷತಾ ದೃಷ್ಟಿಯಿಂದ ಈ ಪ್ರದೇಶಗಳ ನಿವಾಸಿಗಳಿಗೆ ಮನೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದೆ. ಆದರೆ, ಕಳೆದ ಐವತ್ತು ವರ್ಷಗಳಿಂದ ಈ ಪ್ರದೇಶಗಳಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳು, “ಮೊದಲು ಬದಲಿ ಜಾಗ ಅಥವಾ ಸೂಕ್ತ ಪರಿಹಾರ ನೀಡಿ, ಬಳಿಕವೇ ಸ್ಥಳಾಂತರವಾಗುತ್ತೇವೆ” ಎಂದು ಪಟ್ಟು ಹಿಡಿದಿವೆ. […]