ಕ್ರೀಡಾ ಇಲಾಖೆಯ ವಿವಿಧ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ: 2025 ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ, ನಗದು ಪುರಸ್ಕಾರ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2025-26 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, 2025-26 ನೇ ಸಾಲಿನ ವಿದ್ಯಾರ್ಥಿ ವೇತನ ಯೋಜನೆ ಹಾಗೂ 2026-27 ನೇ ಸಾಲಿನ ಗುರಿ ಒಲಂಪಿಕ್ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]

ವ್ಯಕ್ತಿ ನಾಪತ್ತೆ

ಉಡುಪಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ ವ್ಯಕ್ತಿಯು ಜುಲೈ 13 ರಂದು ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ º ೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463 ಹಾಗೂ ಕಾರ್ಕಳ ವೃತ್ತ ನಿರೀಕ್ಷಕರ […]

ಆರೋಗ್ಯ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಜುಲೈ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.45 ಕ್ಕೆ ಬಾರಕೂರಿನ ಮಲ್ಲಿಕ್ ದಿನಾರ್ ಮಸೀದಿ, ಸೈಂಟ್ ಪೀಟರ್ಸ್ ಚರ್ಚ್, ಪಂಚಲಿoಗೇಶ್ವರ ದೇವಸ್ಥಾನ, ಕತ್ತಲೆ ಬಸದಿ ಹಾಗೂ ಕಲ್ಚಪ್ರ ಕ್ಕೆ ಭೇಟಿ ನೀಡಿ, ನಂತರ ಕುಮಟಾಗೆ ಪ್ರಯಾಣ ಬೆಳೆಸಲಿದ್ದಾರೆ.

ಭಾರವಾದ ಕಬ್ಬಿಣದ ಗ್ಯಾಸ್ ಸಿಲಿಂಡರ್‌ಗೆ ಗುಡ್‌ಬೈ ಹೇಳೋ ಕಾಲ ಬಂತು, ಮಾರುಕಟ್ಟೆಗೆ ಬಂದಿದೆ ಹಗುರ, ಪಾರದರ್ಶಕ LPG ಸಿಲಿಂಡರ್

ಭಾರವಾದ ಕಬ್ಬಿಣದ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಬಳಕೆಗೆ ಪರ್ಯಾಯವಾಗಿ ದೇಶದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಹೊಸ ತಂತ್ರಜ್ಞಾನದ ಸಂಯೋಜಿತ (Composite) LPG ಸಿಲಿಂಡರ್‌ಗಳನ್ನು ಪರಿಚಯಿಸಿವೆ. ‘ಭಾರತ್ ಗ್ಯಾಸ್ ಲೈಟ್‌ಜಿಪ್’ ಹಾಗೂ ‘HP ನವ್ಯ’ ಹೆಸರಿನಲ್ಲಿ ಬಿಡುಗಡೆಯಾಗಿರುವ ಈ ಹೊಸ ಸಿಲಿಂಡರ್‌ಗಳು ಸಾಂಪ್ರದಾಯಿಕ ಕಬ್ಬಿಣದ ಸಿಲಿಂಡರ್‌ಗಳಿಗಿಂತ ಹಗುರ, ಸುರಕ್ಷಿತ ಮತ್ತು ಬಳಕೆದಾರ ಸ್ನೇಹಿಯಾಗಿವೆ. 50% ಕಡಿಮೆ ತೂಕ ಹೊಸ ಕಾಂಪೋಸಿಟ್ ಸಿಲಿಂಡರ್‌ಗಳು ಸಾಮಾನ್ಯ ಕಬ್ಬಿಣದ ಸಿಲಿಂಡರ್‌ಗಳಿಗಿಂತ […]

ಗಣಿ ಇಲಾಖೆಗೆ ಮೇಜರ್ ಸರ್ಜರಿ: 160 ಅಧಿಕಾರಿಗಳ ವರ್ಗಾವಣೆಗೊಳಿಸುವಂತೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಭಾರೀ ಆಡಳಿತಾತ್ಮಕ ಬದಲಾವಣೆ ಕೈಗೊಂಡಿರುವ ರಾಜ್ಯ ಸರ್ಕಾರ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ಮೇಜರ್ ಶಾಕ್ ನೀಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಂದೇ ಬಾರಿಗೆ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇವರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು ಸೇರಿದ್ದಾರೆ. ದಶಕಗಳ ಕಾಲ ಸ್ವಂತ ಜಿಲ್ಲೆ ಅಥವಾ ನೆರೆಯ […]