ಧನ ಸಹಾಯ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸoಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಹರಿಂದ Sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20 […]
ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಯುವ ಪೀಳಿಗೆಯ ಜವಾಬ್ದಾರಿ: ಕಿರಣ್ ಕುಮಾರ್ ಕೊಡ್ಗಿ

ಉಡುಪಿ: ಹಿಂದಿನ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಸಹ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ […]
ಮಾದಕ ವ್ಯಸನ ಮುಕ್ತ ಯುವ ಸಮಾಜಕ್ಕಾಗಿ ಜಾಗೃತಿ ಕಾರ್ಯಕ್ರಮ ಅತ್ಯಗತ್ಯ: ನಿತಿನ್ ರಾವ್ ವೈರೈಸ್- ಬೇಡ ಬ್ರೋ ಕಾರ್ಯಕ್ರಮದಲ್ಲಿ ಅಭಿಮತ

ಉಡುಪಿ: ದೇಶದ ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಸೇವನೆ ವ್ಯಸನವು ಹೆಚ್ಚಾಗಿದ್ದು, ಜಿಲ್ಲೆಯಲ್ಲಿಯೂ ಹಲವಾರು ಪ್ರಕರಣಗಳು ಕಂಡುಬoದಿವೆ. ಯುವಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಕಾರ್ಯಾಗಾರಗಳನ್ನು ನಡೆಸುವುದರಿಂದ ಅವರಲ್ಲಿ ಮಾದಕ ವಸ್ತುಗಳು ಮತ್ತು ಅವುಗಳಿಂದ ಆಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನಿತಿನ್ ರಾವ್ ವೈ. ಹೇಳಿದರು. ಅವರು ಇಂದು ನಗರದ ಅಂಬಲಪಾಡಿ […]
ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಆರೋಗ್ಯ ಸಚಿವ ಯು.ಟಿ ಖಾದರ್ ಫರೀದ್ ಭೇಟಿ

ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಇಂದು ಬಾರಕೂರಿನ ಸಂತೆಗುಡ್ಡೆ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾರಕೂರು ಇತಿಹಾಸ ಪ್ರಸಿದ್ಧವಾದ ಪವಿತ್ರ ಕ್ಷೇತ್ರ. ವಿಜಯನಗರದ ರಾಜರು ಸೇರಿದಂತೆ ಹಲವಾರು ರಾಜರು ಬಾರಕೂರನ್ನು ಆಳಿದರೂ ಸಹ, ರಾಜರೂ ಬದಲಾದರೂ, ಅಧಿಕಾರ ಬದಲಾದರೂ ಸಹ ಬಾರಕೂರಿನ ಸಂಸ್ಕೃತಿ ಮತ್ತು ಮೌಲ್ಯವನ್ನು ಶಾಶ್ವತವಾಗಿ ನೆಲೆನಿಲ್ಲುವಂತೆ ಮಾಡಿರುವುದು ದೊಡ್ಡ […]
ವ್ಯಕ್ತಿ ನಾಪತ್ತೆ

ಉಡುಪಿ: ಶಿರ್ವ ಪೇಟೆಯಲ್ಲಿರುವ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಪ್ರವೀಣ್ ಪೂಜಾರಿ (45) ಎಂಬ ವ್ಯಕ್ತಿಯು ಜುಲೈ 16 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಹೋಟೆಲ್‌ನಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಕೆಲಸಕ್ಕೂ ಬಾರದೇ, ತನ್ನ ಪತ್ನಿ ಮನೆಯಾದ ನಿಟ್ಟೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಉಪ […]