ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ಮತ್ತು ಬಿ.ಸಿ.ಎ. ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಷನ್ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಸಿ.ಎ. ಗೋಪಾಲಕೃಷ್ಣ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಜೀವನವು ಹೊಸ ಅವಕಾಶಗಳು ಮತ್ತು ಅನೇಕ ಸಾಧ್ಯತೆಗಳ ಆರಂಭವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಸಾಮರ್ಥ್ಯವನ್ನು ಗುರುತಿಸಿಕೊಂಡು ಶಿಸ್ತು, ಸಮಯಪಾಲನೆ, ಪರಿಶ್ರಮ ಹಾಗೂ […]

ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ: ಸಚಿವ ಯು.ಟಿ. ಖಾದರ್

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ಕುರಿತು ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಹವಾಲುಗಳನ್ನು ಆಲಿಸಿದ ಸಚಿವರು, ಸಮಗ್ರ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾರ್ಕೂರು ಪಂಚಲಿಂಗೇಶ್ವರ […]

ಉಡುಪಿ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಬಂಧನ

ಉಡುಪಿ: 2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ 8.30ರ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಹಾರಾಷ್ಟ್ರ ನೋಂದಣಿಯ ಮಿನಿ ಗೂಡ್ಸ್ ಲಾರಿ (MH12FA6993)ಯನ್ನು ಚಾಲಕ ವಿಲಾಸ್ ಶಿಂಧೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ […]

ಕೊರೊನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಅಗತ್ಯ: ಸಚಿವ ಯು.ಟಿ. ಖಾದರ್

ಉಡುಪಿ: ದೇಶದಲ್ಲಿ ಮತ್ತೆ ಕೋವಿಡ್‌-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಪರೀಕ್ಷೆ ನಡೆಸಿದಾಗ ಕೆಲವರಲ್ಲಿ ಸೋಂಕು ದೃಢಪಟ್ಟರೂ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‌ಗಳು ಪರಿಸರದಲ್ಲಿ ಇರುವುದು ಸಹಜ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವೈರಸ್‌ಗಿಂತ ನಾವು ಗಟ್ಟಿಯಾಗಬೇಕು. ಉತ್ತಮ ಆಹಾರ ಪದ್ಧತಿ, ಸ್ವಚ್ಛತೆ ಮತ್ತು […]

ಬಾರ್ಕೂರು ಭಾರತದ ಸಂಸ್ಕೃತಿಯ ಪ್ರತಿಬಿಂಬ: ಸಚಿವ ಯು.ಟಿ. ಖಾದರ್

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಸಂತೆಗುಡ್ಡೆಯ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿ, ಮಸೀದಿಯ ಆಡಳಿತ ಸಮಿತಿಯಿಂದ ಸನ್ಮಾನ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ಬಾರ್ಕೂರು ಇತಿಹಾಸ ಪ್ರಸಿದ್ಧ ಪವಿತ್ರ ಕ್ಷೇತ್ರವಾಗಿದ್ದು, ವಿಜಯನಗರ ಸಾಮ್ರಾಜ್ಯದ ರಾಜರಿಂದ ಹಿಡಿದು ಅನೇಕ ಅರಸರ ಆಡಳಿತಕ್ಕೆ ಸಾಕ್ಷಿಯಾಗಿದೆ. ಅಧಿಕಾರ ಮತ್ತು ಆಡಳಿತ ಬದಲಾದರೂ ಇಲ್ಲಿನ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಉಳಿಸಿಕೊಂಡು […]