ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ: ಬಾಲಕಿಯ ಕಣ್ಣಿನಿಂದ ಜೀವಂತ ಪರಾವಲಂಬಿ ಹುಳು ಯಶಸ್ವಿಯಾಗಿ ಹೊರತೆಗೆದು ವೈದ್ಯರು

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನೇತ್ರ ತಜ್ಞರು, ಬಲಗಣ್ಣಿನಲ್ಲಿ ನಿರಂತರ ಕೆಂಪಾಗುವಿಕೆ ಮತ್ತು ಕಿರಿಕಿರಿಯೊಂದಿಗೆ ದಾಖಲಾದ ನಾಲ್ಕು ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಪರಾವಲಂಬಿ ಹುಳುವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದೆ. ಪೋಷಕರು ಮಗುವಿನ ಬಲಗಣ್ಣಿನಲ್ಲಿ ನಿರಂತರ ಕೆಂಪಾಗುವಿಕೆಯನ್ನು ಗಮನಿಸಿದ ನಂತರ ಮಗುವನ್ನು ನೇತ್ರಶಾಸ್ತ್ರ ವಿಭಾಗಕ್ಕೆ ಕರೆತರಲಾಯಿತು. ಪರೀಕ್ಷೆಯ ಸಂದರ್ಭದಲ್ಲಿ, ವೈದ್ಯರು ಕಂಜಂಕ್ಟಿವಾ ಪೊರೆಯ ಕೆಳಗೆ ಸಣ್ಣ ಮಿಡಿಯುತ್ತಿರುವ ಭಾಗವನ್ನು ಗಮನಿಸಿದರು, ಮತ್ತು ಸ್ಲಿಟ್-ಲ್ಯಾಂಪ್ ಬಯೋಮೈಕ್ರೋಸ್ಕೋಪಿ ಪರೀಕ್ಷೆಯು ಜೀವಂತ ಪರಾವಲಂಬಿಯ ಶಂಕೆಯನ್ನು ಹುಟ್ಟುಹಾಕಿತು. […]
ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ

ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹಿಸಿದರು. ಕಂಬಳ ಆಯೋಜನೆಗೆ ತಡೆ ವಿಧಿಸಿರುವ ಕ್ರಮವನ್ನು ವಿರೋಧಿಸಿದ ಅವರು, ಕರಾವಳಿಯ ಸಂಪ್ರದಾಯ, ಸಂಸ್ಕೃತಿ ಹಾಗೂ ಜನರ ಭಾವನೆಗಳಿಗೆ ಸಂಬಂಧಿಸಿದ ಕಂಬಳಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು. ಕರಾವಳಿಯ ಸಾಂಪ್ರದಾಯಿಕ ಕಂಬಳಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಕೋರ್ಟ್ ಆದೇಶವನ್ನು ಹಿಂಪಡೆಯುವಂತೆ ಸಂಬಂಧಪಟ್ಟ […]
ಪ.ಜಾತಿ ಪತ್ರಿಕೋದ್ಯಮ ಪದವೀಧರರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಡಿಜಿಟಲ್ ಉದ್ದಿಮೆಗೆ ಧನ ಸಹಾಯ

ಉಡುಪಿ: ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ಸ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ 5 ಲಕ್ಷ ರೂ.ಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ, ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರ ಒಳಗಾಗಿ […]