ವಿದ್ಯಾರ್ಥಿಗಳ ಹೆಸರಿನಲ್ಲಿ ಅರಾಜಕತೆ: ಆರ್ ಎ ಎಫ್, ಪೊಲೀಸರ ಮೇಲಿನ ದಾಳಿ ಖಂಡನೀಯ: ಶ್ರೀನಿಧಿ ಹೆಗ್ಡೆ

ಉಡುಪಿ: ನೀಟ್ ಪರೀಕ್ಷೆ ಸಂಬಂಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೆಲಕ್ಕುರುಳಿಸಿ ಗುಂಪಾಗಿ ಹಲ್ಲೆ ನಡೆಸುವ ದೃಶ್ಯಗಳು ಹೊರಬರುತ್ತಿವೆ. ಇಂಥ ಹಿಂಸಾತ್ಮಕ ಚಟುವಟಿಕೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಹೊಂದಿಕೆಯಾಗುವುದಿಲ್ಲ. ಶಾಂತಿಯುತ ಪ್ರತಿಭಟನೆಯ ಸೋಗಿನಲ್ಲಿ ಆರ್ ಎ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹೇಳಿದ್ದಾರೆ. ನೀಟ್ ಪರೀಕ್ಷೆ ವಿಷಯದಲ್ಲಿ ವಿದ್ಯಾರ್ಥಿಗಳು,ಪೋಷಕರು ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. […]

ಉಡುಪಿ: ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಅನ್ವಯ ಕಾರ್ಮಿಕ ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ಉತ್ತರ ಪ್ರದೇಶ ಮೂಲದ ಓರ್ವ ಬಾಲ ಕಾರ್ಮಿಕನನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದರು. ಕಟ್ಟಡದ ಮಾಲೀಕರು/ನಿಯೋಜಕರು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅಥವಾ ಇನ್ಯಾವುದೇ ಕೆಲಸದಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳಬಾರದು. ಬೇರೆ ರಾಜ್ಯದಿಂದ ಕಾರ್ಮಿಕರನ್ನು ಕರೆ ತರುವಾಗ ಮೂಲ ದಾಖಲೆಯನ್ನು ಪರಿಶೀಲಿಸಿ […]

ಕಾರ್ಕಳ: ವ್ಯಕ್ತಿ ನಾಪತ್ತೆ

ಉಡುಪಿ: ಮೂಲ್ಕಿಯ ಕೆರೆಕಾಡುವಿನಲ್ಲಿ ವಾಸವಿದ್ದ ಉದಯ (69) ಎಂಬ ವ್ಯಕ್ತಿಯು ತನ್ನ ಮಗಳ ಮನೆಯಾದ ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಬೆರ್ನೊಟ್ಟು ಹೌಸ್‌ಗೆ ಬಂದಿದ್ದವರು ಜುಲೈ 18 ರ ಮಧ್ಯಾಹ್ನ 2.30 ರಿಂದ ಸಂಜೆ 5.30 ರ ಅವಧಿಯಲ್ಲಿ ಮನೆಯಿಂದ ಹೊರಗೆ ಹೋದವರು ವಾಪಾಸು ಬರದೇ ನಾಪತ್ತೆಯಾಗಿರುತ್ತಾರೆ. 177 ಸೆಂ.ಮೀ ಎತ್ತರ, ಕಪ್ಪು ಮೈಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿರುವ ಇವರು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ […]

ಶ್ರವಣ ಸಮಸ್ಯೆಗಳು ಬಂದ್ರೆ ಪರಿಹಾರ ಇಲ್ಲ ಎಂದು ಸುಮ್ಮನಾಗಬೇಡಿ, ಉಡುಪಿಯಲ್ಲಿದೆ ನಿಮ್ಮೆಲ್ಲಾ ಶ್ರವಣ ಸಮಸ್ಯೆಗಳಿಗೆ ಪರಿಹಾರ ನೀಡೋ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್!

ಉಡುಪಿ: ಇತ್ತೀಚಿನ ದಿನಗಳಲ್ಲಿ ಶ್ರವಣ ಸಮಸ್ಯೆಗಳು ಹಾಗೂ ಮಾತಿನ ತೊಂದರೆಗಳು ಎಲ್ಲ ವಯೋಮಾನದವರಲ್ಲೂ ಹೆಚ್ಚಾಗುತ್ತಿವೆ.ಇದಕ್ಕೆ ಪರಿಹಾರ ಕಂಡುಕೊಳ್ಳಲು ತುಂಬಾ ಜನರಿಗೆ ಸಾಧ್ಯವಾಗುವುದಿಲ್ಲ. ಆದರೆ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್‌ನಲ್ಲಿ ನಿಮ್ಮ ಎಲ್ಲಾ ಶ್ರವಣ ಸಮಸ್ಯೆಗಳಿಗೆ ತಕ್ಷಣ ಸಿಗುತ್ತೆ ಪರಿಹಾರ. ಹೌದು. ಇಂತಹ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ಒದಗಿಸುವ ಉದ್ದೇಶದಿಂದ ಉಡುಪಿಯಲ್ಲಿರುವ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಜನರಿಗೆ ವಿಶೇಷ ಸೇವೆಗಳನ್ನು ನೀಡುತ್ತಿದೆ. ಏನೇನು ಸೇವೆಗಳು? ಆಡಿಯಾಲಜಿಸ್ಟ್ ಹಾಗೂ ಸ್ಪೀಚ್ ಲ್ಯಾಂಗ್ವೇಜ್ ಪಥಾಲಜಿಸ್ಟ್ ನಿರ್ಮಲ […]

ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಬೃಹತ್ ಮರ ಉರುಳಿ; 3 ಗಂಟೆಗಳ ಬಳಿಕ ಸಂಚಾರ ಪುನರಾರಂಭ

ಉಡುಪಿ: ಉಡುಪಿ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ–66ರ ಉಡುಪಿಯಿಂದ ಬ್ರಹ್ಮಾವರ ಕಡೆ ಸಾಗುವ ಸರ್ವಿಸ್ ರಸ್ತೆಗೆ ಬುಧವಾರ ಬೆಳಗ್ಗೆ ಸುಮಾರು 10 ಗಂಟೆಗೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಮೂರು ಗಂಟೆಗಳಿಗೂ ಅಧಿಕ ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಘಟನೆ ನಡೆದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸದೇ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಮರ ರಸ್ತೆಯ ಮಧ್ಯೆ ಅಡ್ಡವಾಗಿ ಬಿದ್ದ ಪರಿಣಾಮ ಎರಡೂ ದಿಕ್ಕಿನ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರು […]