ಆ. 7,8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’

ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, […]
ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ದುರ್ಬಳಕೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಹಣ ಹಾಗೂ ಭಕ್ತರು ಸಮರ್ಪಿಸಿದ ಕಾಣಿಕೆಗಳ ದುರ್ಬಳಕೆ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಜಾಥಾ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಕ್ಕೂ […]
“ನಂಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದೇನೆ” ಅಭಿಮಾನಿಗಳಿಗೆ ಸ್ಪಷ್ಟನೆ ಕೊಟ್ಟ ಬಿಗ್ ಬಿ! ವದಂತಿಗಳಿಗೆ ಕಂಗಾಲಾಗಿದ್ದವರು ಈಗ ಖುಷ್

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಸ್ವತಃ ಬಿಗ್ ಬಿ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಆಸ್ಪತ್ರೆ, ಶಸ್ತ್ರಚಿಕಿತ್ಸೆ ಹಾಗೂ ಐಸಿಯು ಕುರಿತು ಅವರು ಬರೆದಿದ್ದ ಬ್ಲಾಗ್ ಪೋಸ್ಟ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ, ಅದು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಬರಹವಲ್ಲ ಎಂದು ಅಮಿತಾಬ್ ತಿಳಿಸಿದ್ದಾರೆ. ಇತ್ತೀಚೆಗೆ ಪ್ರಕಟಿಸಿದ್ದ ಬ್ಲಾಗ್‌ನಲ್ಲಿ ಆಸ್ಪತ್ರೆ, ಶಸ್ತ್ರಚಿಕಿತ್ಸೆ, ಐಸಿಯು ಹಾಗೂ ಚೇತರಿಕೆ ಕುರಿತು ಉಲ್ಲೇಖಿಸಿದ್ದರಿಂದ ಅಮಿತಾಬ್ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ […]
ನೀಟ್ ಮಾತ್ರವಲ್ಲ, ಎಲ್ಲ ಪರೀಕ್ಷೆಗಳ ಲೋಪಗಳ ವಿರುದ್ಧ ಸಿಜೆಪಿ ಧ್ವನಿ ಎತ್ತಬೇಕು: ಅನುಪಮಾ ಶೆಣೈ

ಉಡುಪಿ: ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಗಂಭೀರವಾಗಿದ್ದರೂ, ಇಂತಹ ಘಟನೆಗಳು ಕೇವಲ ನೀಟ್‌ಗೆ ಸೀಮಿತವಾಗಿಲ್ಲ. ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಇಂತಹ ಸಮಸ್ಯೆಗಳು ಕಂಡುಬರುತ್ತಿವೆ. ಆದ್ದರಿಂದ ಕಾಕ್ರೋಚ್ ಜನತಾ ಪಾರ್ಟಿ ಕೇವಲ ನೀಟ್ ವಿರುದ್ಧವಲ್ಲ, ಎಲ್ಲ ಪರೀಕ್ಷೆಗಳಲ್ಲಿನ ಲೋಪಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಒತ್ತಾಯಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆ ಕುರಿತಾಗಿ ಪ್ರತಿಭಟನೆ ನಡೆಸುತ್ತಿರುವ “ಕಾಕ್ರೋಚ್ ಜನತಾ ಪಾರ್ಟಿ”ಯ ನಡೆ ಸರಿಯಾದ […]
ಉಡುಪಿ: ಕಲ್ಯಾಣಪುರ ಸಂತೆಕಟ್ಟೆಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ – ಒಂದು ಗಂಟೆ ಸಂಚಾರ ಅಸ್ತವ್ಯಸ್ತ

ಉಡುಪಿ: ಕಲ್ಯಾಣಪುರ ಸಂತೆಕಟ್ಟೆ ಪ್ರದೇಶದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ರಸ್ತೆಗೆ ಧರೆಗುರುಳಿದ ಪರಿಣಾಮ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುವ ಸರ್ವಿಸ್ ರಸ್ತೆಯ ಮೇಲೆ ಮರ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ಸುಮಾರು ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು. ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, […]