ಉಡುಪಿ: ಜುಲೈ 31ರಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ‘ಸ್ವದೇಶಿ ಖಾದ್ಯ ಮೇಳ’; ಸ್ಟಾಲ್ ಬುಕ್ಕಿಂಗ್ ಆರಂಭ.

ಉಡುಪಿ: ಶಕ್ತಿ ಈವೆಂಟ್ಸ್ ಆಶ್ರಯದಲ್ಲಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಇದೇ ಜುಲೈ 31ರಿಂದ ಆಗಸ್ಟ್ 2ರವರೆಗೆ ಆಯೋಜಿಸಲಾಗುತ್ತಿರುವ ಮೂರು ದಿನಗಳ ‘ಸ್ವದೇಶಿ ಖಾದ್ಯ ಮೇಳ’ಕ್ಕೆ ಸ್ಟಾಲ್ ಬುಕ್ಕಿಂಗ್ ಆರಂಭವಾಗಿದೆ. ಉಡುಪಿ ಜನಪ್ರಿಯ ಜನಸೇವಕರೂ, ಅನೇಕ ದೈವ–ದೇವಸ್ಥಾನಗಳ ಜೀರ್ಣೋದ್ಧಾರದ ರೂವಾರಿಯೂ ಹಾಗೂ ಜಲದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರೂ ಆದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ಸಾರಥ್ಯದಲ್ಲಿ ಮೇಳ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಸ್ವದೇಶಿ ತಿಂಡಿ–ತಿನಿಸುಗಳು, ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಮಸಾಲೆ ಪದಾರ್ಥಗಳು […]
ಭಾಂದವ ಕಪ್ 2026: ಕ್ರೈಸ್ಟ್ ಕಿಂಗ್ ಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

ಕಾರ್ಕಳ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಭಾಂದವ ಕಪ್ 2026, ಪ್ರಾಥಮಿಕ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 36ಪ್ರಾಥಮಿಕ ಶಾಲಾ ತಂಡಗಳು ಈ ಪ್ರತಿಷ್ಠಿತ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಅತ್ಯಂತ ಸ್ಪರ್ಧಾತ್ಮಕವಾಗಿದ್ದ ಈ ಪಂದ್ಯಾಟದಲ್ಲಿ ನಮ್ಮ ಶಾಲೆಯ ಬಾಲಕಿಯರು ಅತ್ಯುತ್ತಮಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸಿದರು. ಈ ಬಹುಮಾನವನ್ನು ಕರ್ನಾಟಕ […]
ಜುಲೈ 25ರಂದು ನಿಟ್ಟೆಯಲ್ಲಿ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ

ಕಾರ್ಕಳ: ಉಡುಪಿ ಜಿಲ್ಲೆಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ವೈಭವ ಹಾಗೂ ಜೀವಂತ ಸಾಂಸ್ಕೃತಿಕ ವೈಶಿಷ್ಟ್ಯವನ್ನು ಪ್ರತಿಬಿಂಬಿಸುವ ಉಡುಪಿಯ ಅಧಿಕೃತ ಪ್ರವಾಸೋದ್ಯಮ ಮ್ಯಾಸ್ಕಾಟ್ (Tourism Mascot) ವಿನ್ಯಾಸಗೊಳಿಸುವ ಸ್ಪರ್ಧೆಯು ಜುಲೈ 25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಆ್ಯಂಫಿಥಿಯೇಟರ್‌ನಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಕಲಾ ಶಿಕ್ಷಕರು ಹಾಗೂ ಶಾಲಾ ಶಿಕ್ಷಕರು ಭಾಗವಹಿಸಬಹುದಾಗಿದೆ. ಉಡುಪಿಯ ಸಮೃದ್ಧ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಹಾಗೂ ವಿಶಿಷ್ಟತೆಯನ್ನು ಸೃಜನಾತ್ಮಕವಾಗಿ […]
ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ನಿಂದ ರಸ್ತೆ ತಡೆ, ಪ್ರತಿಭಟನೆ

ಉಡುಪಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರದಲ್ಲಿ […]
ಉಡುಪಿ: ಜುಲೈ 25ರಂದು ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿ ಬಿಡುಗಡೆ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ್ ನಾಯಕ್ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಪುಸ್ತಕವನ್ನು […]