ಕೃಷಿ ಪ್ರಶಸ್ತಿ – ಅರ್ಜಿ ಆಹ್ವಾನ

ಉಡುಪಿ: ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಪರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ […]
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಹಿರಿಯಡ್ಕ ಹಾಗೂ ಪೆರ್ಡೂರು ವಲಯ ಸಭೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕಿನ ಹಿರಿಯಡ್ಕ ಹಾಗೂ ಪೆರ್ಡೂರು ವಲಯದ ಸಂಬಂಧಪಟ್ಟ ಎಲ್ಲಾ ಭಜನಾ ಮಂಡಳಿಗಳ ಸಮಾಲೋಚನಾ ಸಭೆಯನ್ನು ದಿನಾಂಕ . 22/07/2026ನೇ ಬುಧವಾರ ಸಾಯಂಕಾಲ 4. 30 ಗಂಟೆಗೆ ಸರಿಯಾಗಿ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಹಿರಿಯಡ್ಕದಲ್ಲಿ ನಡೆಸಲಾಯಿತು.ಈ ಸಭೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ಆಗಸ್ಟ್ ತಿಂಗಳ ದಿನಾಂಕ 2ರಂದು ಅಂಬಲಪಾಡಿಯ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ […]
ಕಾರ್ಕಳ ವಿಧಾನಸಭಾ ಕ್ಷೇತ್ರದ ಎರಡು ಸೇತುವೆಗಳ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ಬಿಡುಗಡೆ: ವಿ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ರಸ್ತೆ ಮತ್ತು ಸೇತುವೆ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಕ್ಷೇತ್ರದ ಎರಡು ಪ್ರಮುಖ ಸೇತುವೆಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಒಟ್ಟು ರೂ.5 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. 3 ಕೋಟಿ ರೂಪಾಯಿ ವೆಚ್ಚದಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ್ಲಿರುವ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ಬೀರನ್‌ಬೈಲು ಪ್ರದೇಶದ ಜನರ ಬಹು ಬೇಡಿಕೆಯಾದ ಸೇತುವೆ ಹಾಗೂ 2 ಕೋಟಿ ರೂಪಾಯಿ ವೆಚ್ಚದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರ್ಮುಂಡೆ ಪ್ರದೇಶದಲ್ಲಿ ಸೇತುವೆ […]
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ಆಚರಣೆ

ಮಣಿಪಾಲ: ಆಧುನಿಕ ಸಂತಾನೋತ್ಪತ್ತಿ ವಿಜ್ಞಾನದ ಅದ್ಭುತವನ್ನು ಸಾಮಾನ್ಯ ಜನರ ಸಮೀಪಕ್ಕೆ ತರುವ ಮನಸೆಳೆಯುವ ಹೆಜ್ಜೆಯಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು, ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ 2026ರ ಜುಲೈ 25ರ ಶನಿವಾರ ವಿಶ್ವ ಭ್ರೂಣಶಾಸ್ತ್ರಜ್ಞರ ದಿನವನ್ನು ಆಚರಿಸಲಿದೆ. “ಐವಿಎಫ್ ಪ್ರಯೋಗಾಲಯದಲ್ಲಿ ಜೀವನದ ಅದ್ಭುತವನ್ನು ಅನುಭವಿಸಿ” ಎಂಬ ಧ್ಯೇಯದಡಿಯಲ್ಲಿ ನಡೆಯಲಿರುವ ಈ ಜಾಗೃತಿ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ, ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಆವರಣದಲ್ಲಿರುವ ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ ಅಂಡ್ […]
ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ.

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್. ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ […]