ಬಿಡುಗಡೆಗೆ ಮೊದಲೇ ಅಬ್ಬರಿಸಿದ ‘ಸ್ಪೈಡರ್ ಮ್ಯಾನ್’ ಭಾರತದಲ್ಲಿ 1.55 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳ ದಾಖಲೆ ಮಾರಾಟ: ಹಾಲಿವುಡ್ ಚಿತ್ರಕ್ಕೆ ಮುಗಿಬಿದ್ದ ಭಾರತೀಯರು

ಹಾಲಿವುಡ್‌ನ ಜನಪ್ರಿಯ ಸೂಪರ್‌ಹೀರೋ ಸರಣಿಗಳಲ್ಲೊಂದು ‘Spider-Man’ ಮತ್ತೊಮ್ಮೆ ಭಾರತೀಯ ಸಿನಿಪ್ರಿಯರನ್ನು ರಂಜಿಸಲು ಸಜ್ಜಾಗಿದೆ. ಇದೇ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿರುವ ‘Spider-Man: Brand New Day’ ಚಿತ್ರದ ಮೇಲೆ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಯ ಮುನ್ನವೇ ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆಗಳತ್ತ ಸಿನಿಮಾ ದಾಪುಗಾಲು ಇಡುತ್ತಿದೆ. ಭಾರತದಲ್ಲಿ ಹಾಲಿವುಡ್ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆಯಿದ್ದು, ಅದರಲ್ಲೂ ಸ್ಪೈಡರ್‌ಮ್ಯಾನ್ ಸರಣಿಗೆ ಅಪಾರ ಅಭಿಮಾನಿ ಬಳಗವಿದೆ. ಇದೇ ಕಾರಣಕ್ಕೆ ಸಿನಿಮಾ ಬಿಡುಗಡೆಯಾಗಲು ಇನ್ನೂ ಎಂಟು ದಿನ ಬಾಕಿ ಇರುವಾಗಲೇ ದೇಶದ ವಿವಿಧ ಮಲ್ಟಿಪ್ಲೆಕ್ಸ್‌ಗಳಲ್ಲಿ […]

‘ಶಿಕ್ಷಣವೇ ಮುಂದಿನ ಟ್ರೆಂಡ್ ಆಗಬೇಕು, ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಬಗ್ಗೆ ನನ್ನ ಹೃದಯ ಮಿಡಿಯುತ್ತದೆ’ ನೀಟ್ ಪ್ರತಿಭಟನೆಗೆ ಬೆಂಬಲಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಪೋಸ್ಟ್

ದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ತಮ್ಮ ಪೋಸ್ಟ್‌ನಲ್ಲಿ, “ಇದು ಆರಂಭದಲ್ಲಿ ಅತ್ಯಂತ ಶಾಂತಿಯುತ ಪ್ರತಿಭಟನೆಯಾಗಿತ್ತು. ಆದರೆ ಅದು ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದು ನಿಜಕ್ಕೂ ನೋವುಂಟು ಮಾಡಿದೆ. ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ […]

ಉಡುಪಿ: ರಿಕ್ಷಾ ಚಾಲಕ ಆತ್ಮಹತ್ಯೆ

ಉಡುಪಿ: ಆದಿಉಡುಪಿಯ ಮಧ್ವನಗರದಲ್ಲಿ ರಿಕ್ಷಾ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಆದಿಉಡುಪಿ ರಿಕ್ಷಾ ನಿಲ್ದಾಣದ ಸದಸ್ಯ ಸುರೇಂದ್ರ ಮಧ್ವನಗರ (42) ಎಂದು ಗುರುತಿಸಲಾಗಿದೆ. ಸರಳ ಸ್ವಭಾವದವರಾಗಿದ್ದ ಸುರೇಂದ್ರ ಅವರು ಸುಮಾರು ಒಂದು ವಾರದ ಹಿಂದಷ್ಟೇ ಹೊಸ ರಿಕ್ಷಾವನ್ನು ಖರೀದಿಸಿದ್ದರು. ಬುಧವಾರ ತಡರಾತ್ರಿ ಕುಟುಂಬದವರು ಮಲಗಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸ್ ಠಾಣೆಯ ಅಧಿಕಾರಿಗಳು […]

ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪ್ರತಿಭಟನಾಕಾರರೊಂದಿಗೆ ಮಾತಾಡಲು ಕೇಂದ್ರ ಸರ್ಕಾರಕ್ಕೆ ಭಯ ಯಾಕೆ: ಅಣ್ಣಾಮಲೈ

ಚೆನ್ನೈ: ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಏಕೆ ವಿಳಂಬ ಮಾಡಿತು, ಏಕೆ ಸರಕಾರಕ್ಕೆ ಭಯ? ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಶ್ನೆ ಎತ್ತಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಣ್ಣಾಮಲೈ, “ನಾನು ಹಲವು ವರ್ಷಗಳಿಂದ ನೀಟ್ ಪರೀಕ್ಷೆಯನ್ನು ಬೆಂಬಲಿಸುವ ನಿಲುವು ಹೊಂದಿದ್ದೇನೆ. ದೇಶಾದ್ಯಂತ ವೈದ್ಯಕೀಯ ಪ್ರವೇಶ ಪ್ರಕ್ರಿಯೆಯಲ್ಲಿ ಏಕರೂಪತೆ […]

ನ್ಯಾಯಬೆಲೆ ಅಂಗಡಿಗಳ ಟೈಮಿಂಗ್ ಬದಲಾವಣೆ: ಪಡಿತರ ಪಡೆಯುವವರಿಗೆ ಇನ್ನಷ್ಟು ಅನುಕೂಲ ಅಂಗಡಿಗಳಲ್ಲಿ ಅಕ್ರಮಕ್ಕೂ ಬ್ರೇಕ್!

ಬೆಂಗಳೂರು: ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನ್ಯಾಯಬೆಲೆ ಅಂಗಡಿಗಳ ಕಾರ್ಯಾವಧಿಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಪಡಿತರ ವಿತರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹೊಸ ಆದೇಶ ಹೊರಡಿಸಿದೆ. ಈವರೆಗೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಹಾಗೂ ಸಂಜೆ 4.00 ರಿಂದ ರಾತ್ರಿ 8.00 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ, ಇನ್ಮುಂದೆ ಪ್ರತಿದಿನ ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಪಡಿತರ ವಿತರಣೆ ನಡೆಸುವಂತೆ ಆಹಾರ ಇಲಾಖೆ ಸೂಚಿಸಿದೆ. ಜುಲೈ […]