‘ನಮ್ಮ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವವರು ನೀವೇ’: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ಪ್ರಧಾನಿ ಮೋದಿ ಅವರು ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವುದಷ್ಟೇ ಅಲ್ಲ, ಅದನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಇಂದು ಘೋಷಿಸಿದ್ದಾರೆ. ಅದಕ್ಕೆ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವುದು ನೀವೇ […]