ನೇರ ಸಂದರ್ಶನ

ಉಡುಪಿ: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ, ಇಂಜಿನಿಯರಿoಗ್, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, […]

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯನ್ನು ದಹಿಸಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ […]

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮಣಿಪಾಲದಲ್ಲಿ ರಸ್ತೆಗಿಳಿದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮಣಿಪಾಲದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಮಣಿಪಾಲ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿದ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಕರಪತ್ರಗಳನ್ನು […]

ಭಾರೀ ಮಳೆ ಹಿನ್ನಲೆ: ಜು.25ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ   ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮ, ಐಟಿಐ ಕಾಲೇಜುಗಳಿಗೆ ಜುಲೈ. 25ರ ಶನಿವಾರ ರಜೆ ಘೋಷಿಸಿ  ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶಿಸಿದ್ದಾರೆ.

“ಧರ್ಮೇಂದ್ರ ಪ್ರಧಾನ್ ಒಬ್ಬ ಕ್ರಿಮಿನಲ್ ಶಿಕ್ಷಣ ಸಚಿವ” ಎಂದು ಪೆಲೆಟ್ ಗನ್ ದಾಳಿಗೊಳಗಾದ ವಿದ್ಯಾರ್ಥಿಯನ್ನು ಜನರ ಮುಂದೆ ತಂದ ರಾಹುಲ್ ಗಾಂಧಿ

ನವದೆಹಲಿ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣ ವಜಾಗೊಳಿಸಬೇಕು, ಅವರೊಬ್ಬ ಕ್ರಿಮಿನಲ್ ಶಿಕ್ಷಣ ಸಚಿವ, ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಶುಕ್ರವಾರ ಪೆಲೆಟ್ ಗನ್ ದಾಳಿಗೊಳಗಾದ ವಿದ್ಯಾರ್ಥಿಯನ್ನು ಜನರ ಮತ್ತು ಮಾಧ್ಯಮದ ಮುಂದೆ ತೋರಿಸಿದ್ದಾರೆ. ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಗಾಯಗೊಂಡಿರುವ ಸಾಹಿಲ್ ಎಂಬ ವಿದ್ಯಾರ್ಥಿಯೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ರಾಹುಲ್ ಗಾಂಧಿ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೆಲೆಟ್ […]