ಕಾರ್ಕಳ ಕ್ರೈಸ್ಟ್ ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿತ್ವ ವಿಕಸನ ತರಬೇತುದಾರಕೀರ್ತನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಅವರು “ವಿದ್ಯಾರ್ಥಿಗಳು ಹಲವಾರು ಗುರಿಗಳನ್ನು ಇಟ್ಟುಕೊಂಡು ಪ್ರಯತ್ನಪಡುವುದಕ್ಕಿಂತಒಂದೇ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ಏಕಾಗ್ರತೆ ಹಾಗೂ ಬದ್ಧತೆಯೊಂದಿಗೆ ಕಾರ್ಯಶೀಲರಾಗಬೇಕು. ನಮ್ಮಲ್ಲಿ ಅತ್ಯುತ್ತಮ ಕೌಶಲ್ಯಗಳಿದ್ದಾಗ ಅವಕಾಶಗಳುಹುಡುಕಿಕೊಂಡು ಬರುತ್ತವೆ. ಪ್ರಸ್ತುತ ಸಮಾಜದಲ್ಲಿ ಇರುವ ಅವಕಾಶಗಳಿಗೆ ತಕ್ಕಂತೆ ನಮ್ಮನ್ನು ನಾವು ರೂಪಿಸಿಕೊಳ್ಳಬೇಕು. ಸಾಧನೆಯ ದಾರಿಯಲ್ಲಿ ಸಾಗುವಾಗ ಎದುರಾಗುವ ಸೋಲುಗಳಿಗೆ ಅಳುಕದೆ ಮುಂದುವರಿಯಬೇಕು” […]

ಸರಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ಕೊಡುಗೆ ಅಪಾರ: ಯಶ್‌ಪಾಲ್ ಸುವರ್ಣ

ಉಡುಪಿ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸಾಧನೆಯಲ್ಲಿ ದಾನಿಗಳ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ತೆಂಕನಿಡಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ನೂತನ ಶೌಚಾಲಯ, ಸೈಕಲ್ ಸ್ಟ್ಯಾಂಡ್, ವಿದ್ಯಾರ್ಥಿಗಳ ಶಾಲಾ ಸಂಸತ್ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆರಂಭಿಸಲಾದ ಯಕ್ಷಗಾನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಮನವಿಯಂತೆ ಸುಮಾರು ₹4 ಲಕ್ಷ ವೆಚ್ಚದಲ್ಲಿ ನೂತನ ಶೌಚಾಲಯ ನಿರ್ಮಿಸಲಾಗಿದೆ. ಇದೇ […]

ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗಾಗಿ ಉಡುಪಿಯ ಬಡಗಬೆಟ್ಟು ಸೊಸೈಟಿಯ […]

ಉಡುಪಿ ಜಿಲ್ಲೆಯಲ್ಲಿ ಮಳೆಯ ಕೊರತೆ: ಬರ ನಿರ್ವಹಣೆಗೆ ಈಗಲೇ ಸಿದ್ಧತೆ ಅಗತ್ಯ

ಉಡುಪಿ: ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಆತಂಕಕ್ಕೆ ಕಾರಣವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾದರೂ ಅಪಾರ ಪ್ರಮಾಣದ ಸಿಹಿನೀರು ನದಿಗಳ ಮೂಲಕ ಸಮುದ್ರ ಸೇರುತ್ತಿದೆ. ಸಮುದ್ರ ಸೇರಿದ ಬಳಿಕ ನದಿಯ ನೀರು ಉಪ್ಪುನೀರಾಗಿ ಪರಿವರ್ತನೆಯಾಗುವುದರಿಂದ ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಅಯೋಗ್ಯವಾಗುತ್ತದೆ. ಹೀಗಾಗಿ ನದಿಗಳಲ್ಲಿ ನಿರ್ಮಿಸಲಾಗಿರುವ […]

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ

ಉಡುಪಿ: ಉಡುಪಿ ಸಮೀಪದ ಹಿರಿಯಡ್ಕದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರು ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ ಮತ್ತು ಪೂಜಾ ವಿಧಿವಿಧಾನಗಳು ವೇದಘೋಷ ಹಾಗೂ ಧಾರ್ಮಿಕ ಸಂಪ್ರದಾಯಗಳಂತೆ ನೆರವೇರಿದವು. ಈ ಸಂದರ್ಭದಲ್ಲಿ ಮಠದ ಅರ್ಚಕರು, ಶಿಷ್ಯವೃಂದ ಹಾಗೂ ಭಕ್ತರು ಉಪಸ್ಥಿತರಿದ್ದು, ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ […]