ಗ್ರಾಹಕರಿಗೆ ಮತ್ತೊಂದು ಶಾಕ್; KMF ಹಾಲಿನ ಉತ್ಪನ್ನಗಳ ಬೆಲೆ ಏರಿಕೆ.!

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದೆ. ತನ್ನ ಜನಪ್ರಿಯ ‘ನಂದಿನಿ’ ಬ್ರ್ಯಾಂಡ್‌ನ ಬೆಣ್ಣೆ ಮತ್ತು ತುಪ್ಪದ ದರವನ್ನು ದಿಢೀರ್ ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದ ಜಾರಿಗೆ ಬರಲಿವೆ. ತುಪ್ಪದ ದರವನ್ನು ಪ್ರತಿ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹಾಗೆಯೇ ಬೆಣ್ಣೆಯ ಬೆಲೆಯನ್ನು ಪ್ರತಿ ಕೆಜಿಗೆ 22 ರೂ. ಏರಿಕೆ ಮಾಡಲಾಗಿದೆ. ಈ ನೂತನ ದರಗಳು ಜುಲೈ 24 ರಿಂದ (ಶುಕ್ರವಾರ) ಅಧಿಕೃತವಾಗಿ ಜಾರಿಗೆ ಬರಲಿವೆ. ರಾಜ್ಯಾದ್ಯಂತ […]

ಫುಡ್ ಡೆಲಿವರಿ ಕ್ಷೇತ್ರಕ್ಕೂ ಎಂಟ್ರಿ ಕೊಡಲಿದೆ Flipkart, ಬೆಂಗಳೂರಿನಲ್ಲಿಯೇ ಟ್ರಯಲ್ ಶುರು!ಜೊಮ್ಯಾಟೊ, ಸ್ವಿಗ್ಲಿಗೆ ಟಕ್ಕರ್ ಕೊಡಲು ಪ್ಲಾನ್ ರೆಡಿ

ವಾಲ್ಮಾರ್ಟ್ ಒಡೆತನದ ಇ-ಕಾಮರ್ಸ್ ದಿಗ್ಗಜ ಫ್ಲಿಪ್ಕಾರ್ಟ್ ಶೀಘ್ರದಲ್ಲೇ ಫುಡ್ ಡೆಲಿವರಿ ಕ್ಷೇತ್ರಕ್ಕೆ ಕಾಲಿಡಲು ಸಜ್ಜಾಗಿದೆ. ವರದಿಗಳ ಪ್ರಕಾರ, ಮುಂದಿನ 30 ದಿನಗಳಲ್ಲಿ ಹೊಸ ಸೇವೆಯನ್ನು ಆರಂಭಿಸುವ ಉದ್ದೇಶ ಹೊಂದಿರುವ ಸಂಸ್ಥೆ, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಸೇವೆಯನ್ನು ಪರಿಚಯಿಸಲು ಯೋಜನೆ ರೂಪಿಸಿದೆ. ಫ್ಲಿಪ್ಕಾರ್ಟ್ ಗ್ರೂಪ್ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ ಅವರ ಪ್ರಕಾರ, ಇ-ಕಾಮರ್ಸ್ ವೇದಿಕೆಯಲ್ಲಿ ಆಹಾರ ವಿತರಣೆಯೂ ಪ್ರಮುಖ ವಿಸ್ತರಣೆಯ ಭಾಗವಾಗಿದೆ. ಆರಂಭದಲ್ಲಿ ಪೈಲಟ್ ಯೋಜನೆ ಜಾರಿಗೊಳಿಸಿ, ಗ್ರಾಹಕರ ಪ್ರತಿಕ್ರಿಯೆ ಆಧರಿಸಿ ಬಳಿಕ ದೇಶಾದ್ಯಂತ ಸೇವೆಯನ್ನು ವಿಸ್ತರಿಸುವ […]

ನೀಟ್ ಪ್ರತಿಭಟನೆಯ ಬಿಸಿ:ಇಂದು ರಿಲೀಸ್ ಆಗಬೇಕಿದ್ದ ‘ರಾಮಾಯಣ’ಟ್ರೇಲರ್ ಬಿಡುಗಡೆ ಮುಂದಕ್ಕೆ

ನವದೆಹಲಿ: ನಟ ಯಶ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಯನ್ನು ಚಿತ್ರತಂಡ ದಿಢೀರ್ ಮುಂದೂಡಿದೆ. ಶುಕ್ರವಾರ ದೆಹಲಿಯ ಭಾರತ್ ಮಂಟಪದಲ್ಲಿ ಮಾಧ್ಯಮಗಳಿಗೆ ವಿಶೇಷ ಪ್ರೀಮಿಯರ್ ಪ್ರದರ್ಶನದ ಬಳಿಕ ಟ್ರೇಲರ್ ಅನ್ನು ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಜನೆ ಇತ್ತು. ಆದರೆ, ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಚಿತ್ರತಂಡ ಈ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ಸೇರಿದಂತೆ […]

ಶಿರ್ವದಲ್ಲಿ ಅಪಾಯಕಾರಿ ರಸ್ತೆ ಗುಂಡಿ ಮುಚ್ಚಿ ಮಾದರಿಯಾದ ಸ್ಥಳೀಯ ಯುವಕರು

ಉಡುಪಿ: ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ಮುಖ್ಯ ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತವಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ. ರಸ್ತೆಯಲ್ಲಿದ್ದ ಗುಂಡಿಯಿಂದ ವಾಹನ ಸವಾರರಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಯುವಕರು ಸ್ವಂತ ಖರ್ಚಿನಲ್ಲಿ ಅಗತ್ಯ ಸಾಮಗ್ರಿಗಳನ್ನು ಬಳಸಿ ಗುಂಡಿಯನ್ನು ಮುಚ್ಚಿದರು. ಈ ಕಾರ್ಯದಿಂದ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರು ಯುವಕರ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದ್ದಾರೆ. ಸ್ಥಳೀಯರ ಈ […]

26 ದಿನಗಳ ಬಳಿಕ ಉಪವಾಸ ಅಂತ್ಯಗೊಳಿಸಿದ ಸೋನಮ್‌ ವಾಂಗ್ಚುಕ್‌; ಸರ್ಕಾರದ ಭರವಸೆ ಏನು?

ನವದೆಹಲಿ: ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳು ಹಾಗೂ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಅವರು 26 ದಿನಗಳ ಬಳಿಕ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಜೂನ್‌ 28ರಿಂದ ಉಪವಾಸ ನಡೆಸುತ್ತಿದ್ದ ವಾಂಗ್ಚುಕ್‌ ಅವರು ಸದ್ಯ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮಧ್ಯರಾತ್ರಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್‌ ಹಾಗೂ ಲಡಾಖ್‌ ಅಪೆಕ್ಸ್‌ ಬಾಡಿಯ […]