ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ

ಮಂಗಳೂರು: ನಗರದ ಲಾಲ್‌ಬಾಗ್‌ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ ಏಕಾಏಕಿ ವಿಕ್ಕಿ ಬಪ್ಪಲ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ದಾಳಿಯಲ್ಲಿ ಕುತ್ತಿಗೆ ಹಾಗೂ ಬೆನ್ನಿನ ಹಿಂಭಾಗಕ್ಕೆ ಗಾಯಗಳಾಗಿದ್ದು, ಗಾಯಾಳುವನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜನನಿಬಿಡ ಪ್ರದೇಶದಲ್ಲೇ ನಡೆದ ಈ ದಾಳಿಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. […]

ಉಮರ್ ಖಾಲಿದ್ ಪರ ಘೋಷಣೆ ವಿಚಾರ: ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ- ಸಂಸದ ಕೋಟ ಆರೋಪ

ಉಡುಪಿ: ಉಮರ್ ಖಾಲಿದ್ ಪರ ಘೋಷಣೆಗಳು ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶನಿವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿವೆ. ಉಮರ್ ಖಾಲಿದ್ ಒಬ್ಬ ಭಯೋತ್ಪಾದಕ. ಸುಪ್ರೀಂ ಕೋರ್ಟ್ ಕೂಡ ಜಾಮೀನು ನೀಡಿದರೆ ಅನಾಹುತ ಸಂಭವಿಸಬಹುದು ಎಂಬ ಕಾರಣದಿಂದ ಜಾಮೀನು ನೀಡಿಲ್ಲ. ಅಫ್ಜಲ್ ಗುರು ಪರವೂ ಹೋರಾಟ […]

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಪ್ರಧಾನ್‌, ಕಳೆದ ಹತ್ತು ದಿನಗಳಿಂದ ಏನೆಲ್ಲ ನಡೆಯಿತೋ ಅದನ್ನು ಕಂಡು ಬೇಸರವಾಗಿದೆ ಎಂದಿದ್ದಾರೆ. ‘ಮೊದಲ ದಿನದಿಂದಲೇ ನಾನು ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ಈ ಸವಾಲಿನ ಪರಿಸ್ಥಿತಿಯಿಂದ ಹಿಂದೆ ಸರಿದಿಲ್ಲ’ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ‘ಜಂತರ್‌ ಮಂತರ್‌ ಹಾಗೂ ದೇಶದಾದ್ಯಂತ ದೇಶ ವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯುವಂತಾಗಬಾರದು’ ಎಂದೂ ಹೇಳಿದ್ದಾರೆ. ಮೇ 3ರಂದು ನಡೆದಿದ್ದ […]

ಕೊನೆಗೂ ರಾಜೀನಾಮೆ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್:ಯುವ ಸಮೂಹದ ಬೇಡಿಕೆಗಳಿಗೆ ಮಂಡಿಯೂರಿದ ಕೇಂದ್ರ

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ದೊಡ್ಡ ಬೇಡಿಕೆಗೆ ಕೇಂದ್ರ ಸರಕಾರ ಮಂಡಿಯೂರಿದೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ […]

ಇನ್‌ಸ್ಟಾಗ್ರಾಮ್’ನಲ್ಲಿ ಮೋದಿ ರೀಲ್ಸ್ ವಿಡಿಯೋ ಭಾರೀ ವೈರಲ್, ಯುವ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಗೆ ಕೇಂದ್ರ ಸಚಿವ ಸಂಪುಟವು ಅತ್ಯಂತ ಕಠಿಣವಾದ ಮಸೂದೆಗೆ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ತಮ್ಮ ಮೊದಲ ವಿಡಿಯೋ ಸಂದೇಶಕ್ಕೆ ದೇಶದ ಯುವಜನತೆಯಿಂದ ವ್ಯಕ್ತವಾದ ರಚನಾತ್ಮಕ ಸಲಹೆಗಳು ಮತ್ತು ಪ್ರತಿಕ್ರಿಯೆಗಳಿಗಾಗಿ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳುವ ಕುರಿತು ಪ್ರಧಾನಿ ಮೋದಿ ಗುರುವಾರ ತಡರಾತ್ರಿ ಹಂಚಿಕೊಂಡಿದ್ದ ಮೊದಲ ಇನ್‌ಸ್ಟಾಗ್ರಾಮ್ ರೀಲ್ಸ್ ವಿಡಿಯೋ […]