‘ಟಾಕ್ಸಿಕ್’ ಹೊಸ ಪೋಸ್ಟರ್ ರಿಲೀಸ್, ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್,ರಿಲೀಸ್ ಗೆ ಒಂದು ತಿಂಗಳು ಇರುವಾಗಲೇ ಬಂತು ಥ್ರಿಲ್ಲಿಂಗ್ ಪೋಸ್ಟರ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆಗೆ ಕೌಂಟ್‌ಡೌನ್ ಆರಂಭವಾಗಿದೆ. ಚಿತ್ರ ಬಿಡುಗಡೆಯಾಗಲು ಕೇವಲ ಒಂದು ತಿಂಗಳು ಬಾಕಿ ಇರುವ ಸಂದರ್ಭದಲ್ಲಿ, ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಯಶ್ ಅವರ ಸ್ಟೈಲಿಷ್ ಹಾಗೂ ರಕ್ತಸಿಕ್ತ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ. ‘Begins with a Bang’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಬಿಡುಗಡೆಯಾದ ಹೊಸ ಪೋಸ್ಟರ್‌ನಲ್ಲಿ ಯಶ್ ಅವರ ಕೈಗಳಲ್ಲಿ ರಕ್ತ ಮೆತ್ತಿಕೊಂಡಿದ್ದು, ಕೈಯಲ್ಲಿ ಸಿಗರೇಟ್ ಹಿಡಿದಿರುವ ವಿಭಿನ್ನ ಗೆಟಪ್ ಕುತೂಹಲ ಹೆಚ್ಚಿಸಿದೆ. ಪೋಸ್ಟರ್‌ನಲ್ಲಿರುವ ದೃಶ್ಯ, […]
ಡಾರ್ಕ್ ಚಾಕ್ಲೇಟ್ ಎಂದು ಲೈಟಾಗಿ ತಗೋಬೇಡಿ, ಒಂದು ಪೀಸ್ ಡಾರ್ಕ್ ಚಾಕ್ಲೇಟ್ ತಿಂದ್ರೂ ಆರೋಗ್ಯಕ್ಕೆ ಎಷ್ಟೊಂದೆಲ್ಲಾ ಲಾಭವಿದೆ ಗೊತ್ತೆ!

ಚಾಕೊಲೇಟ್ ಎಂದರೆ ಮಕ್ಕಳು ಮಾತ್ರವಲ್ಲ, ಯುವಕರು ಮತ್ತು ಹಿರಿಯರಿಗೂ ಅಚ್ಚುಮೆಚ್ಚು. ಅದರಲ್ಲೂ ಡಾರ್ಕ್ ಚಾಕೊಲೇಟ್ ಆರೋಗ್ಯಕ್ಕೆ ಉತ್ತಮ ಎನ್ನುವ ಮಾತು ಸಾಮಾನ್ಯವಾಗಿದೆ. ಆದರೆ ಯಾವುದೇ ಡಾರ್ಕ್ ಚಾಕೊಲೇಟ್ ಅಲ್ಲ, ಕನಿಷ್ಠ 70% ಅಥವಾ ಅದಕ್ಕಿಂತ ಹೆಚ್ಚು ಕೋಕೋ ಇರುವ ಡಾರ್ಕ್ ಚಾಕೊಲೇಟ್ ಅನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ ಎಂದು ಅಧ್ಯಯನವೊಂದು ತಿಳಿಸಿದೆ. ಮುಂಬೈನ ಡಾ. ಡಿ.ವೈ. ಪಾಟೀಲ್ ಮೆಡಿಕಲ್ ಕಾಲೇಜಿನ ಡಾ. ಅಮಿತಾ ವರ್ಮಾ ಮತ್ತು ಡಾ. ಅರ್ಚನಾ ಕಾದಮ್ ನಡೆಸಿದ ಅಧ್ಯಯನದ […]
2028ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳುವ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ದಿವಂಗತ ಕೆ.ಆರ್.ಪೇಟೆ ಕೃಷ್ಣ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಇನ್ನೂ 10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕು ಎಂದು ಮನವಿ ಮಾಡಿದರೂ, “2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ಮೂಲಕ ತಮ್ಮ ರಾಜಕೀಯ ನಿವೃತ್ತಿಯ ಕುರಿತು ಅಧಿಕೃತ […]
‘ಇದು ಕೇವಲ ಆರಂಭ ಅಷ್ಟೇ’ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೀಗಂದಿದ್ಯಾಕೆ?

ನವದೆಹಲಿ: ಜಂತರ್ ಮಂತರ್‌ನಲ್ಲಿ 37 ದಿನಗಳ ಕಾಲ ನಡೆದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಿಡಿಯೋ ಸಂದೇಶದ ಮೂಲಕ ಬೆಂಬಲಿಗರು ಹಾಗೂ ಟೀಕಾಕಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಜೊತೆಗೆ, ಪಕ್ಷದ ಹೋರಾಟ ಇನ್ನಷ್ಟೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಮುನ್ನಡೆಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆ […]
ಪೆರಂಪಳ್ಳಿ: ಮನೆ ಅಂಗಳಕ್ಕೆ ನುಗ್ಗಿದ ಈಚರ್ ಲಾರಿ- ತಪ್ಪಿದ ಭಾರೀ ಅನಾಹುತ!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಕಂಬ, ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳಕ್ಕೆ ನುಗ್ಗಿದ ಘಟನೆ ಶನಿವಾರ ರಾತ್ರಿ ಉಡುಪಿಯ ಪೆರಂಪಳ್ಳಿ ಮೀನು ಮಾರುಕಟ್ಟೆ ಸಮೀಪ ಸಂಭವಿಸಿದೆ. ಮಣಿಪಾಲದಿಂದ ಪೆರಂಪಳ್ಳಿ ಮಾರ್ಗವಾಗಿ ಸಾಗುತ್ತಿದ್ದ ಲಾರಿಯು ರಾತ್ರಿ ಸುಮಾರು 9 ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಮೊದಲು ಟ್ರಾನ್ಸ್‌ಫಾರ್ಮರ್ ಕಂಬ ಹಾಗೂ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಳಿಕ ರವಿ ಪೂಜಾರಿ ಅವರಿಗೆ ಸೇರಿದ […]