ಯುವಜನತೆಯಲ್ಲಿ ನಾಯಕತ್ವ ಗುಣ ಹಾಗೂ ಸಾಮಾಜಿಕ ಹೊಣೆಗಾರಿಕೆಗಾಗಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಪ್ರತೀಕ್ ಬಾಯಲ್

ಉಡುಪಿ: ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ, ಸಾಮರಸ್ಯ, ಕ್ರೀಡಾ ಮನೋಭಾವ ಹಾಗೂ ಸಮುದಾಯ ಸೇವೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನ ಸ್ಥಾಪಿಸಲು ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾಹಿತಿ ನೀಡಿದರು. ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ತಹಸೀಲ್ದಾರರು, ನಗರಸಭೆ, ಪುರಸಭೆಗಳ ಆಯುಕ್ತರು, ಪಿಡಿಒಗಳ […]

ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕಲ್ಯಾಣಕ್ಕಾಗಿ ಸರಕಾರ ತಂದಿರುವ ಯೊಜನೆಗಳನ್ನು ಅರ್ಹರಿಗೆ ತಲುಪಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸರಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕಲ್ಯಾಣ ಅಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು, ವಿಶೇಷ ಕಾಯ್ದೆಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತ ರಕ್ಷಣಾ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]

ಕೆಪಿಎಸ್ ಸಿ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಒತ್ತಾಯಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ಸಿ ಅಧ್ಯಕ್ಷರೇ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿದ್ದು, ನೇಮಕಾತಿಗೆ ಕೋಟ್ಯಂತರ ರೂಪಾಯಿ ಹಣ ಪಡೆದಿರುವ ಕುರಿತು ಧ್ವನಿಮುದ್ರಿಕೆಗಳು ಬಹಿರಂಗವಾಗಿವೆ ಎಂದು ಆರೋಪಿಸಿದರು. ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರೂ, ಸರ್ಕಾರ […]

ಪಡುಬಿದ್ರಿ: ವ್ಯಕ್ತಿ ನಾಪತ್ತೆ

ಉಡುಪಿ ಜುಲೈ 28: ಉಡುಪಿ ತಾಲೂಕಿನ ಪಡುಬಿದ್ರಿ ನಾಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ರವೀಂದ್ರ(35) ಎನ್ನುವವರು ಗಾರೆ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮಾಡುತ್ತಿದ್ದ ಅರೆಹಳ್ಳಿಯಿಂದ ಪಡುಬಿದ್ರೆಗೆ ವಾಪಾಸು ಬಂದಿದ್ದು ಜುಲೈ 15 ರಂದು ಮಧ್ಯಾಹ್ನ 1.00 ಗಂಟೆಗೆ ಪಡುಬಿದ್ರಿ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಾಸಾಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ, ತುಳು, ತಮಿಳು ಭಾಷೆ ಮಾತನಾಡುತ್ತಾರೆ. […]

ಉಡುಪಿ: ಯುವತಿ ನಾಪತ್ತೆ

ಉಡುಪಿ, ಜುಲೈ 28: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ವಡಭಾಂಡೇಶ್ವರ ದೇವಸ್ಥಾನ ಬಳಿ ವಾಸವಾಗಿದ್ದ ದೀಕ್ಷಾ(20) ಎಂಬ ಯುವತಿಯು ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಜುಲೈ 21 ರಂದು ಕೆಲಸ ಮಾಡಿಕೊಂಡಿದ್ದ ಬೇಕರಿಯಲ್ಲಿ ಶೌಚಾಲಯಕ್ಕೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ಕೆಲಸಕ್ಕೂ ಮರಳಿ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣಾ ದೂ.ಸಂ: 0820-2537999, ಮಲ್ಪೆ ಪಿ.ಎಸ್.ಐ […]