‘Gen-Z ಎಂದರೆ ಜನರೇಷನ್ ಗಟರ್’ ಎಂದ ಕಂಗನಾಗೆ ಕ್ಯಾಕರಿಸಿ ಉಗಿದ ನೆಟ್ಟಿಗರು, ರಾಜಕೀಯ ಮಾಡಿದ ನಟಿಗೆ Gen-Z ಗಳಿಂದಲೇ ಕ್ಲಾಸ್

ಮುಂಬೈ (ಜು. 28): ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ಹೇಳಿಕೆಯಿಂದ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಇತ್ತೀಚಿನ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, Gen-Z ಯುವಜನತೆಯನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು ನೆಟ್ಟಿಗರು ರಾಜಕೀಯ ಮಾಡಿದ ನಟಿಗೆ ಕ್ಯಾಕರಿಸಿ ಉಗಿದಿದ್ದಾರೆ. ದೆಹಲಿ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕಂಗನಾ, ಪ್ರತಿಭಟನಾಕಾರರು ಬಳಸಿದ ಭಾಷೆ, ಪೋಸ್ಟರ್‌ಗಳು ಹಾಗೂ […]

ಎಐ AI ಯುಗದಲ್ಲಿ ಯಶಸ್ವಿಯಾಗಲು ಮುಕ್ತ ಮನಸ್ಸು ಪ್ರಮುಖ: ಎಲಿಕ್ಸಿರ್ 2026 ರಲ್ಲಿ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಉಪಕುಲಪತಿ

ಬೆಂಗಳೂರು: ಭವಿಷ್ಯವು ಕುತೂಹಲ ಮತ್ತು ಹೊಂದಿಕೊಳ್ಳುವಿಕೆ ಉಳ್ಳವರದ್ದಾಗಿದೆ ಎಂದು ಒತ್ತಿಹೇಳಿದ ಬೆಂಗಳೂರಿನ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂದನೀಯ ಫಾದರ್ ಡಾ. ವಿಕ್ಟರ್ ಲೋಬೋ, ಸೋಮವಾರ ನಡೆದ ವಿಶ್ವವಿದ್ಯಾಲಯದ ವಾರ್ಷಿಕ ‘ಓಪನ್ ಡೇ’ (Open Day) ಕಾರ್ಯಕ್ರಮವಾದ ‘ಎಲಿಕ್ಸಿರ್ 2026’ ರಲ್ಲಿ (Elixir 2026) ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಮುಕ್ತ ಮನಸ್ಸನ್ನು ಬೆಳೆಸಿಕೊಳ್ಳುವಂತೆ ಒತ್ತಾಯಿಸಿದರು. ಭವಿಷ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಸಂದರ್ಶಕರನ್ನು ಉದ್ದೇಶಿಸಿ ಮಾತನಾಡಿದ ಫಾದರ್ ಲೋಬೋ, ಕೃತಕ ಬುದ್ಧಿಮತ್ತೆ (AI) ಮತ್ತು ಆಟೊಮೇಷನ್ ಶೈಕ್ಷಣಿಕ […]

ಪ್ರಕಾಶ್ ರಾಜ್ ಅವರೇ ಅಧಿಕ‌ ಪ್ರಸಂಗ ನಿಲ್ಲಿಸಿ, ಇಲ್ಲದಿದ್ದರೆ ಮೀನುಗಳಿಗೆ ಆಹಾರವಾಗಬಹುದು- ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ

ಉಡುಪಿ: ‘ಕಾಕ್ರೋಚ್’ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ‘ಕಾಕ್ರೋಚ್’ ಪಾರ್ಟಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ವೇಳೆ ವಿಪಕ್ಷ ನಾಯಕರ ‘ಜಿರಲೆ’ ಭಾವಚಿತ್ರಕ್ಕೆ ರಾಸಾಯನಿಕ ಸಿಂಪಡಿಸಿ, ಕಲ್ಲಿನಿಂದ ಜಜ್ಜುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ […]

ಫೇಸ್‌ಬುಕ್ ಸ್ನೇಹ ನಂಬಿದ್ರೆ ಹೀಗೂ ಆಗುತ್ತೆ! ಯು.ಕೆ ಯಲ್ಲಿದ್ದೇನೆ, ಫ್ರೆಂಡ್ಸ್ ಆಗಿರೋಣ ಎಂದು ನಂಬಿಸಿ ಮಹಿಳೆಯಿಂದ ₹1.75 ದೋಚಿದ ಸೈಬರ್ ಕಳ್ಳ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗುವ ಅಪರಿಚಿತರನ್ನು ಅತಿಯಾಗಿ ನಂಬಿದರೆ ಎಂತಹ ದುಬಾರಿ ಬೆಲೆ ತೆರಬೇಕಾಗಬಹುದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದಿರುವ ಈ ಘಟನೆ ಮತ್ತೊಂದು ಎಚ್ಚರಿಕೆಯ ಗಂಟೆಯಾಗಿದೆ. ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನನ್ನು ನಂಬಿದ ವಿಚ್ಛೇದಿತ ಮಹಿಳೆ, ಉಡುಗೊರೆ ಹಾಗೂ ಪ್ರೀತಿಯ ನಾಟಕಕ್ಕೆ ಮರುಳಾಗಿ ಬರೋಬ್ಬರಿ ₹1.75 ಕೋಟಿ ಕಳೆದುಕೊಂಡಿದ್ದಾರೆ. ಯಶವಂತಪುರ ನಿವಾಸಿಯಾಗಿರುವ ಮಹಿಳೆಗೆ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೊಬ್ಬ ಪರಿಚಯವಾಗಿದ್ದು, ತಾನು ಯುನೈಟೆಡ್ ಕಿಂಗ್‌ಡಮ್ (ಯುಕೆ)ನಲ್ಲಿ ಉದ್ಯೋಗದಲ್ಲಿದ್ದೇನೆ ಎಂದು ಹೇಳಿ ಸ್ನೇಹ ಬೆಳೆಸಿದ್ದಾನೆ. ಬಳಿಕ ಇಬ್ಬರೂ ವಾಟ್ಸಾಪ್‌ನಲ್ಲಿ ನಿರಂತರ ಸಂಪರ್ಕದಲ್ಲಿದ್ದು, […]

ಕಾಪು: ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ

ಉಡುಪಿ: ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊತ್ತೇಸರರಾಗಿ ಸೇವೆ ಸಲ್ಲಿಸಿದ್ದರು. ಕಾಪುವಿನ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಉದ್ಯಾವರದ ರೇಷ್ಮಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರಾಗಿದ್ದ […]