ಮಣ್ಣಿಲ್ಲದೇ ನಿಮ್ಮ ಮನೆಯೊಳಗೇ, ಬಾಲ್ಕನಿ, ಟೆರೇಸ್ ಗಳಲ್ಲಿ ಗಿಡ ಬೆಳೆಸಬಹುದು! ಸುಲಭ ವಿಧಾನ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ತರಕಾರಿ, ಹಣ್ಣುಗಳ ಬೆಲೆ ಏರಿಕೆಯಾಗುತ್ತಿದೆ ಮಾತ್ರವಲ್ಲದೇ ರಾಸಾಯನಿಕಗಳ ಬಳಕೆ ಅತಿಯಾಗುತ್ತಿದೆ. ಹಾಗಾಗಿ ಪೇಟೆಗಳಲ್ಲೂ ಮನೆಯ ಸುತ್ತಮುತ್ತ ಜಾಗ ಇಲ್ಲದಿದ್ದರೂ, ಬಾಲ್ಕನಿ, ಟೆರೇಸ್ ಗಾರ್ಡನಿಂಗ್ ಕಾನ್ಸೆಪ್ಟ್ ಹೆಚ್ಚಾಗುತ್ತಿದೆ. ಆದರೆ ಮಣ್ಣು ಇಲ್ಲದೇ ಅಥವಾ ಕಡಿಮೆ ಮಣ್ಣಿನ ಬಳಕೆಯಿಂದ ಗಿಡ ಬೆಳಸಲು ಸಾಧ್ಯವಿದೆ. ಮಣ್ಣಿಗೆ ಪರ್ಯಾಯವಾಗಿ ಅಥವಾ ಮಣ್ಣಿನೊಂದಿಗೆ ಮಿಶ್ರಣವಾಗಿ ಬಳಸಬಹುದಾದ ಕೋಕೋಪೀಟ್, ಗಿಡಗಳ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗಿದೆ. ವಿಶೇಷವಾಗಿ ಕಡಿಮೆ ಜಾಗದಲ್ಲಿ ಗಿಡಗಳನ್ನು ಬೆಳೆಸುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಕೋಕೋಪೀಟ್ ಎಂದರೇನು? ತೆಂಗಿನಕಾಯಿಯ ಸಿಪ್ಪೆಯಿಂದ ನಾರು […]
ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಶಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರೆರಿ ಆ್ಯಂಡ್ ಇನ್ಫಾರ್ಮೇಶನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸಿಕ್ಸ್, ಕೆಮಿಸ್ಟ್ರಿ, ಎನ್ವಿರಾನ್ಮೆಂಟ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮೆಟೀರಿಯಲ್ ಸೈನ್ಸ್/ ಪಿ.ಜಿ ಡಿಪ್ಲೊಮಾ ಇನ್ ಮೆಟೀರಿಯಲ್ ಸೈನ್ಸ್, ಬಾಟನಿ, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ, ಫುಡ್ ಸೈನ್ಸ್ ಆ್ಯಂಡ್ ನ್ಯೂಟ್ರಿಷಿಯನ್, […]
ಮಣಿಪಾಲ: ಜುಲೈ 29 ರಂದು ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಉಚಿತ ಔಷಧೀಯ ಸಸ್ಯಗಳ ವಿತರಣಾ ಕಾರ್ಯಕ್ರಮ

ಉಡುಪಿ: ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಉಚಿತ ಔಷಧೀಯ ಸಸ್ಯಗಳ ವಿತರಣಾ ಕಾರ್ಯಕ್ರಮವು ಜುಲೈ 29 ರಂದು ಗುರುಪೂರ್ಣಿಮೆ ಹಾಗೂ ವನಮಹೋತ್ಸವ ಸಪ್ತಾಹದ ಅಂಗವಾಗಿ ಪ್ರತಿ ವರ್ಷದಂತೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಆಸಕ್ತ ಸಾರ್ವಜನಿಕರಿಗೆ ವಿವಿಧ ಜಾತಿಯ ಔಷಧೀಯ ಗುಣಗಳುಳ್ಳ ಮರ, ಗಿಡ, ಬಳ್ಳಿಗಳ ಸಸಿಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟನೆ ತಿಳಿಸಿದೆ. ಅಂದು ಮುಂಜಾನೆ 9:30 ರಿಂದ 4 ಗಂಟೆಯವರೆಗೆ ಪ್ರತಿ ಕುಟುಂಬಕ್ಕೆ ವಿವಿಧ ಜಾತಿಯ ನಾಲ್ಕು ಗಿಡಗಳನ್ನು […]
ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಜು.29ಕ್ಕೆ ಉದ್ಘಾಟನೆ

ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಜುಲೈ 29ರಂದು ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿದಿಯೂರು ಉದಯಕುಮಾರ್ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3.30ಕ್ಕೆ ಭದ್ರತಾ ಕೊಠಡಿ ಹಾಗೂ ಕ್ಯಾಶ್ ಕೌಂಟರ್ ಉದ್ಘಾಟನೆ ನಡೆಯಲಿದ್ದು, ಸಂಜೆ 4.30ಕ್ಕೆ ವೀರಭದ್ರ ಸಭಾಭವನದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ ಎಂದರು. […]
ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೊತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentServichನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, […]