ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಷನ್ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಟಾನ ಮಾಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಉಡುಪಿ: ಸರಕಾರ ಹೆಚ್.ಐ.ವಿ ಸೋಂಕಿನ ಬಗ್ಗೆ ಅರಿವು ಮೂಡಿಸುವುದು ಹಾಗೂ ಹೆಚ್.ಐ.ವಿ ಸೋಂಕಿನ ಬಗ್ಗೆ ತಿಳಿದಿಲ್ಲದ ಜನರನ್ನು ಗುರುತಿಸಿ, ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಷನ್ ಅಭಿಯಾನವನ್ನು ಆರಂಭಿಸಿದ್ದು, ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿ ಸಭಾಂಗಣದಲ್ಲಿ, “ಜಿಲ್ಲಾ ಫಸ್ಟ್ 95 ಸಮಿತಿ” ಹಾಗೂ “ಜಿಲ್ಲಾ ಜಂಟಿ ಕಾರ್ಯಪಡೆ ಸಭೆಯ ಅದ್ಯಕ್ಷತೆ […]
ಹಡಪದ ಅಪ್ಪಣ್ಣರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ರವರು, ಅಂದಿನ ಕಾಲದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಶರಣರಾಗಿದ್ದರು. ಅವರ ವಚನಗಳು ಹಾಗೂ ಚಿಂತನೆಗಳು ಇಂದಿಗೂ ಮನುಕುಲದ ಉದ್ಧಾರಕ್ಕೆ ದಾರಿದೀಪವಾಗಿದೆ ಎಂದು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ […]
ಶಿರಿಯಾರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಉಡುಪಿ: ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಪ್ರದೇಶದಿಂದ ಆಗಾಗ ನಾಡಿನತ್ತ ಬರುತ್ತಿರುವ ಕಾಡುಕೋಣಗಳು ಕೃಷಿ ಬೆಳೆಗಳಿಗೆ ಹಾನಿ ಉಂಟುಮಾಡುತ್ತಿವೆ. ಈ ಬಾರಿ ಹಗಲು ಹೊತ್ತಿನಲ್ಲೇ ಕಾಡುಕೋಣಗಳ ಹಿಂಡು ಗ್ರಾಮದಲ್ಲಿ ನಿರ್ಭಯವಾಗಿ ಸಂಚರಿಸಿದ್ದು, ಸ್ಥಳೀಯರು ಮೊಬೈಲ್‌ಗಳಲ್ಲಿ ಅದರ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಕಾಡುಕೋಣಗಳ ನಿರಂತರ ಹಾವಳಿಯಿಂದ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗುವ ಭೀತಿ ಎದುರಾಗಿದ್ದು, ಸಮಸ್ಯೆ […]
‘ವಾರಕ್ಕೆ 70 ಗಂಟೆ ಕೆಲಸ ಮಾಡಿ’ ಸೂತ್ರ ಹೇಳಿಕೆ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಇನ್ಫೋಸಿಸ್‌ಗೆ ₹1.9 ಕೋಟಿ ದಂಡ! ಕಾರ್ಮಿಕ ಕಾನೂನು ಉಲ್ಲಂಘನೆ ಆರೋಪ

ನವದೆಹಲಿ: ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡುವಂತೆ ಯುವಜನತೆಗೆ ಸಲಹೆ ನೀಡಿ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರ ಹೇಳಿಕೆ ಮತ್ತೆ ಸುದ್ದಿಯಲ್ಲಿದೆ. ಈ ನಡುವೆ, ಫ್ರಾನ್ಸ್‌ನಲ್ಲಿ ಕಾರ್ಮಿಕ ಕಾನೂನು ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಇನ್ಫೋಸಿಸ್‌ಗೆ 1,75,000 ಯುರೋ (ಸುಮಾರು ₹1.9 ಕೋಟಿ) ದಂಡ ವಿಧಿಸಲಾಗಿದೆ. ಫ್ರಾನ್ಸ್‌ನ ಕಾರ್ಮಿಕ ನಿಯಮಗಳಿಗೆ ಅನುಗುಣವಾಗಿರದ ಉದ್ಯೋಗಿಗಳ ಕೆಲಸದ ಸಮಯ ದಾಖಲಿಸುವ (Time Tracking) ವ್ಯವಸ್ಥೆಯನ್ನು ಬಳಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಪರಿಶೀಲನೆಯ ವೇಳೆ […]
ಉಡುಪಿ: ಹೆಸರಾಂತ ಗ್ಯಾರೇಜ್ ಮಾಲಕ ಅಶೋಕ್ ಸುವರ್ಣ ನಿಧನ

ಉಡುಪಿ: ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರೋಡಿಯ ಕಾರ್ಯದರ್ಶಿ, ಹೆಸರಾಂತ ಕಾರ್ ಮೆಕಾನಿಕ್ ಗ್ಯಾರೇಜ್ ಮಾಲಕ ಅಶೋಕ್ ಸುವರ್ಣ ಕಳೆದ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು. ಇವರು ಗರಡಿಯ ಜೀರ್ಣೋದ್ದಾರ ಸಮಯ ತಮ್ಮನ್ನು ಹಾಗೂ ಇತರ ಸಂಘಟನೆಗಳೊಂದಿಗೆ ದುಡಿದಿದ್ದರು. ಮೃತರು ತಾಯಿ ಪತ್ನಿ ಹಾಗೂ ಎರಡು ಮಕ್ಕಳನ್ನು ಹಾಗೂ ಸಹೋದರ ಸಹೋದರಿ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.