CWRC ತೀರ್ಮಾನ ಸಮಾಧಾನ ತಂದಿಲ್ಲ – ಮೇಲ್ಮನವಿ ಸಲ್ಲಿಸುತ್ತೇವೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತೀರ್ಮಾನ ನಮಗೆ ಸಮಾಧಾನ ತಂದಿಲ್ಲ. ಈ ಬಗ್ಗೆ ಸಿಎಂ ನಿರ್ದೇಶನದ ಮೇರೆಗೆ ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ. ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3,500 ಕ್ಯೂಸೆಕ್‌ನಂತೆ ನೀರು ಹರಿಸಬೇಕೆಂಬ CWRC ಆದೇಶ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಅವರು ಮಾತನಾಡಿದರು. ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ನಮಗೆ ಸಮಾಧಾನ ತಂದಿಲ್ಲ. ಸಿಎಂ ಡಿಕೆ ಶಿವಕುಮಾರ್ ಅವರು ಅಪೀಲ್ ಹೋಗಿ […]

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು: ಎಸ್.ಆರ್. ಸತೀಶ್ ಚಂದ್ರ

ಉಡುಪಿ: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಶ್ರೀ ಎಸ್.ಆರ್. ಸತೀಶ್ ಚಂದ್ರ ಹೇಳಿದರು. ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರಿ ಸಂಸ್ಥೆಗಳು ಹೆಚ್ಚಿನ ವೃತ್ತಿಪರತೆ, ಪಾರದರ್ಶಕತೆ ಹಾಗೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ […]

ಕಾಲೇಜು ವಿದ್ಯಾರ್ಥಿಗಳ ಮೇಲೆ ಪೊಲೀಸರ ದಿಢೀರ್ ಡ್ರಗ್ ಟೆಸ್ಟ್; ಒಬ್ಬ ವಿದ್ಯಾರ್ಥಿ ಪಾಸಿಟಿವ್!

ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳ ಮೇಲೆ ದಿಢೀರ್ ಡ್ರಗ್ ಪರೀಕ್ಷೆ ನಡೆಸಿದ್ದಾರೆ. ಕೋಟೆಕಾರ್ ಬೀರಿ ಹಾಗೂ ಕೊಣಾಜೆಯ ಬಂಟ್ಸ್ ಭವನದ ಸಮೀಪ ನಡೆದ ಈ ಕಾರ್ಯಾಚರಣೆಯಲ್ಲಿ ಒಟ್ಟು 159 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿ ಮಾತ್ರ ಡ್ರಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದಾನೆ. ಕಾಲೇಜು ಬಸ್‌ಗಳನ್ನು ತಡೆದು ದಿಢೀರ್ ತಪಾಸಣೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆದಿದ್ದು, […]

ಬೆಂಗಳೂರಲ್ಲಿ ಬೆಚ್ಚಿಬೀಳಿಸಿದ ಘಟನೆ; ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಪತ್ತೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ವರದಿಯಾಗಿದೆ. ವರ್ತೂರು ಬಳಿಯ ಕೊಡತಿ ಗೇಟ್ ಸಮೀಪದ ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯೊಬ್ಬರ ತಲೆ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ತಲೆ ಪತ್ತೆ ಕೊಡತಿ ಗೇಟ್ ಬಳಿ ಇರುವ ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯೊಬ್ಬರ ತಲೆ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ, […]

ಮನೆಯಲ್ಲಿ ಸೊಳ್ಳೆ ಬತ್ತಿ ಹಚ್ಚೋ ಅಭ್ಯಾಸ ಇದ್ಯಾ? ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಆಗ್ಬೋದು ಎಚ್ಚರವಿರಲಿ

ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು ಅನೇಕರು ರಾತ್ರಿ ಮಲಗುವಾಗ ಸೊಳ್ಳೆ ಬತ್ತಿ ಹಚ್ಚುತ್ತಾರೆ. ಆದರೆ, ಸೊಳ್ಳೆ ಬತ್ತಿಯಿಂದ ಹೊರಬರುವ ಹೊಗೆಯನ್ನು ದೀರ್ಘಕಾಲ ಉಸಿರಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಸೊಳ್ಳೆಗಳನ್ನು ನಿಯಂತ್ರಿಸಲು ಬಳಸುವ ಸೊಳ್ಳೆ ಬತ್ತಿಗಳಲ್ಲಿ ವಿವಿಧ ರಾಸಾಯನಿಕ ಪದಾರ್ಥಗಳಿರುತ್ತವೆ. ಬತ್ತಿ ಉರಿಯುವಾಗ ಬಿಡುಗಡೆಯಾಗುವ ಹೊಗೆ ಮನೆಯೊಳಗೆ ಹರಡುತ್ತದೆ. ವಿಶೇಷವಾಗಿ ಬಾಗಿಲು, ಕಿಟಕಿಗಳನ್ನು ಮುಚ್ಚಿಕೊಂಡು ಸೊಳ್ಳೆ ಬತ್ತಿ ಹಚ್ಚಿ ಮಲಗಿದರೆ ಕೋಣೆಯೊಳಗೆ ಹೊಗೆ ಹೆಚ್ಚಾಗಿ ಸಂಗ್ರಹವಾಗುವ ಸಾಧ್ಯತೆಯಿದೆ. ಶ್ವಾಸಕೋಶಕ್ಕೆ ತೊಂದರೆ ಉಂಟಾಗಬಹುದು […]