ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ […]