ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಉಡುಪಿ: ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಹಾಗೂ ತುಳುಕೂಟ ಉಡುಪಿ ಸಹಯೋಗದಲ್ಲಿ ಉಡುಪಿಯ ಮುಕುಂದ ಕೃಪಾ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ನೆನಪಿನ ‘ಕಿನ್ಯ ಜೋಕ್ಲೆಡ್ದ್ ಸೊರ ಸಂಪು’ ಕಾರ್ಯಕ್ರಮವನ್ನು ಅವರು ಕಯ್ಯಾರ […]
ಕಾರ್ಕಳ: ಹಣಕ್ಕೆ ಬೇಡಿಕೆ ಆರೋಪ: ಡಿವೈಎಸ್ಪಿ ಸೇರಿ ಮೂವರು ಅಮಾನತು

ಉಡುಪಿ: ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆರೋಪಗಳ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್‌ಪಿ) ನಡೆಸಿದ ಪ್ರಾಥಮಿಕ ತನಿಖೆಯ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅಮಾನತುಗೊಂಡವರಲ್ಲಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್‌ಸ್ಪೆಕ್ಟರ್ […]
ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅದ್ದೂರಿ ಉದ್ಘಾಟನೆ

ಉಡುಪಿ: ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಕಿನ್ನಿಮೂಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಆರಂಭಗೊಂಡ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಬುಧವಾರ ಉದ್ಘಾಟಿಸಿ ಬಳಿಕ ಶ್ರೀ ವೀರಭದ್ರ ಕಲಾಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದ ಆರ್ಥಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದೆ. ಇದಕ್ಕೆ ಇಲ್ಲಿನ ಪರಸ್ಪರ ಸಹಕಾರದ ಸಂಸ್ಕೃತಿ ಹಾಗೂ ಸಮಾಜದೊಂದಿಗೆ ಬೆಸೆದುಕೊಂಡು ಕಾರ್ಯನಿರ್ವಹಿಸುವ […]
ನಾಯಕತ್ವ ಸಮ್ಮಿಲನ: ಆಳ್ವಾಸ್ ಪ್ರಗತಿಗೆ ಯಶಸ್ಸು ಸರ್ವರ ಸಹಕಾರ ಕೋರಿದ ವಿವೇಕ್ ಆಳ್ವ ಮೌಲ್ಯ-ಸಾಮರ್ಥ್ಯದ ಸಂಗಮ, ಸಮುದಾಯಗಳ ಸಹಭಾಗಿತ್ವ

ಮೂಡುಬಿದಿರೆ: ‘ಪ್ರತಿ ವ್ಯಕ್ತಿಯ ಯಶಸ್ಸಿಗೆ ಗುರು ಮತ್ತು ಗುರಿ ಮುಖ್ಯ. ಬದುಕಿನಲ್ಲಿ ಹಿರಿಯರ ಮೌಲ್ಯಗಳೇ ಗುರು. ಯುವ ಸಮುದಾಯದ ಅಭ್ಯುದಯವೇ ಗುರಿ. ಆ ಮೂಲಕ ಸಮಾಜದ ‘ಪ್ರಗತಿ’ಯೇ ಆಳ್ವಾಸ್ ಆಶಯ. ಅದರ ಯಶಸ್ಸಿಗೆ ಸಮುದಾಯಗಳ ಸಹಭಾಗಿತ್ವ ಅತ್ಯಗತ್ಯ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯಲ್ಲಿ ಆಗಸ್ಟ್ 7 ಮತ್ತು 8 ರಂದು ನಡೆಯಲಿರುವ ಬೃಹತ್ ಉಚಿತ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ- 2026’ರ ಪೂರ್ವಭಾವಿಯಾಗಿ ಆಳ್ವಾಸ್ […]
ಕಾರ್ಕಳ ಕ್ರೈಸ್ಟ್ ಕಿಂಗ್: ಪ್ರಾಥಮಿಕ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆ ಇವರವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳಾದ ಏಳನೇ ತರಗತಿಯ ಡೆಲ್ಸಿಯಾ ಡಿಸೋಜ, ಸಾಚಿ ಎಸ್ ಸುವರ್ಣ, ಅಂಜನಿ ಕಾಮತ್ ಮತ್ತು ಮಾನ್ವಿತ ಕೆ […]