ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಶ್ರೀಧರ್ ಭಟ್ ಕಾಸರಕೋಡು ಇನ್ನಿಲ್ಲ,ವಿಶೇಷ ಹಾಸ್ಯದಿಂದಲೇ ಯಕ್ಷ ಪ್ರೇಮಿಗಳನ್ನು ನಕ್ಕು ನಗಿಸಿದ್ದ ಅಪೂರ್ವ ಕಲಾವಿದ!

ಉತ್ತರಕನ್ನಡ ಜಿಲ್ಲೆ: ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀಧರ್ ಭಟ್ ಕಾಸರಕೋಡು ಅವರು ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಕಾಸರಕೋಡಿನವರು. ಇವರು ಬಡಗುತಿಟ್ಟಿನ ಅಗ್ರಗಣ್ಯ ಹಾಸ್ಯ ಕಲಾವಿದರಲ್ಲಿ ಒಬ್ಬರಾಗಿದ್ದರು. ಇವರ ಹಾಸ್ಯಕ್ಕೆ ಭಾರೀ ಬೇಡಿಕೆಯೂ ಇತ್ತು. ಹಾಸ್ಯದಲ್ಲಿ ಸೂಕ್ಷ್ಮತೆ ಮತ್ತು ಗಂಭೀರತೆ ಬೆರೆಸುವಲ್ಲಿ ಇವರಿಗೆ ವಿಶೇಷ ಪರಿಣತಿ ಇತ್ತು. ಇತ್ತೀಚೆಗೆ ಪ್ರತಿಷ್ಟಿತ ಮೇಳದಲ್ಲಿ ಅತಿಥಿ ಕಲಾವಿದರಾಗಿ ಯಕ್ಷಾಭಿಮಾನಿಗಳನ್ನು ರಂಜಿಸುತ್ತಿದ್ದರು. ಅಜ್ಜಿ, ಸೂತ್ರಧಾರಿ, ಮಾಣಿ, ದಾರುಕ, ಮಂತ್ರಿ, ಸೇವಕ,ವ್ಯಾಪಾರಿ ಹೀಗೆ ನಾನಾ ಪಾತ್ರಗಳಲ್ಲಿ ಮಿಂಚಿದ್ದರು. […]

572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ; PUC ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಸರ್ಕಾರಿ ಉದ್ಯೋಗದ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಕಂದಾಯ ಇಲಾಖೆಯಲ್ಲಿನ 572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿ ಎಂದು ಕರೆಯಲಾಗುತ್ತಿದ್ದ ಹುದ್ದೆಗೆ ಇದೀಗ ಗ್ರಾಮ ಆಡಳಿತಾಧಿಕಾರಿ ಎಂದು ಮರುನಾಮಕರಣ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ ಮಾಡಲಾಗಲಿದ್ದು, ₹34,100 ರಿಂದ ₹67,600 ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಅರ್ಹತೆ […]

ಉಡುಪಿ: ರಾವಣನಂತೆ ಬಿಂಬಿಸಿದ ಶಾಸಕ ಯಶ್‌ಪಾಲ್ ಸುವರ್ಣ ಕಟೌಟ್‌ಗೆ ಮೊಟ್ಟೆ ಎಸೆತ: ಪ್ರತಿಕೃತಿ ದಹಿಸಿ ಆಕ್ರೋಶ

ಉಡುಪಿ: ರಾಹುಲ್ ಗಾಂಧಿ ವಿರುದ್ಧ ಧ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್‌ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು. ಚಡ್ಡಿ ಧರಿಸಿರುವ ಯಶ್‌ಪಾಲ್, ಕೈಗಳಲ್ಲಿ ಮದ್ಯದ ಬಾಟಲಿ, ಐಸ್‌ಕ್ಯಾಂಡಿ, ಮೊಬೈಲ್, ಟವಲ್, ಜೋಕರ್ ಇಸ್ಪೀಟ್, ಮೆಲೋಡಿ ಚಾಕಟೇಲ್, ಚೊಂಬುಗಳನ್ನು ಹಿಡಿದುಕೊಂಡಿರುವಂತೆ ಕಟೌಟ್‌ನಲ್ಲಿ ಚಿತ್ರಿಸಲಾಗಿದೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಈ ಕಟೌಟ್‌ಗೆ ಮೊಟ್ಟೆಗಳನ್ನು ಎಸೆದು ತಮ್ಮ […]

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಇದೇ ವೇಳೆ ಕೊಡಗು, ಹಾಸನ, ಧಾರವಾಡ, ಗದಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ […]

ಕಾವೇರಿ ನೀರು ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬಂಧ CWRC ಮತ್ತು CWMA ಆದೇಶಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡಪರ ಹಾಗೂ ರೈತ ಸಂಘಟನೆಗಳು ಮುಂದಾಗಿವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕನ್ನಡ ಒಕ್ಕೂಟಗಳ ಸಭೆಯ ಬಳಿಕ ಹೋರಾಟಗಾರ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಆಗಸ್ಟ್ 13ರಂದು […]