ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಮೇವಿನ ಕೊರತೆ ಉಂಟಾಗದoತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಬರಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಅಲ್ಪಾವಧಿ ಹಾಗೂ ಧೀರ್ಘಾವಧಿ ತಳಿಯ ಮೇವು ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ರೈತರು ಹುಲ್ಲನ್ನು ಬೆಳೆಯಲು ಅನುಕೂಲವಾಗುವಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ ಸಮಿತಿ ಸಭೆ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ […]
ಬದುಕು ಸುಂದರವಾಗಿ ಮೂಡಬೇಕಾದರೆ ಯುವಜನರು ಸನ್ಮಾರ್ಗದಲ್ಲಿ ನಡೆಯಬೇಕು: ಎಂ.ಎ.ಗಫೂರ್

ಉಡುಪಿ: ಈ ಪುಣ್ಯ ಭೂಮಿಯಲ್ಲಿ ಹುಟ್ಟಿದ ಹಲವಾರು ಸಾಧು-ಸಂತ ಮಹಂತರು ತಮ್ಮ ಅನುಭವದ ಜ್ಞಾನವನ್ನು ದ್ವಿಪದಿ, ತ್ರಿಪದಿ, ವಚನ ಹಾಗೂ ಸಾಹಿತ್ಯಗಳ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸಲು ಅವರು ಕೈಗೊಂಡ ಕಾರ್ಯಗಳು ನಿತ್ಯ ಸ್ಮರಣೀಯ. ಇಂತಹ ಸಾಧುಗಳಲ್ಲೇ ಶ್ರೇಷ್ಠರಾದವರು ಮಹಾಂತ ಡಾ.ಶಿವಯೋಗಿ ಸಾಮೀಜಿಗಳು. ವ್ಯಸನಮುಕ್ತ ಸಮಾಜ ನಿರ್ಮಿಸಿ ಸುಂದರ ಬದುಕನ್ನು ಕಟ್ಟಿಕೊಳ್ಳಲು ಅವರು ನೀಡಿದ ಪ್ರೇರಣೆಗಳನ್ನು ಯುವಜನರು ಅನುಸರಿಸಿ ಸನ್ಮಾರ್ಗದಲ್ಲಿ ನಡೆದು ಬದುಕನ್ನು ಸುಂದರವಾಗಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. […]
ಬೆಳ್ತಂಗಡಿಯಲ್ಲಿ ಧಾರಾಕಾರ ಮಳೆ,ತುಂಬಿ ತುಳುಕಿದ ನದಿಗಳು, ಹಲವೆಡೆ ನೆರೆ ಭೀತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಭಾರೀ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಎದುರಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು ಬಳಿ ಸ್ಥಳೀಯ ನದಿಯ ನೀರು ರಸ್ತೆಗೆ ಹರಿದು ಬಂದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ನೆರಿಯಾ ಸಿಯೋನ್ ಆಶ್ರಮದ ತಡೆಗೋಡೆ ಕುಸಿದು ಹಾನಿಯಾಗಿದ್ದು, […]
ಕುಂದಾಪುರ: ಗುಂಡಿಕ್ಕಿ ಉದ್ಯಮಿಯ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಉಡುಪಿ: ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಬಾರ್ಕೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರದ ಚರ್ಚ್ ರಸ್ತೆಯ ನಿವಾಸಿ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಜುಲೈ 30ರಂದು ರಾತ್ರಿ ಸುಮಾರು 11.45ಕ್ಕೆ ಡೆರಿಕ್ ಕ್ರಾಸ್ತಾ ಅವರು ಐವನ್ ರಿಚರ್ಡ್ ಅವರಿಗೆ ಕರೆ ಮಾಡಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಬಾಕಿ ಹಣದ […]
ಹಬ್ಬದ ಸೀಸನ್ ಮೊದಲೇ ಜನತೆಗೆ ಬೆಲೆ ಏರಿಕೆಯ ಶಾಕ್,ಟೂತ್‌ಪೇಸ್ಟ್‌ನಿಂದ ಪೇಂಟ್‌ವರೆಗೆ ಹಲವು ಉತ್ಪನ್ನಗಳು ದುಬಾರಿ

ನವದೆಹಲಿ: ಹಬ್ಬದ ಸೀಸನ್ ಆರಂಭಕ್ಕೂ ಮುನ್ನವೇ ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಟೂತ್‌ಪೇಸ್ಟ್, ಡಿಟರ್ಜೆಂಟ್, ವಾಲ್ ಪೇಂಟ್, ಟೈರ್ ಸೇರಿದಂತೆ ಹಲವು ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲು ಪ್ರಮುಖ ಕಂಪನಿಗಳು ಸಜ್ಜಾಗಿವೆ. ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಕಚ್ಚಾ ವಸ್ತುಗಳ ಬೆಲೆ ಏರಿಕೆ ಇದಕ್ಕೆ ಪ್ರಮುಖ ಕಾರಣ ಎಂದು ಕಂಪನಿಗಳು ತಿಳಿಸಿವೆ. ಬ್ಲೂಮ್ಬರ್ಗ್ ವರದಿ ಪ್ರಕಾರ, ಹಿಂದೂಸ್ತಾನ್ ಯೂನಿಲಿವರ್ (HUL), ಏಷ್ಯನ್ ಪೇಂಟ್ಸ್, ಹ್ಯಾವೆಲ್ಸ್, ಡೋಡ್ಲಾ ಡೈರಿ ಸೇರಿದಂತೆ ಕನಿಷ್ಠ […]