ಉಡುಪಿ: ಬಸ್‌ ಡಿಕ್ಕಿ ಹೊಡೆದು ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಮೃತ್ಯು

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬಿಜೆಪಿ‌ ಮುಖಂಡ ಮಂಜುಕೊಳ ಅವರ ಪತ್ನಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ […]

ಮಂಗಳೂರು: 2018ರ ಬೆಂಗ್ರೆ ಬೀಚ್ ಅತ್ಯಾಚಾರ ಪ್ರಕರಣ: ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: 2018ರಲ್ಲಿ ಪಣಂಬೂರು ಸಮೀಪದ ತೋಟ ಬೆಂಗ್ರೆ ಬೀಚ್‌ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ವಿವಿಧ ಆರೋಪಗಳಡಿ ದಂಡ ವಿಧಿಸಲಾಗಿದೆ. ಸುಮಾರು ಎಂಟು ವರ್ಷಗಳ ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಹೊರಬಿದ್ದ ಈ ತೀರ್ಪಿನಿಂದ ಸಂತ್ರಸ್ತೆಗೆ ನ್ಯಾಯ ದೊರೆತಂತಾಗಿದೆ ಎಂದು ಅಭಿಯೋಜನೆ ತಿಳಿಸಿದೆ. 2018ರ […]

ಇಂದಿನಿಂದಲೇ ಶಾಲೆ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ ಫುಡ್‌ಗೆ ಬ್ರೇಕ್:ಯಾಕೆ ಈ ಮಹತ್ವದ ನಿರ್ಧಾರ?

ಬೆಂಗಳೂರು: ರಾಜ್ಯದ ಶಾಲೆ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ 50 ಮೀಟರ್ ವ್ಯಾಪ್ತಿಯಲ್ಲಿ ಹೆಚ್ಚಿನ ಕೊಬ್ಬು, ಸಕ್ಕರೆ ಮತ್ತು ಉಪ್ಪು (HFSS) ಹೊಂದಿರುವ ಆಹಾರಗಳ ಮಾರಾಟ, ಉಚಿತ ವಿತರಣೆ, ಜಾಹೀರಾತು ಮತ್ತು ಪ್ರಚಾರಕ್ಕೆ ವಿಧಿಸಿರುವ ನಿಷೇಧವನ್ನು ಆಗಸ್ಟ್‌ 1ರಿಂದ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆ ತಿಳಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಈ ಕುರಿತು ಮಾಹಿತಿ ನೀಡಿ, ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಬೆಳೆಸುವುದು ಹಾಗೂ ಜಂಕ್‌ […]

ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ’: ದೆಹಲಿ ಪ್ರತಿಭಟನೆಯಲ್ಲಿ PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ.!

ಕೈಮುಗಿದು ಕಾಣಿಸಿಕೊಂಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಅದರ ನೈಜತೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ಸ್ವತಂತ್ರವಾಗಿ ದೃಢೀಕರಿಸಿಲ್ಲ. ದೆಹಲಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಪ್ರತಿಭಟನಾಕಾರ್ತಿ, ಕ್ಷಮೆಯಾಚಿಸಿದ್ದಾಳೆ. ತಾನು ಕೇವಲ 15 ವರ್ಷದವಳಾಗಿದ್ದು, ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗುತ್ತಿದ್ದವರ ಪ್ರಭಾವಕ್ಕೆ ಒಳಗಾಗಿದ್ದೆ ಎಂದು ಆಕೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಿಡಿಯೊದಲ್ಲಿ ಹೇಳಿಕೊಂಡಿದ್ದಾಳೆ. ಕೈಮುಗಿದು […]

CWG 2026 | ನೀರಜ್‌ಗೆ ಬೆಳ್ಳಿ, ಯಶ್‌ ವೀರ್‌ಗೆ ಕಂಚು – ಲಂಕಾ ಪಾಲಾದ ʻಚಿನ್ನʼ

ಗ್ಲಾಸ್ಗೋ: ಭಾರತದ ಪರ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ಒಲಿಂಪಿಕ್ಸ್‌ ಪದಕ ವಿಜೇತ ನೀರಜ್‌ ಚೋಪ್ರಾ (Neeraj Chopra), ಈ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ (CWG 2026) ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇಂದು ಬೆಳಗ್ಗಿನಜಾವ ನಡೆದ ಜಾವೆಲಿನ್‌ (Javelin Throw) ಸ್ಪರ್ಧೆಯ ಫೈನಲ್‌ನಲ್ಲಿ ನೀರಜ್‌ ಚೋಪ್ರಾ 85.83 ಮೀಟರ್‌ ಜಾವೆಲಿನ್‌ ಎಸೆಯುವ ಮೂಲಕ 2ನೇ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಭಾರತದ ಮತ್ತೋರ್ವ ಜಾವೆಲಿನ್‌ ಪಟು ಯಶ್‌ವೀರ್‌ ಸಿಂಗ್‌ 85.41 ಮೀಟರ್‌ ಜಾವೆಲಿನ್‌ ಎಸೆಯುವ ಮೂಲಕ ಬೆಳ್ಳಿ […]