ಅಗಸ್ಟ್ 3 ರಂದು ಕೊಪ್ಪ, ಶೃಂಗೇರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಆ.3) ರಜೆ ಘೋಷಿಸಲಾಗಿದೆ. ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆಯಿಂದಾಗಿ ತುಂಗಾ ನದಿಯು ಅಪಾಯದ […]

ಅಗಸ್ಟ್ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗಿದ್ದು, ಈ ಹಿನ್ನಲೆ ಆ.03 ಸೋಮವಾರ  ಜಿಲ್ಲೆಯ ಮಂಗಳೂರು ಉಪವಿಭಾಗದ ಶಾಲೆಗಳಿಗೆ ಮತ್ತು ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 10 ನೇ ತರಗತಿಯವರೆಗೆ ರಜೆ ಪ್ರಕಟಿಸಲಾಗಿದೆ. ಈ ಆದೇಶವು ಎಲ್ಲಾ ವಸತಿ ಶಾಲೆಗಳಿಗೂ […]

ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

ಉಡುಪಿ: ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ ಅಳವಡಿಸಿದ ಸಿಸಿ ಕ್ಯಾಮೆರಾ ಮತ್ತು ಅದರ ನಿಯಂತ್ರಣ ಕೊಠಡಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಡುಪಿಯ ಶಾಸಕರಾದ ಯಶ್ ಪಾಲ್ ಸುವರ್ಣ ಸಿಸಿ ಕ್ಯಾಮೆರಾ ಉದ್ಘಾಟನೆ ನಡೆಸಿದ್ದು ಉಡುಪಿಯ ವಕೀಲರಾದ ಆರೂರು ಸುಕೇಶ್ ಶೆಟ್ಟಿ ಅದರ ನಿಯಂತ್ರಣ ಕೊಠಡಿಯ ಉದ್ಘಾಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ […]

ಆ.14-16, ಸಸ್ಯಸಂತೆ ಕಾರ್ಯಕ್ರಮ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಸಾರ್ವಜನಿಕರಿಗಾಗಿ “ಸಸ್ಯಸಂತೆ” ಕಾರ್ಯಕ್ರಮವನ್ನು ಆಗಸ್ಟ್ 14 ರಿಂದ 18 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಸ್ಯಸಂತೆಯಲ್ಲಿ ಅಲಂಕಾರಿಕ ಗಿಡಗಳು, ಹಣ್ಣಿನ, ಹೂವಿನ ಗಿಡಗಳು ಖರೀದಿಗೆ ಲಭ್ಯವಿರುತ್ತದೆ ಹಾಗೂ ಸಾವಯವ ಗೊಬ್ಬರ, ಕುಂಡಗಳು ಮತ್ತು ತೋಟಗಾರಿಕೆ ಉಪಕರಣಗಳು ಒಂದೇ ಸೂರಿನಡಿ ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ಮಳಿಗೆಗಳನ್ನು ಹಾಕಲು ಇಚ್ಛಿಸುವ ನರ್ಸರಿ ಮಾಲಿಕರು ಹಾಗೂ ಸ್ವಸಹಾಯ ಸಂಘಗಳು ಆಗಸ್ಟ್ 10 ರ ಒಳಗಾಗಿ ತೋಟಗಾರಿಕೆ ಇಲಾಖೆಯ […]

ಶ್ರೀಕೃಷ್ಣ ಜನ್ಮಾಷ್ಟಮಿ: ವಿವಿಧ ಸ್ಪರ್ಧೆಗಳಿಗೆ ಚಾಲನೆ

ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಯೋಜಿಸಿರುವ ವಿವಿಧ ಸ್ಪರ್ಧೆಗಳಿಗೆ ಶನಿವಾರ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಜನ್ಮಾಷ್ಟಮಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಸ್ಪರ್ಧೆಗಳ ಸರಣಿಯಲ್ಲಿ ಮೊದಲ ದಿನ ವಿವಿಧ ವಿಭಾಗಗಳಲ್ಲಿ ದಾಸರ ಪದಗಳ ಗಾಯನ ಸ್ಪರ್ಧೆ ನಡೆಯಿತು. ವಿವಿಧ ವಯೋಮಾನದ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿ ಭಕ್ತಿಪ್ರಧಾನ ಗೀತೆಗಳನ್ನು ಪ್ರಸ್ತುತಪಡಿಸಿದರು. ಜನ್ಮಾಷ್ಟಮಿ ಪ್ರಯುಕ್ತ ಮುಂದಿನ ದಿನಗಳಲ್ಲಿಯೂ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸ್ಪರ್ಧೆಗಳು […]