‘ಟಾಕ್ಸಿಕ್’ ಟ್ರೈಲರ್‌ಗೆ ದಿನಾಂಕ ಫಿಕ್ಸ್: ಹೊಸ ಪೋಸ್ಟರ್‌ನೊಂದಿಗೆ ಯಶ್ ಗುಡ್‌ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಿತ್ರದ ಕುರಿತು ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ನಟ ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಗೀತು ಮೋಹನ್ದಾಸ್ ನಿರ್ದೇಶನದ ಈ ಸಿನಿಮಾ ಸ್ಯಾಂಡಲ್ವುಡ್ ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರತಂಡದ ಮಾಹಿತಿ ಪ್ರಕಾರ, ಆಗಸ್ಟ್ 8ರಂದು ‘ಟಾಕ್ಸಿಕ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ. ಆದರೆ, ಟ್ರೈಲರ್ ಬಿಡುಗಡೆಯ ನಿಖರ […]
ಉಡುಪಿ: ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ಕ್ರೀಡಾಸ್ಫೂರ್ತಿಗೆ ಸಾಕ್ಷಿಯಾದ ಕ್ರಾಸ್ ಕಂಟ್ರಿ ರೇಸ್

ಉಡುಪಿ: ಪೋದಾರ್ ಅಂತರಾಷ್ಟ್ರೀಯ ಶಾಲೆ, ಉಡುಪಿಯ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಆಗಸ್ಟ್ 1ರಂದು ಶಾಲಾ ಆವರಣದಲ್ಲಿ ಕ್ರಾಸ್ ಕಂಟ್ರಿ ರೇಸ್‍ಅನ್ನು ಉತ್ಸಾಹಭರಿತವಾಗಿ ಆಯೋಜಿಸಲಾಯಿತು. “Run for Health, Run for Future” (ಆರೋಗ್ಯಕ್ಕಾಗಿ ಓಡಿ, ಉತ್ತಮ ಭವಿಷ್ಯಕ್ಕಾಗಿ ಓಡಿ) ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಈ ಓಟದ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ, ದೈಹಿಕ ಸದೃಢತೆ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಉದ್ದೇಶವನ್ನು ಹೊಂದಿತ್ತು. ಬೆಳಿಗ್ಗೆ 9 ಗಂಟೆಗೆ ಆರಂಭವಾದ ಸ್ಪರ್ಧೆಯಲ್ಲಿ ಕಿರಿಯ ಹಾಗೂ ಹಿರಿಯ ವಿಭಾಗದ ಬಾಲಕ ಮತ್ತು […]
ಬ್ರಹ್ಮಾವರ: ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಮಹಿಳಾ ವೇದಿಕೆ ಉದ್ಘಾಟನೆ ಹಾಗೂ ಆರೋಗ್ಯ-ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

ಬ್ರಹ್ಮಾವರ: ಬ್ರಹ್ಮಾವರದ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಸ್ವಚ್ಛತಾ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮಹಿಳಾ ವೇದಿಕೆಯ (Women’s Forum) ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಐವಾನ್ ಡೊನಾತ್ ಸುವಾರಿಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯ ನವಜಾತ ಶಿಶು ಮತ್ತು ಮಕ್ಕಳ ತಜ್ಞ ವೈದ್ಯರಾದ ಡಾ. ಜೋಸ್ನಿ ಟೆಲ್ಲಿಸ್ ಅವರು ಮಹಿಳೆಯರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರದ ಮಹತ್ವ […]
ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ

ಉಡುಪಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು ಪ್ರಸ್ತಾವನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 14 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ತಳ ಅಂತಸ್ತು […]
ಚಿಟ್ಪಾಡಿ: ಭಾರೀ ಗಾಳಿ–ಮಳೆಗೆ ಧರೆಗುರುಳಿದ ಬೃಹತ್ ಮರ; ವಿದ್ಯುತ್ ಕಂಬಗಳು ಧರಾಶಾಯಿ

ಉಡುಪಿ: ಶನಿವಾರ ಮಧ್ಯಾಹ್ನ ಸುರಿದ ಭಾರೀ ಗಾಳಿ–ಮಳೆಗೆ ಚಿಟ್ಪಾಡಿ ಸಮೀಪದ ವಿಜಯ ವೀರ ಸಂಘ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಮೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಯಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮರ ಉರುಳಿದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮಾಹಿತಿ ತಿಳಿದ ಸ್ಥಳೀಯ ಯುವಕರು ಹಾಗೂ ಎನ್‌ಎಸ್‌ಯುಐ ಜಿಲ್ಲಾ ಉಪಾಧ್ಯಕ್ಷ ಶರತ್ ಕುಂದರ್ ಅವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಬಳಿಕ ಸ್ಥಳೀಯರು ಹಾಗೂ ವಿಜಯ ವೀರ ಸಂಘದ […]