ಭಾರತ್ ಜೋಡೋ – ಯುವ ಸಂಘಗಳ ರಚನೆಗೆ ಮುಂದಾಗಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಆದೇಶಿಸಿದ್ದು, ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ […]
ಆಗಸ್ಟ್ 6 ರಂದು ನೇರ ಸಂದರ್ಶನ

ಉಡುಪಿ: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, […]
ಆ.4ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆ. 4ರ ಮಂಗಳವಾರ ರಜೆ ಘೋಷಿಸಿ ಎಂದು ದ.ಕ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೊತ್ತರ ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.
ಜನಸಾಮಾನ್ಯರಲ್ಲಿ ಮಾನವ ಕಳ್ಳ ಸಾಗಾಣಿಕೆ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಿ: ನ್ಯಾ.ನಿತಿನ್ ವೈ.ರಾವ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯಗಳು ನಿರ್ಮೂಲನೆ ಮಾಡಲು ಭಾಗಿದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಹೇಳಿದರು. ಅವರು ಗುರುವಾರ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು […]
ವ್ಯಕ್ತಿ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷ್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮುಗಿಸಿ ತನ್ನ ಮನೆಗೆ ವಾಪಾಸಾಗಿ ಅಣ್ಣನ ಜೊತೆ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ […]