ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಡ್ರಾಮಾ: ಪಟ್ಟಿಯಲ್ಲಿದ್ದರೂ ಮಂಕಾಳು ವೈದ್ಯಗೆ ಸಿಗದ ಮಂತ್ರಿಗಿರಿ

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಎಐಸಿಸಿ ಪ್ರಕಟಿಸಿದ ನೂತನ ಸಚಿವರ ಪಟ್ಟಿಯಲ್ಲಿ ಹೆಸರಿದ್ದರೂ, ಕೊನೇ ಕ್ಷಣದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದೆ. ಬೆಂಗಳೂರು, ಆಗಸ್ಟ್ 03: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಎಐಸಿಸಿ ಪ್ರಕಟಿಸಿದ 20 ನೂತನ ಸಚಿವರ ಪಟ್ಟಿಯಲ್ಲಿ ಹೆಸರಿದ್ದರೂ ಕೊನೇ ಕ್ಷಣದಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ.ಮಂತ್ರಿಗಳ ಪಟ್ಟಿ ಬಿಡುಗಡೆಯಾದ ಬಳಿಕ […]
ಅಪ್ರಾಪ್ತರಿಗೆ ಮದ್ಯ ನೀಡಿದರೆ ಕಠಿಣ ಕ್ರಮ: ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ

ಉಡುಪಿ: ಅಬಕಾರಿ ನಿಯಮಗಳ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಅಥವಾ ಪೂರೈಕೆ ಮಾಡುವ ಬಾರ್ ಹಾಗೂ ಪಬ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ. ಮಣಿಪಾಲ ಪ್ರದೇಶದಲ್ಲಿ ಅಪ್ರಾಪ್ತರಿಗೆ ಮದ್ಯ ಪೂರೈಕೆ ಹಾಗೂ ಬಾರ್–ಪಬ್‌ಗಳಲ್ಲಿ ನಿಯಮ ಉಲ್ಲಂಘನೆ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಆಧಾರದ ಮೇಲೆ ಪೊಲೀಸರು ವಿಶೇಷ ತಂಡ ರಚಿಸಿ ವಿವಿಧ ಬಾರ್ ಮತ್ತು ಪಬ್‌ಗಳ ಮೇಲೆ ದಾಳಿ […]
ಉಡುಪಿಯ ಕಾಸ್ಮಿಕ್ ಕಲರ್ಸ್ ಬಟ್ಟೆ ಮಳಿಗೆಯಲ್ಲಿ ಆಷಾಢ ಸೆಲ್ ಆರಂಭ

ಉಡುಪಿಯ ಕಾಸ್ಮಿಕ್ ಬಟ್ಟೆ ಮಳಿಗೆಯಲ್ಲಿ ಆಷಾಡದ ಪ್ರಯುಕ್ತ ವಿಶೇಷ ಆಫರ್ಗಳು ಪ್ರಾರಂಭಗೊಂಡಿದೆ. ಆಫರ್: 10% , 15% , 20% ನಡೆಯುತ್ತಿದೆ. ಸ್ಥಳ:Thenkpete maruthi veethika udupi mobile no: 9113037483,9187448014
ಭಾರಿ ಮಳೆಗೆ ಕಾರ್ಕಳದ ಇದು ಗ್ರಾಮದಲ್ಲಿ ಸೇತುವೆ ಮುಳುಗಡೆ; ನೂರಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕಾರ್ಕಳ ತಾಲ್ಲೂಕಿನ ಇದು ಗ್ರಾಮದಲ್ಲಿರುವ ಸೇತುವೆ ಮುಳುಗಡೆಯಾಗಿದ್ದು, ನೂರಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸೇತುವೆಯ ಮೇಲೆಯೇ ನೀರು ಹರಿಯುತ್ತಿದೆ. ಇದರಿಂದ ವಾಹನ ಹಾಗೂ ಸಾರ್ವಜನಿಕರ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳೀಯರು ಪರದಾಡುವಂತಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಮುಂದುವರಿದರೆ ನೀರಿನ ಮಟ್ಟ […]
ಮಲೆನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ; ಜಲಪಾತಗಳ ಬಳಿ ಎಚ್ಚರಿಕೆ ಅಗತ್ಯ

ಉಡುಪಿ: ವೀಕೆಂಡ್ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ. ಚಿಕ್ಕಮಗಳೂರು, ಕಳಸ, ಕುದುರೆಮುಖ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಮಂದಿ ಆಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿರುವ ದೃಶ್ಯಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಪ್ರಮುಖ ಜಲಪಾತಗಳಲ್ಲಿ ಪ್ರವಾಸಿಗರ ದಂಡು ಕಂಡುಬಂದಿದ್ದು, ಹೋಂಸ್ಟೇಗಳು ಹಾಗೂ ಹೋಟೆಲ್‌ಗಳು ಬಹುತೇಕ ಭರ್ತಿಯಾಗಿವೆ. ಆದರೆ ನಿರಂತರ ಮಳೆಯಿಂದಾಗಿ ಜಲಪಾತಗಳಲ್ಲಿ […]