ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ

ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಸಮಸ್ಯೆಗಳು ಹಾಗೂ ತತ್‌ಕ್ಷಣದ ಪರಿಹಾರದ ಅಗತ್ಯದ ಕುರಿತು ಮಾಹಿತಿ ಪಡೆದರು. ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಕಾಪು ಕ್ಷೇತ್ರದ 8-9 ಕಡಲ್ಕೊರೆತ ಪ್ರದೇಶಗಳನ್ನು ಪರಿಶೀಲಿಸಿದ್ದು, ಅಗತ್ಯವಿರುವಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಬಂದರು ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಾಗಿ […]

ಇಂದು ಸಂಜೆಯೇ 20 ನೂತನ ಸಚಿವರ ಪ್ರಮಾಣವಚನ, ಶುರುವಾಗಲಿದೆ ಸಚಿವ ಸಂಪುಟದ ಆಳ್ವಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಗೆ ತೆರೆ ಬಿದ್ದಿದ್ದು, ಇಂದು (ಆಗಸ್ಟ್ 3) ಸಂಜೆ 4.05ಕ್ಕೆ ಲೋಕಭವನದಲ್ಲಿ 20 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದಿನಿಂದ ಕಾರ್ಯಾರಂಭ ಮಾಡಲಿದೆ. ಸಚಿವ ಸ್ಥಾನಕ್ಕಾಗಿ ಹಲವು ತಿಂಗಳುಗಳಿಂದ ನಡೆದ ರಾಜಕೀಯ ಚರ್ಚೆ, ಲಾಬಿ ಮತ್ತು ಹೈಕಮಾಂಡ್ ಮಟ್ಟದ ಸಮಾಲೋಚನೆಗಳ ಬಳಿಕ ಕಾಂಗ್ರೆಸ್ ಅಂತಿಮವಾಗಿ 20 ಶಾಸಕರನ್ನು ಸಚಿವರಾಗಿ ಆಯ್ಕೆ ಮಾಡಿದೆ. ಇದರ ಜೊತೆಗೆ ವಿಧಾನಸಭೆಯ ನೂತನ […]

ಉಡುಪಿ: ಆ. 8ರಂದು ಲಯನ್ಸ್‌ ಜಿಲ್ಲೆ 317C ಜಿಲ್ಲಾ ಸಂಪುಟ ಪದಗ್ರಹಣ

ಉಡುಪಿ: ವಿಭಜಿತ ಲಯನ್ಸ್‌ ಜಿಲ್ಲೆ 317Cರ 24ನೇ ಜಿಲ್ಲಾ ಸಂಪುಟ ಪದಗ್ರಹಣ ಸಮಾರಂಭವು ಆಗಸ್ಟ್‌ 8ರಂದು ಸಂಜೆ 4.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್‌ನ ಮಾಜಿ ಜಿಲ್ಲಾ ಗವರ್ನರ್ ಹಾಗೂ ಮುಖ್ಯ ಸಲಹೆಗಾರ ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾ ಗವರ್ನರ್ ರಾಜೀವ್‌ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು, ಪ್ರಥಮ ಮಹಿಳೆ ಲಯನ್ ವೀಣಾ ಆರ್. ಕೋಟ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ […]

ರಾಜ್ಯ ಸಂಪುಟ ವಿಸ್ತರಣೆ ಇಂದು; 20 ಮಂದಿಗೆ ಸಚಿವ ಸ್ಥಾನ, ಹಲವು ಹೊಸ ಮುಖಗಳಿಗೆ ಅವಕಾಶ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೋಮವಾರ (ಆ. 3) ಸಂಜೆ ನಡೆಯಲಿದ್ದು, 20 ಮಂದಿ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಸಚಿವರಾಗಿ ಪ್ರಮಾಣವಚನ ಬೋಧಿಸಲು ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಸಂಪುಟದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದ್ದು, ಕೆಲ ಹಿರಿಯ ಸಚಿವರು ಸ್ಥಾನ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯೆಯಾಗಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ಲಭಿಸಿದೆ. ನೂತನ ಸಚಿವರ ಪಟ್ಟಿಯಲ್ಲಿ ಸ್ಥಾನ […]