ಕಾರ್ಕಳ: ಇಸ್ಪೀಟು ಜುಗಾರಿ ಅಡ್ಡೆ ಮೇಲೆ ದಾಳಿ: 7 ಮಂದಿ ವಶ, ನಾಲ್ವರು ಪರಾರಿ

ಉಡುಪಿ: ನಿಟ್ಟೆ ಗ್ರಾಮದ ರೆಸಿಡೆನ್ಸಿಯೊಂದಕ್ಕೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು, ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಹೋಟೆಲ್ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪನಿರೀಕ್ಷಕರ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಸುಜೀತ್, ಅಭಿಮನ್ಯು, ಮಹೇಶ್, ಧೀರಜ್, ನರೇಶ್ ಕುಮಾರ್ ಹಾಗೂ ಪ್ರಶಾಂತ್ ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಯಶೋಧರ (ಅಣ್ಣು), ನೂರು ಮಹಮ್ಮದ್, […]
ಮಣಿಪಾಲ: ಯುವಕರ ಮೇಲೆ ಹಲ್ಲೆ, ಜೀವಬೆದರಿಕೆ: ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳ ಬಂಧನ

ಉಡುಪಿ: ಮಣಿಪಾಲ ಈಶ್ವರನಗರದ ಜನನಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆಯ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಮೂಲದ ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ್ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆಗಸ್ಟ್ 2ರ ರಾತ್ರಿ ಹೆರ್ಗ ಗ್ರಾಮದ ಈಶ್ವರನಗರದ ಜನನಿ ಬಾರ್ […]
ಭಾರತದಲ್ಲಿ ದಾಖಲೆ ಬರೆದು ಅಬ್ಬರಿಸಿದ ಸ್ಪೈಡರ್-ಮ್ಯಾನ್ ಮತ್ತು ದಿ ಒಡಿಸ್ಸಿ, ಅತ್ಯಧಿಕ ಟಿಕೆಟ್ ಮಾರಾಟ

2026ರಲ್ಲಿ ಬಿಡುಗಡೆಯಾದ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಮತ್ತು ‘ದಿ ಒಡಿಸ್ಸಿ’ ಭಾರತದಲ್ಲಿ ಭರ್ಜರಿ ಯಶಸ್ಸು ಕಂಡ ಹಾಲಿವುಡ್ ಚಿತ್ರಗಳಾಗಿವೆ. ಈ ಎರಡೂ ಸಿನಿಮಾಗಳು ಕುಟುಂಬ ಸಮೇತ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲ ವರ್ಗದವರಿಂದ ಉತ್ತಮ ಪ್ರತಿಕ್ರಿಯೆ ಪಡೆದಿವೆ. ಮುಂಬೈ, ದೆಹಲಿ-ಎನ್‌ಸಿಆರ್, ಬೆಂಗಳೂರು, ಚೆನ್ನೈ, ಕೋಲ್ಕತ್ತಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ನಗರಗಳ ಮಲ್ಟಿಪ್ಲೆಕ್ಸ್‌ಗಳಲ್ಲಿ ಈ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತಿವೆ. ಅದರಲ್ಲೂ ಹೈದರಾಬಾದ್ ಟಿಕೆಟ್ ಮಾರಾಟದ ಸಂಖ್ಯೆಯಲ್ಲಿ ದೇಶದ […]
ಸಚಿವ ಸ್ಥಾನ ವಂಚಿತ ನಾಯಕರ ಆಕ್ರೋಶ – 15ಕ್ಕೂ ಹೆಚ್ಚು ಶಾಸಕರಿಗೆ ಅಸಮಾಧಾನ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ (Cabinet Expansion) ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ(Congress) ಅಸಮಾಧಾನ ಆಸ್ಫೋಟಗೊಂಡಿದ್ದು ಶಾಸಕರ ಆಕ್ರೋಶ ಭುಗಿಲೆದ್ದಿದೆ. ಡಿಕೆ ಶಿವಕುಮಾರ್ (DK Shivakumar) ಸಂಪುಟದಲ್ಲಿ ನಾವು ಸಚಿವಗುತ್ತೇವೆ ಎಂದುಕೊಂಡಿದ್ದ ಶಾಸಕರಿಗೆ ದೆಹಲಿಯ ಹೈಕಮಾಂಡ್ ನಾಯಕರು ಶಾಕ್ ಕೊಟ್ಟಿದ್ದಾರೆ. ಹೀಗಾಗಿ ಅಸಮಾಧಾನಿತ ಶಾಸಕರು ರಾಜೀನಾಮೆ ಪಥ ತುಳಿದಿದ್ದಾರೆ. ಈಗಾಗಲೇ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಬೇಳೂರು ಗೋಪಾಲಕೃಷ್ಣ ಸಹ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಹಲವು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಅಲ್ಲಗೆಳೆಯುವಂತಿಲ್ಲ. ಬಾಕಿ ಇದ್ದ […]
ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

ಮಹಾನಗರ, ಆ. 2: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್ ಹೇಳಿದರು. ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ […]