ಸಾರ್ವಜನಿಕರಿಗೆ 3,000 ಔಷಧೀಯ ಸಸ್ಯಗಳ ಉಚಿತ ವಿತರಣೆ ನಡೆಸಿದ ಮುನಿಯಾಲ್ ಆಯುರ್ವೇದ ಸಂಸ್ಥೆ

ಮಣಿಪಾಲ: ಗುರುಪೂರ್ಣಿಮೆ ಹಾಗೂ ವನಮಹೋತ್ಸವದ ಅಂಗವಾಗಿ ಮುನಿಯಾಲ್ ಆಯುರ್ವೇದ ಸಂಸ್ಥೆ, ಮಣಿಪಾಲವು ಸಾರ್ವಜನಿಕರಿಗಾಗಿ ಉಚಿತ ಔಷಧೀಯ ಸಸ್ಯಗಳ ಸಸಿಗಳ ವಿತರಣಾ ಕಾರ್ಯಕ್ರಮವನ್ನು ಬುಧವಾರ ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿರುವ ಸಂಸ್ಥೆಯ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4.00 ಗಂಟೆಯವರೆಗೆ ಆಯೋಜಿಸಿತು. ಕಾರ್ಯಕ್ರಮವನ್ನು ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದ್ರವ್ಯಗುಣ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ ಭಟ್, ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ […]

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ- ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ರೆಂಜಾಳ ಗ್ರಾಮದಲ್ಲಿ ಪರಿಸ್ಥಿತಿ ಗಂಭೀರಗೊಂಡಿದೆ. ರೆಂಜಾಳ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಡಿಸಿ ಸ್ವರೂಪಾ ಟಿ.ಕೆ, ತಹಶೀಲ್ದಾ‌ರ್ ಪ್ರದೀಪ್ ಆರ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾಹುತವನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮವಾಗಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಸುರಕ್ಷತೆಯ ದೃಷ್ಟಿಯಿಂದ ಸಮೀಪದ ಸರಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸಿಸಲು ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪಾ […]

ಗಂಗೊಳ್ಳಿ: ಮತ್ಸ್ಯ ಕ್ಷಾಮ ನೀಗಿ ಸಮೃದ್ಧ ಮೀನುಗಾರಿಕೆ ಆಗಲಿ- ಮೀನುಗಾರರಿಂದ ಸಮುದ್ರರಾಜನಿಗೆ ವಿಶೇಷ ಪೂಜೆ

ಉಡುಪಿ: ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಬಾರದೆ, ಮೀನುಗಳ ಸಮೃದ್ಧಿ ನೆಲೆಸಿ ಮೀನುಗಾರಿಕೆಗೆ ತೆರಳಿದಾಗ ಯಾವುದೇ ಅಡ್ಡಿ ಆತಂಕಗಳು ಮೀನುಗಾರರಿಗೆ ಎದುರಾಗದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸಮುದ್ರಪೂಜೆ ನೆರವೇರಿಸಿದರು. ಗಂಗೊಳ್ಳಿಯ ಅರ್ಚಕ ವೇದಮೂರ್ತಿ ವಿಠಲ್‌ದಾಸ್‌ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿಗಳು ನೆರವೇರಿದವು. ಪರ್ಸಿನ್ ಬೋಟ್, ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲ‌ರ್ ಬೋಟ್‌ಗಳ ಸಂಘದ ಸದಸ್ಯರು ಸಮುದ್ರ ರಾಜನಿಗೆ ಹಾಲು, ಸೀಯಾಳ, ಫಲಪುಷ್ಪವನ್ನು ಅರ್ಪಿಸಿದರು.ಕಡಲಿನಲ್ಲಿ ತುಪಾನ್‌(ಗಾಳಿಯೊತ್ತಡ) ಹೆಚ್ಚಿದೆ. ಹೀಗಾಗಿ ಎರಡು ತಿಂಗಳ ಮೀನುಗಾರಿಕಾ ನಿರ್ಬಂಧ ಜು.31ಕ್ಕೆ […]

ಕೇಂದ್ರ ಸರ್ಕಾರದಿಂದ UPI ಬಳಕೆದಾರರಿಗೆ ಶಾಕ್, ₹2,000 ಮೇಲ್ಪಟ್ಟ UPI ಪಾವತಿಗೆ ಶುಲ್ಕ!

ನವದೆಹಲಿ: ₹2,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ (UPI) ಪಾವತಿಗಳ ಮೇಲೆ ವ್ಯಾಪಾರಿ ರಿಯಾಯಿತಿ ದರ (MDR) ವಿಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆಯಲ್ಲಿ, ಬ್ಯಾಂಕುಗಳು ಮತ್ತು ಪಾವತಿ ಸೇವಾ ಪೂರೈಕೆದಾರರು ಅಧಿಸೂಚಿತ ಎಲೆಕ್ಟ್ರಾನಿಕ್ ಪಾವತಿಗಳ ಮೇಲೆ ಎಂಡಿಆರ್ ವಿಧಿಸುವುದನ್ನು ತಡೆಯುವ ನಿರ್ಬಂಧವನ್ನು ತೆಗೆದುಹಾಕುವ ಪ್ರಸ್ತಾಪ ಮಾಡಲಾಗಿದೆ. ಆದರೆ, ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬುದರ ಕುರಿತು ಇನ್ನೂ ಅಂತಿಮ […]

ಸೆಲ್ಫಿ ಹುಚ್ಚಿಗೆ ಕಾಡಾನೆಯೊಂದಿಗೆ ಫೋಟೊ ತೆಗೆಯಲು ಹೋಗಿ ಜೀವ ಕಳೆದುಕೊಂಡ ಉದ್ಯಮಿ

ಬೆಂಗಳೂರು: ಕಾಡಾನೆಯೊಂದಿಗೆ ಸೆಲ್ಫಿ ತೆಗೆಯುವ ಸಾಹಸ ಉದ್ಯಮಿಯೊಬ್ಬರ ಜೀವವನ್ನೇ ಬಲಿತೆಗೆದುಕೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಕನಕಪುರ ವನ್ಯಜೀವಿ ಅಭಯಾರಣ್ಯದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ, 52 ವರ್ಷದ ಉದ್ಯಮಿ ನರೇಂದ್ರ ಶಿಂಧೆ ಎಂದು ಗುರುತಿಸಲಾಗಿದೆ. ಅವರು 10 ಸ್ನೇಹಿತರೊಂದಿಗೆ ರೆಸಾರ್ಟ್‌ಗೆ ತೆರಳಿದ್ದು, ವಾಪಸಾಗುವ ವೇಳೆ ಸೋಮವಾರ ಮುಂಜಾನೆ ಸುಮಾರು 1.30ರ ವೇಳೆಗೆ ಬಸವನಬೆಟ್ಟ ಸಮೀಪದ ಕರಬಗೆರೆ ಕೆರೆಯ ಬಳಿ ಈ ದುರ್ಘಟನೆ ಸಂಭವಿಸಿದೆ. ಆರಂಭದಲ್ಲಿ ನರೇಂದ್ರ ಶಿಂಧೆ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿದಿದ್ದಾಗ […]