ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ NIA ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ಬಂಧನ.

ಮಂಗಳೂರು, ಆ.6: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಎನ್‌ಐಎ ಮಾಹಿತಿ ಪ್ರಕಾರ, ಉಮ್ಮರ್ ಫಾರೂಕ್ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ ರೂ. […]
ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಗೆ ಡಾಕ್ಟರೇಟ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಯವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ‘ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಸಾಮರ್ಥ್ಯಗಳು, ಆಯ್ದ ಕನ್ನಡ ಭಾಷಾ ಸಾಮರ್ಥ್ಯಗಳು, ವೈಜ್ಞಾನಿಕ ತಾರ್ಕಿಕ ಚಿಂತನಾ ಸಾಮರ್ಥ್ಯ ಹಾಗೂ ವಿಜ್ಞಾನ ವಿಷಯದ ಶೈಕ್ಷಣಿಕ ಸಾಧನೆಯನ್ನು ಅಭಿವೃದ್ಧಿಪಡಿಸುವಲ್ಲಿ ಅಂತರಶಿಸ್ತೀಯ ಬಹುಮಾಧ್ಯಮ ಬೋಧನಾ ವಿಧಾನವು ಬೀರುವ ಪರಿಣಾಮಕಾರಿತ್ವದ ಅಧ್ಯಯನ’ ಎಂಬ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿಯನ್ನು ನೀಡಿದೆ.ಅಲೋಶಿಯಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಪಕಿ ಡಾ. ವಿಜಯಲಕ್ಷ್ಮಿ ನಾಯಕ್‌ರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.ಇವರು ತಮ್ಮ […]
ಕ್ರೈಸ್ಟ್ ಕಿಂಗ್: ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ ಶಿವಪುರ ಇವರ ವತಿಯಂದ ನಡೆದ ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಏಳನೇ ತರಗತಿಯ ಸಮೃದ್ದ್ ಭಂಡಾರಿ, ಪ್ರೌಢಶಾಲಾ ವಿಭಾಗದ ಒಂಬತ್ತನೇ ತರಗತಿಯ ಮೌಲ್ಯ ಹಾಗೂ ಹತ್ತನೇ ತರಗತಿಯ ವರುಣ್ ಕಾಮತ್ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.
ಮಾನಸಿಕ ಆರೋಗ್ಯಕ್ಕೂ ಲೈಂಗಿಕ ಜೀವನಕ್ಕೂ ಎಷ್ಟೊಂದು ಸಂಬಂಧ ಇದೆ! ಇಲ್ಲಿ ನೋಡಿ

ಜಗತ್ತು ಎಷ್ಟೇ ಮುಂದುವರೆದರೂ ಇಂದಿಗೂ ಕೂಡಾ ಪರಸ್ಪರ ಸಂಗಾತಿಗಳೇ ಲೈಂಗಿಕತೆ, ತಮ್ಮ ಇಷ್ಟ-ಕಷ್ಟಗಳು, ಜೀವನದಲ್ಲಿ ಲೈಂಗಿಕ ಆರೋಗ್ಯ (Sexual Health)ದ ಕುರಿತು ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ. ಅದು ನಮ್ಮ ಸಂಸ್ಕೃತಿ, ಸಂಪ್ರದಾಯ, ಆಚಾರ, ಶಿಕ್ಷಣದ ಪ್ರಭಾವ ಇರಬಹುದು. ಆದರೆ, ಲೈಂಗಿಕತೆ ಹಾಗೂ ಮಾನಸಿಕ ಆರೋಗ್ಯ ಒಂದಕ್ಕೊಂದು ತುಂಬಾ ಸಂಬಂಧಿಸಿದ್ದಾಗಿದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಅಥವಾ ಈಗಾಗಲೇ ನಿಮಗೆ ಈ ರೀತಿಯ ಅನುಭವವೂ ಆಗಿರಬಹುದು. ಉತ್ತಮ ಮಾನಸಿಕ ಆರೋಗ್ಯವು ಆರೋಗ್ಯಕರ ಲೈಂಗಿಕ ಜೀವನಕ್ಕೆ ನೆರವಾಗುತ್ತದೆ. ಅದೇ ರೀತಿ, ತೃಪ್ತಿದಾಯಕ […]
ರಾಹುಲ್ ಗಾಂಧಿ ವರ್ತನೆ ಪ್ರಜಾಪ್ರಭುತ್ವಕ್ಕೆ ಕಳಂಕ: ಕೋಟ ಶ್ರೀನಿವಾಸ ಪೂಜಾರಿ ಟೀಕೆ

ಉಡುಪಿ: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುವ ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸುವ ರೀತಿಯ ಅವರ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಪಮಾನಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಸ್ಥಳದಲ್ಲಿ ಯಾವ ರೀತಿಯಲ್ಲಿ ವರ್ತಿಸಬೇಕು, ಯಾವ ರೀತಿಯಲ್ಲಿ ಮಾತನಾಡಬೇಕು ಎನ್ನುವ ಪ್ರೌಢಿಮೆ ಇನ್ನೂ […]