ಕರಾವಳಿಯ ರೈಲ್ವೇ ಪ್ರಯಾಣಿಕರ ಕನಸು ಆಗಸ್ಟ್ 11 ಕ್ಕೆ ನನಸು! ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ಗೆ ರೆಡಿ

ಮಂಗಳೂರು: ಕರಾವಳಿ ಭಾಗದ ಜನರು ಬಹುಕಾಲದಿಂದ ಕಾಯುತ್ತಿದ್ದ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಆರಂಭದತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಆಗಸ್ಟ್ 11ರಿಂದ ಈ ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಆರಂಭವಾಗಲಿದ್ದು, ವಾಣಿಜ್ಯ ಸಂಚಾರಕ್ಕೂ ಮುನ್ನ ಅಂತಿಮ ಹಂತದ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 20 ಕೋಚ್‌ಗಳ ವಿಶೇಷ ರೇಕ್ ಚೆನ್ನೈನಿಂದ ಆಗಮಿಸಿದ್ದು, ಸದ್ಯ ಮಂಡ್ಯ ಜಿಲ್ಲೆಯ ಪಾಂಡವಪುರ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಿದೆ. 9 ದಿನಗಳ ಟ್ರಯಲ್ […]
ಟ್ರಂಪ್ ಹೆಲಿಕಾಪ್ಟರ್ ಮತ್ತು ಪ್ರಯಾಣಿಕ ವಿಮಾನ ಅಪಾಯಕಾರಿ ಹಾರಾಟ, ಕೂದಲೆಳೆ ಅಂತರದಿಂದ ಪಾರಾಯ್ತು ಟ್ರಂಪ್ ಇದ್ದ ಹೆಲಿಕಾಪ್ಟರ್! ತಪ್ಪಿದ ದೊಡ್ಡ ದುರಂತ!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ Donald Trump ಪ್ರಯಾಣಿಸುತ್ತಿದ್ದ ಮೆರೈನ್ ಒನ್ ಹೆಲಿಕಾಪ್ಟರ್ ಮತ್ತು ವಾಣಿಜ್ಯ ಪ್ರಯಾಣಿಕ ವಿಮಾನದ ನಡುವೆ ಅಪಾಯಕಾರಿ ಸಮೀಪದ ಹಾರಾಟ (near miss) ಸಂಭವಿಸಿದ್ದು, ಅಮೆರಿಕದ ವಾಯು ಸುರಕ್ಷತಾ ವ್ಯವಸ್ಥೆ ಕುರಿತು ಮತ್ತೆ ಆತಂಕ ಮೂಡಿಸಿದೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಪ್ರಕಾರ, ಮಂಗಳವಾರ ಮೆರೈನ್ ಒನ್ ಹೆಲಿಕಾಪ್ಟರ್ ಮತ್ತು ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಾಣಿಜ್ಯ ಜೆಟ್ ನಡುವೆ ನಿಗದಿತ ಕನಿಷ್ಠ ಸುರಕ್ಷತಾ ಅಂತರ ಕಾಯ್ದುಕೊಳ್ಳಲಾಗಿಲ್ಲ. ಆದರೆ, ಎರಡೂ […]
ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ನಡೆದಿದೆ. ಮೃತ ಬಾಲಕನನ್ನು ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಇವರು ಮಾಧವ ಅಮೀನ್ ಅವರ ಪುತ್ರರಾಗಿದ್ದು, ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಸಂಜೆ ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಲಿಖಿತ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ […]
ದರ್ಶನ್‌ಗೆ ಮತ್ತೊಂದು ಸಂಕಷ್ಟ? ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-14 ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣಿಸಿಕೊಂಡಿದೆ. ಪ್ರಕರಣದ ಎ-14 ಆರೋಪಿ ಪ್ರದೋಷ್, ತನ್ನನ್ನು ಮಾಫಿ ಸಾಕ್ಷಿ (Approver) ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಪ್ರದೋಷ್ ಸಲ್ಲಿಸಿರುವ ಅರ್ಜಿಯಲ್ಲಿ, ಪ್ರಕರಣದ ಕುರಿತು ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾನೆ. ಈ ಅರ್ಜಿಯ ವಿಚಾರಣೆಗಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. […]