ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲಾ ಮಟ್ಟದ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಅಜ್ಜರಕಾಡು […]

ಭಾರೀ ಮಳೆ ಹಿನ್ನಲೆ ಅಗಸ್ಟ್ 8 ರಂದು ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಸೂಚನೆಯ ಹಿನ್ನಲೆಯಲ್ಲಿ ಆ.8ರಂದು ಶನಿವಾರ ದ.ಕ.ಜಿಲ್ಲೆಯ ಪುತ್ತೂರು ಉಪವಿಭಾಗದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗದ ತಾಲೂಕುಗಳಾದ ಪುತ್ತೂರು, ಸುಳ್ಯ, ಕಡಬ,ಬೆಳ್ತಂಗಡಿ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳು 12 ನೇ ತರಗತಿವರೆಗೆ (ಎಲ್ಲಾ ವಸತಿ ಶಾಲಾ ಕಾಲೇಜು ಸೇರಿದಂತೆ) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

ರಾಜ್ಯದ ಎಲ್ಲ ಹೋಟೆಲ್‌ಗಳಲ್ಲೂ ಆಹಾರದ ಗುಣಮಟ್ಟ ಪರಿಶೀಲನೆ: ಸಚಿವ ಯು.ಟಿ. ಖಾದರ್

ಉಡುಪಿ: ಆಹಾರ ಸೇವನೆಯಲ್ಲಿ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಪ್ರತಿಯೊಂದು ಹೋಟೆಲ್‌ನಲ್ಲಿಯೂ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯವನ್ನು ಮೇಲ್ಮಟ್ಟದಿಂದಲೇ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಎಲ್ಲ ಪಂಚತಾರಾ ಹೋಟೆಲ್‌ಗಳಿಗೆ ನಮ್ಮ ತಂಡ ಈಗಾಗಲೇ ತೆರಳಿ ಪರಿಶೀಲನೆ ನಡೆಸಿದೆ. ಮುಂದಿನ ದಿನಗಳಲ್ಲಿ ಎಲ್ಲ ಹೋಟೆಲ್‌ಗಳಲ್ಲಿಯೂ ತಪಾಸಣೆ ನಡೆಯಲಿದೆ. ಪಂಚತಾರಾ ಹೋಟೆಲ್‌ಗಳಲ್ಲಿಯೇ ಕ್ರಮ ಕೈಗೊಂಡರೆ, ಕೆಳಹಂತದ […]

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು

ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಸದಾನಂದ ನಾಯಕ್(55) ಎಂದು ಗುರುತಿಸಲಾಗಿದೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಮೃತದೇಹ ಕಾರಿನೊಳಗೆ ಸಿಲುಕಿಕೊಂಡಿದೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿದ್ದು, ಕಾರಿನ ಮೇಲಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.ಮರ ತೆರವುಗೊಳಿಸಿದ ಬಳಿಕವಷ್ಟೇ ಮೃತದೇಹವನ್ನು ಕಾರಿನಿಂದ ಹೊರತೆಗೆಯಲು ಸಾಧ್ಯವಾಗಲಿದೆ […]

ನೆಟ್‌ಫ್ಲಿಕ್ಸ್‌ನಲ್ಲೂ ಧೂಳೆಬ್ಬಿಸಿದ ‘ಧುರಂಧರ್’ ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದು ದಾಖಲೆ ಬರೆದ ಸಿನಿಮಾ!

ಮುಂಬೈ : ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದ್ದ ‘ಧುರಂಧರ್’ (Dhurandhar) ಸಿನಿಮಾ ಇದೀಗ ಒಟಿಟಿಯಲ್ಲೂ ಹೊಸ ಇತಿಹಾಸ ನಿರ್ಮಿಸಿದೆ. ನಟ ರಣವೀರ್ ಸಿಂಗ್ ಅಭಿನಯದ ಈ ಚಿತ್ರವನ್ನು ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದ ಇಂಗ್ಲಿಷೇತರ ಸಿನಿಮಾ ಎಂದು ಟೆಡ್ ಸರಾಂಡೋಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರವು 2026ರ ಜನವರಿಯಿಂದ ಜೂನ್‌ವರೆಗೆ **Netflix**ನಲ್ಲಿ 3.7 ಕೋಟಿ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಲ್ಲದೆ, 22 ದೇಶಗಳ ನೆಟ್‌ಫ್ಲಿಕ್ಸ್ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದು […]