ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ

ಉಡುಪಿ: ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಶೂಟೌಟ್‌ಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ […]
ಇನ್ನು EMI ಕಟ್ಟಿಲ್ಲ ಅಂತ ಬ್ಯಾಂಕ್ ಗಳು ಗ್ರಾಹಕರಿಗೆ ಹೀಗೆಲ್ಲಾ ಕಿರುಕುಳ ಕೊಡೊ ಹಾಗಿಲ್ಲ,ಬಂತು RBI ನ ಹೊಸ ರೂಲ್ಸ್

ನವದೆಹಲಿ : EMI ಪಾವತಿ ತಡವಾದ ಕಾರಣ ಬ್ಯಾಂಕ್‌ಗಳು ಅಥವಾ ರಿಕವರಿ ಏಜೆಂಟ್‌ಗಳಿಂದ ಪದೇ ಪದೇ ಕರೆ, ಬೆದರಿಕೆ ಹಾಗೂ ಅವಮಾನಕ್ಕೆ ಒಳಗಾಗುತ್ತಿದ್ದ ಸಾಲಗಾರರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ರಿಲೀಫ್ ನೀಡಿದೆ. ಸಾಲ ವಸೂಲಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಮಾನವೀಯವಾಗಿಸಲು RBI ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, 2027ರ ಜನವರಿ 1ರಿಂದ ದೇಶಾದ್ಯಂತ ಜಾರಿಗೆ ಬರಲಿವೆ. ಬೆಳಗ್ಗೆ 8ರಿಂದ ಸಂಜೆ 7ರವರೆಗೆ ಮಾತ್ರ ಸಂಪರ್ಕ ಹೊಸ ನಿಯಮದ ಪ್ರಕಾರ, ಬ್ಯಾಂಕ್‌ಗಳು ಮತ್ತು ರಿಕವರಿ ಏಜೆಂಟ್‌ಗಳು […]
ಉಡುಪಿ ಕೃಷ್ಣಮಠಕ್ಕೆ ವಿಹಿಂಪ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

ಉಡುಪಿ: ವಿಶ್ವ ಹಿಂದೂ ಪರಿಷತ್ (ವಿಹಿಂಪ) ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್, ಉಡುಪಿ ಜಿಲ್ಲಾ ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಜಿಲ್ಲಾ ಸಂಯೋಜಕ ಚೇತನ್ ಪೆರಲ್ಕೆ […]
ಬೈಂದೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ

ಉಡುಪಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಎಂಟು ಗ್ರಾಮಗಳನ್ನು ಕೈಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಒಂದು ವರ್ಷದ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿತು. ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಸೇನೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿವರೆಗೆ ಸಾಗಿತು. ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಗ್ರಾಮಗಳನ್ನು ಸೇರ್ಪಡೆಗೊಳಿಸಿರುವುದರಿಂದ […]
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಶುಕ್ರವಾರ ಕಾಪು ಲೈಟ್‌ಹೌಸ್ ಸಮೀಪದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಲ್ಕೊರೆತದಿಂದ ಉಂಟಾಗಿರುವ ಸಮಸ್ಯೆ ಹಾಗೂ ಕರಾವಳಿ ಪ್ರದೇಶದ ಪರಿಸ್ಥಿತಿಯನ್ನು ಸಚಿವರು ಸ್ಥಳದಲ್ಲೇ ಪರಿಶೀಲಿಸಿದರು. ಕಡಲ್ಕೊರೆತ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಕಡಲ್ಕೊರೆತದಿಂದ ಸಾರ್ವಜನಿಕರಿಗೆ ಹಾಗೂ ಕರಾವಳಿ ಪ್ರದೇಶಕ್ಕೆ ಉಂಟಾಗುತ್ತಿರುವ […]