ಸಕಲ ಸಿದ್ಧತೆಗಳೊಂದಿಗೆ ಸಜ್ಜಾದ ಮೂಡುಬಿದಿರೆಯ ವಿದ್ಯಾಗಿರಿ ಆವರಣ: ‘ಆಳ್ವಾಸ್ ಪ್ರಗತಿ 2026’ ಬೃಹತ್ ಉದ್ಯೋಗ ಮೇಳ

ವಿದ್ಯಾಗಿರಿ: ಇಪ್ಪತ್ತಾರು ಸಾವಿರದ ಮುನ್ನೂರಕ್ಕೂ ಹೆಚ್ಚಿನ ಉದ್ಯೋಗಾವಕಾಶ, 350 ಕ್ಕೂ ಹೆಚ್ಚು ಪ್ರಸಿದ್ಧ ಬಹುರಾಷ್ಟ್ರೀಯ ಹಾಗೂ ಸ್ಥಳೀಯ ಸೇರಿದಂತೆ ವಿವಿಧ ವಲಯಗಳ ಕಂಪೆನಿಗಳ ಸಮಾಗಮದ ಬೃಹತ್ ಉದ್ಯೋಗ ಮೇಳವಾದ ‘ಆಳ್ವಾಸ್ ಪ್ರಗತಿ -2026’ 16ನೇ ಆವೃತಿಗೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಜ್ಜಾಗಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2026ರ ಆಗಸ್ಟ್ 7 ಮತ್ತು ೮ರಂದು ಮೂಡುಬಿದಿರೆಯ ಆಳ್ವಾಸ್‌ವಿದ್ಯಾಗಿರಿ ಆವರಣದಲ್ಲಿ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ.ಆಳ್ವಾಸ್ ಪದವಿಪೂರ್ವ ಕಾಲೇಜಿನ ಆವರಣ ಹಾಗೂ ಒಲ್ಡ್ ಪಿಜಿ ಬ್ಲಾಕ್, ನುಡಿಸಿರಿ […]

ಉಡುಪಿ; ಡೇವಿಡ್‌ ಡಿಸೋಜ ಕೊಲೆ ಆರೋಪಿಯ ಬಂಧನ; ಪೋಲಿಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ರಾಜು ಕಾಲಿಗೆ ಗುಂಡು

ಉಡುಪಿ: ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ವೇಳೆ ಎಸ್ ಐ ತೇಜಸ್ವಿ ಅವರಿಗೆ ಗಾಯವಾಗಿದ್ದು […]