ಅಧಿವಕ್ತ ಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಉಡುಪಿ: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿರುವ ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗೌರವಪೂರ್ವಕವಾಗಿ ಗುರುವಂದನೆ ಸಲ್ಲಿಸಿ, ಅಭಿನಂದಿಸಲಾಯಿತು. ಕಾನೂನು ಕ್ಷೇತ್ರದಲ್ಲಿ ತಮ್ಮ ಅಪಾರ ಅನುಭವ ಹಾಗೂ ಜ್ಞಾನದಿಂದ ಶಿಷ್ಯವರ್ಗದವರಿಗೆ ಅಮೂಲ್ಯ ಮಾರ್ಗದರ್ಶನ ನೀಡಿರುವ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆ ಹಾಗೂ ವಕೀಲ […]

ಆ.9ರಂದು ಮಣಿಪಾಲದಲ್ಲಿ ಕೆನರಾ ಬ್ಯಾಂಕ್ 5ನೇ ಆವೃತ್ತಿಯ ಫ್ರೀಡಂ ರನ್ ಚಾಲನೆ

ಪರಿಸರ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್‌ನ 5ನೇ ಆವೃತ್ತಿಯ ಫ್ರೀಡಂ ರನ್ ಕಾರ್ಯಕ್ರಮ ಆಗಸ್ಟ್ 9ರ (ಭಾನುವಾರ) ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ನಡೆಯಿತು.ಉಡುಪಿ ಜಿಲ್ಲೆಯ ಶಾಸಕರಾದ ಯಶಪಾಲ್ ಸುವರ್ಣ ಫ್ರೀಡಂ ರನ್‌ ಗೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಉಡುಪಿಯ ಪ್ರಸಿದ್ಧ ANGELS ZUMBA ಪೂರ್ಣಿಮಾ ಇವರಿಂದ ವಾರ್ಮ್ ಅಪ್ ಸೆಶನ್ ನಡೆಯಿತು. ಈ ವರ್ಷದ ಫ್ರೀಡಂ ರನ್ ಅನ್ನು ‘ಗೋ ಗ್ರೀನ್’ ಥೀಮ್‌ನಡಿ ಆಯೋಜಿಸಲಾಗಿದ್ದು ಪರಿಸರ […]

ಲಿಪ್‌ಸ್ಟಿಕ್ ಬಳಸುವ ಮಹಿಳೆಯರೇ ನಿಮಗೊಂದು ಶಾಕಿಂಗ್ ನ್ಯೂಸ್, ರಾಜ್ಯದ 23 ಮಾದರಿ ಲಿಪ್‌ಸ್ಟಿಕ್ ಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ!

ಬೆಂಗಳೂರು: ಲಿಪ್‌ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟವಾಗುತ್ತಿದ್ದ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನೂ ಅಧಿಕಾರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಕಾರ್ಸಿನೋಜೆನಿಕ್ ಅಂಶ ಪತ್ತೆ ಪರಿಶೀಲನೆಗೆ ಒಳಪಡಿಸಿದ ಕೆಲವು ಲಿಪ್‌ಸ್ಟಿಕ್ ಮಾದರಿಗಳಲ್ಲಿ ಕಾರ್ಸಿನೋಜೆನಿಕ್ ಅಂಶಗಳು ಹಾಗೂ ಲೋಹದ […]

ರಾಜಕೀಯವಾಗಿ ಎಷ್ಟೇ ಸವಾಲುಗಳು ಎದುರಾದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಾಗ್ದಾಳಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಗೂ ಮುನ್ನ ಕಾಪು ಜನಾರ್ದನ ದೇವಸ್ಥಾನದಿಂದ ಕಾಪು ಪೇಟೆಯವರೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಕಾಲ್ನಡಿಗೆ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾವಿರಾರು ಮಂದಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ‘ನನ್ನ ಬದುಕಿನಲ್ಲಿ ಯಾರ ಮನಸ್ಸಿಗೂ ನೋವು ಮಾಡಿಲ್ಲ. ಮೋಸ, ವಂಚನೆ ನನಗೆ […]

ರೈಲ್ವೆಯಲ್ಲಿ 30 ಸಾವಿರ ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ! ಸೆಪ್ಟೆಂಬರ್ ಅಧಿಸೂಚನೆ, ಪರೀಕ್ಷೆಗೆ ಈಗಲೇ ತಯಾರಿ ನಡೆಸಿ

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವವರಿಗೆ ಸಿಹಿಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಸುಮಾರು 30,000 ಗ್ರೂಪ್ ಡಿ (ಲೆವೆಲ್-1) ಹುದ್ದೆಗಳಿಗೆ ನೇಮಕಾತಿ ನಡೆಸಲು ಸಿದ್ಧತೆ ನಡೆಸುತ್ತಿದೆ. ದೇಶದ ವಿವಿಧ ರೈಲ್ವೆ ವಲಯಗಳು ಹಾಗೂ ಉತ್ಪಾದನಾ ಘಟಕಗಳಿಂದ ಖಾಲಿ ಹುದ್ದೆಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಅಧಿಕೃತ ಅಧಿಸೂಚನೆ 2026ರ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಅಧಿಸೂಚನೆ ಬಳಿಕ ಆನ್‌ಲೈನ್ ಅರ್ಜಿ ಪ್ರಕ್ರಿಯೆ […]