ಕ್ರೈಸ್ಟ್ ಕಿಂಗ್: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಎಸ್.ವಿ.ಟಿ ಪ್ರೌಢಶಾಲೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ವಿಭಾಗದ ಹಾಗೂ ಬಾಲಕರ ವಿಭಾಗದಲ್ಲಿ ಒಟ್ಟು ಆರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಬಾಲಕರವಿಭಾಗದಲ್ಲಿ ಒಂಬತ್ತನೇ ತರಗತಿಯ ಸಾತ್ವಿಕ್ ಮತ್ತು ಬಾಲಕಿಯರ ವಿಭಾಗದಲ್ಲಿ ಹತ್ತನೇ […]

ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ – ಅವಧಿ ವಿಸ್ತರಣೆ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19 ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ(ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡುವ ಯೋಜನೆ ಈಗಾಗಲೇ ಜಾರಿಗೆ ತರಲಾಗಿದ್ದು, ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೂಲ ಮೊತ್ತವನ್ನು ಪಾವತಿಸಿ ಸರಕಾರದ “ಒಂದಾವರ್ತಿ […]

ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ತರಬೇತಿ ಮುಖ್ಯ: ಬಸ್ರೂರು ರಾಜೀವ ಶೆಟ್ಟಿ

ಉಡುಪಿ: ಇಂದು ತಂತ್ರಜ್ಞಾನ ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈ ಸಂದರ್ಭದಲ್ಲಿ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿ ಬಳಸಿಕೊಳ್ಳಲು ಉತ್ತಮ ತರಬೇತಿಗಳ ಅಗತ್ಯವಿದೆ. ತರಬೇತಿಯ ಮೂಲಕ ರೆಡ್ ಕ್ರಾಸ್ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲು ಸಾಧ್ಯ ಎಂದು ರಾಜ್ಯ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿಯವರು ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಘಟಕಗಳ […]

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ – ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ: ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಅವರುಗಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈ ಜಂತುಹುಳು ನಿವಾರಣೆಗಾಗಿ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಈ ಮಾತ್ರೆಯನ್ನು ಸೇವಿಸುವುದರೊಂದಿಗೆ ಆರೋಗ್ಯಯುತ ಜೀವನ ನಡೆಸುವಂತೆ ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ ನೀಡಿದರು. ಅವರು ಇಂದು ನಗರದ ಸೈಂಟ್ ಸಿಸಿಲಿ ಪ್ರೌಢಶಾಲಾ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ […]

ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕರಾವಳಿಯಲ್ಲೇ ಅತಿ ಎತ್ತರದ ಧ್ವಜಸ್ತಂಭ; ಆ.15ರಂದು ರಾಷ್ಟ್ರಧ್ವಜ ಹಾರಾಟ

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ನಗರಿ ಮಂಗಳೂರಿನ ಐತಿಹಾಸಿಕ ಬಾವುಟಗುಡ್ಡೆಯ ಟಾಗೋರ್ ಪಾರ್ಕ್‌ನಲ್ಲಿ ಕರಾವಳಿಯಲ್ಲೇ ಅತಿ ಎತ್ತರದ ನೂತನ ಧ್ವಜಸ್ತಂಭ ನಿರ್ಮಾಣಗೊಂಡಿದೆ. ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಈ ಬೃಹತ್ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಾಡಲಿದೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ಈ ಬೃಹತ್ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ಪಾಲಿಕೆಯಲ್ಲಿ ಠೇವಣಿ ಇರಿಸಲಾಗಿದ್ದ ಅನುದಾನವನ್ನು ಕಾಮಗಾರಿಗೆ ಬಳಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ 78 ಮೀಟರ್ ಎತ್ತರದ ಧ್ವಜಸ್ತಂಭವನ್ನು ನಿರ್ಮಿಸಲಾಗಿದ್ದು, […]