ಮಣಿಪಾಲ: ಮರಕ್ಕೆ ಬುಲೆಟ್ ಡಿಕ್ಕಿ ಹೊಡೆದು ಯುವಕ ಮೃತ್ಯು; ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಘಟನೆ

ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.ಆತ್ರಾಡಿ ನಿವಾಸಿ ಸನತ್ (21) ಮೃತಪಟ್ಟವರು. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ KA-20-EP-5934 ನೋಂದಣಿ ಸಂಖ್ಯೆಯ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ […]
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ: ಸಾವಿಗೆ ನಿಖರ ಕಾರಣ ಡೆತ್ ನೋಟ್ ನಲ್ಲಿ ಬಹಿರಂಗ!

ಉಡುಪಿ: ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ಸೊಸೈಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್, ಸೋಮವಾರ ಆತ್ಮಹತ್ಯೆಗೂ ಮುನ್ನ ಏಳು ಪುಟಗಳ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾರಿ ಮೊತ್ತದ ಹಣ ಕಳೆದುಕೊಂಡಿದ್ದ ಅವರು, ಸ್ನೇಹಿತರಿಂದ ಸಾಲ ಪಡೆದಿದ್ದರು. ಸಾಲವನ್ನು […]
ಹೋಟೆಲ್ ಕಿಚನ್‌ಗಳಿಗೆ ಬಂತು ಹೊಸ ರೂಲ್ಸ್; ಎಕ್ಸ್‌ಪೈರಿ, ಫಂಗಸ್ ಆಹಾರಕ್ಕೆ ಕಡಿವಾಣ!

ಬೆಂಗಳೂರು: ಹೋಟೆಲ್, ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಅಡುಗೆಮನೆಗಳ ನಿರ್ವಹಣೆಗೆ ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳು ಜಾರಿಗೆ ಬರುವ ಸಾಧ್ಯತೆ ಇದೆ. ಜನರ ಆರೋಗ್ಯದ ದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಹೊಸ ನಿಯಮಗಳನ್ನು ರೂಪಿಸುತ್ತಿದ್ದು, ಅವಧಿ ಮೀರಿದ ಆಹಾರ, ಫಂಗಸ್ ಹಿಡಿದ ತರಕಾರಿ ಹಾಗೂ ಹಾಳಾದ ಮಾಂಸ ಮತ್ತು ಹಾಲಿನ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕುವುದು ಇದರ ಪ್ರಮುಖ ಉದ್ದೇಶವಾಗಿದೆ. ಇತ್ತೀಚೆಗೆ ನಡೆದ ಆಹಾರ ಸುರಕ್ಷತಾ ತಪಾಸಣೆ ವೇಳೆ ಹಲವು ಹೋಟೆಲ್‌ಗಳ ಕಿಚನ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು, […]
ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರು: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ನಮೂದಿಸಿರುವ ವಿಚಾರ ಇದೀಗ ಚರ್ಚೆಗೆ ಕಾರಣವಾಗಿದೆ. ನಾಮಫಲಕದ ತಯಾರಿಕೆ ಹಾಗೂ ಅಳವಡಿಕೆಗೆ ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬುದರ ಕುರಿತು ತನಿಖೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ. ಅಧಿಕೃತ ಸರ್ಕಾರಿ ನಿವಾಸವನ್ನು ಅಧಿಕಾರಿಯ ಹುದ್ದೆಯ ಆಧಾರದ ಮೇಲೆ ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ನಾಮಫಲಕದಲ್ಲಿ ಸಾಮಾನ್ಯವಾಗಿ ಅಧಿಕಾರಿಯ […]
ಆಟೋದಲ್ಲಿ ಬಂದು ಬೈಕ್‌ನಲ್ಲಿದ್ದ ಹೆಲ್ಮೆಟ್ ಕಳವು

ಉಡುಪಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರಂತೆ ಬಂದು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೆಲ್ಮೆಟ್ ಕಳವು ಮಾಡಿರುವ ಘಟನೆ ನಗರದ ತೆಂಕಪೇಟೆಯ ಐಡಿಯಲ್ ಜಂಕ್ಷನ್ ಬಳಿ ನಡೆದಿದೆ. ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿಯೊಬ್ಬರು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಗಮನಿಸಿ, ಬೈಕ್‌ನಲ್ಲಿ ಇರಿಸಲಾಗಿದ್ದ ಹೆಲ್ಮೆಟ್ ಅನ್ನು ಎಗರಿಸಿ ಪರಾರಿಯಾಗಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.