ಮಲ್ಪೆ ಬೀಚ್‌ನಲ್ಲಿ ಕಸದ ರಾಶಿ; ಸೊಳ್ಳೆ ಉತ್ಪತ್ತಿ ತಾಣವಾಗುವ ಆತಂಕ

ಉಡುಪಿ: ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿರುವ ಮಲ್ಪೆ ಬೀಚ್ ಪರಿಸರದಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು, ಕಸದ ರಾಶಿ ಹಾಗೂ ಅಂಗಡಿಗಳ ಹಿಂಭಾಗದಲ್ಲಿ ನಿಂತ ನೀರಿನಿಂದ ಸೊಳ್ಳೆಗಳ ಉತ್ಪತ್ತಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ಭೀತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಬೀಚ್ ಪರಿಸರದಲ್ಲಿನ ಅವ್ಯವಸ್ಥೆ ಸಾರ್ವಜನಿಕರ ಗಮನ ಸೆಳೆದಿದೆ. ಅಂಗಡಿಗಳ ಹಿಂಭಾಗದಲ್ಲಿ ಪ್ಲಾಸ್ಟಿಕ್ ಬಕೆಟ್‌ಗಳು, ಬಾಟಲಿಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ಸಂಗ್ರಹವಾಗುತ್ತಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿಗೆ […]

ಗುರುವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ; ಬೇಡಿಕೆಗಳೇನು?

ಬೆಂಗಳೂರು: ಕಾವೇರಿ ನೀರು ಹಂಚಿಕೆ ಸೇರಿದಂತೆ ಕರ್ನಾಟಕದ ಹಿತಾಸಕ್ತಿ ಸಂಬಂಧಿತ ವಿಚಾರಗಳನ್ನು ಮುಂದಿಟ್ಟುಕೊಂಡು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗಸ್ಟ್ 13, ಗುರುವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕರ್ನಾಟಕದ ಹಕ್ಕುಗಳು ಮತ್ತು ಹಿತಾಸಕ್ತಿಗಳ ರಕ್ಷಣೆಗೆ ರಾಜ್ಯಾದ್ಯಂತ ಬಂದ್ ನಡೆಸಬೇಕೆಂದು ಅವರು ಮನವಿ ಮಾಡಿದ್ದಾರೆ. ಬಂದ್‌ಗೆ ಸಾರ್ವಜನಿಕರ ಬೆಂಬಲ ಪಡೆಯುವ ಉದ್ದೇಶದಿಂದ ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಸಂಚರಿಸಿ ಗಲ್ಲಿ ಗಲ್ಲಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಹಲವು ಕನ್ನಡಪರ […]

ಮಂಗಳೂರಿನಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಬಿದ್ದ ವ್ಯಕ್ತಿ,ರೈಲ್ವೇ ಸಿಬ್ಬಂದಿಯಿಂದ ತಪ್ಪಿತು ಭೀಕರ ಅಪಘಾತ

ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸುವ ವೇಳೆ ಹಳಿಗೆ ಬಿದ್ದ ವೃದ್ಧ ಪ್ರಯಾಣಿಕರೊಬ್ಬರನ್ನು ರೈಲ್ವೆ ಪಾಯಿಂಟ್ಸ್‌ಮ್ಯಾನ್ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಸೋಮವಾರ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಪಾಯಿಂಟ್ಸ್‌ಮ್ಯಾನ್ ಅವರ ತ್ವರಿತ ಕಾರ್ಯಾಚರಣೆಯಿಂದ ಸಂಭವನೀಯ ಭೀಕರ ಅಪಘಾತವೊಂದು ತಪ್ಪಿದೆ. ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ರೈಲು ಸುರತ್ಕಲ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ವೃದ್ಧ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗಿಳಿದು ನಿಲ್ದಾಣದಲ್ಲಿದ್ದ ಅಂಗಡಿಗೆ ತೆರಳಿದ್ದರು. ಅವರು ವಾಪಸ್ ಬರುವಷ್ಟರಲ್ಲಿ ರೈಲು ಚಲಿಸಲು ಆರಂಭಿಸಿತ್ತು. ಅಂಗಡಿಯಲ್ಲೇ ತಾನು ಖರೀದಿಸಿದ್ದ ವಸ್ತುವೊಂದನ್ನು ಬಿಟ್ಟು […]

ಟರ್ಕಿಯಿಂದ ರಹಸ್ಯ ವಿಮಾನದಲ್ಲಿ ಪ್ರಯಾಣಿಸಿದ್ದ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕಳೆದ ತಿಂಗಳು ಟರ್ಕಿಯಿಂದ (Turkey) ರಹಸ್ಯ ಮಿಲಿಟರಿ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ವಿಚಾರ ಈಗ ತಡವಾಗಿ ಬೆಳಕಿಗೆ ಬಂದಿದೆ. ಇರಾನ್‌ನಿಂದ (Iran) ಎದುರಾಗಿದ್ದ ಹತ್ಯೆಯ ಬೆದರಿಕೆಯ ಹಿನ್ನೆಲೆಯಲ್ಲಿ ಈ ಹಠಾತ್ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಆ ಸಮಯದಲ್ಲಿ ಶ್ವೇತಭವನವು ಟ್ರಂಪ್ ತಮ್ಮ ಅಧಿಕೃತ ಏರ್ ಫೋರ್ಸ್ ಒನ್(Air Force One) ವಿಮಾನದಲ್ಲೇ ಪ್ರಯಾಣಿಸುತ್ತಿದ್ದಾರೆ ಎಂದು ತಿಳಿಸಿತ್ತು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಕಾರ್ಯಾಚರಣೆ ಹೇಗೆ ನಡೆಯಿತು?ನ್ಯಾಟೋ […]

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ, ಪತ್ನಿಗೆ ಕೊಲೆ ಬೆದರಿಕೆ – ತನಿಖೆ ಆರಂಭ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಮತ್ತು ಅವರ ಪತ್ನಿ ಡೋನಾ ಗಂಗೂಲಿ (Dona Ganguly) ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಪ್ರಸ್ತುತ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಗಂಗೂಲಿ ಅವರ ಕಚೇರಿಗೆ ಕಳೆದ ಆರು ತಿಂಗಳಿಂದ ಇಂತಹ ಬೆದರಿಕೆ ಪತ್ರಗಳು ಬರುತ್ತಿವೆ. ಆರಂಭದಲ್ಲಿ ಇವುಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಆ.10ರಂದು ಬಂದ ಎರಡು ಪತ್ರಗಳಲ್ಲಿ ಸೌರವ್ […]