ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮಗ್ರಂಥ ಪಾಲಕರ ದಿನಾಚರಣೆ ನಿಮಿತ್ತ ಪುಸ್ತಕ ಪ್ರದರ್ಶನ ಉದ್ಘಾಟನೆ

ಉಡುಪಿ: ಜ್ಞಾನ ಎಂಬುದು ಒಂದು ಶಕ್ತಿ, ಪುಸ್ತಕಗಳನ್ನು ಓದುವುದರಿಂದ ನಾವು ಜ್ಞಾನ ಸಂಪಾದನೆ ಮಾಡಬಹುದು. ಓದುವಿಕೆ ನಮ್ಮ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುತ್ತದೆ. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ಹೇಳಿದರು. ಅವರು ಇಂದು ಅಜ್ಜರಕಾಡು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ನಡೆದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪುಸ್ತಕಗಳು ಮತ್ತು ಲೇಖನಗಳು ಅತ್ಯಂತ ಪ್ರಮುಖ […]
ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರದ ನೇತೃತ್ವದಲ್ಲಿ ಆ.15ರಂದು ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ‘ಚಾಣಕ್ಯ ಚಿತ್ತಾರ -2026’

ಹೆಬ್ರಿ: ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಚಿತ್ರಕಲಾ ತರಬೇತಿ ನೀಡಿ ಗ್ರಾಮೀಣ ಮಕ್ಕಳ ಪ್ರತಿಭಾ ಅನಾವರಣಕ್ಕೆ ಅವಕಾಶ ಕಲ್ಪಿಸುತ್ತಿರುವ ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ 10ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಚಿಣ್ಣರ ಚಿತ್ತಾರ-2026 ಆ.15ರಂದು ಮಧ್ಯಾಹ್ನ 2 ಗಂಟೆಗೆ ಹೆಬ್ರಿ ಶ್ರೀಮತಿ […]
ಸ್ವರಗಳಲ್ಲಿ ಅರಳಲಿದೆ ಗುರು–ಶಿಷ್ಯರ ‘ಅನುಬಂಧ’; ಆ. 23ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ

ಬೆಂಗಳೂರು: ಗುರು-ಶಿಷ್ಯ ಪರಂಪರೆಯ ಪಾವಿತ್ರ್ಯ, ಘರಾಣಾ ಸಂಪ್ರದಾಯದ ಗಾಂಭೀರ್ಯ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಆಳವನ್ನು ಸ್ವರಗಳ ಮೂಲಕ ಅನಾವರಣಗೊಳಿಸುವ ‘ಅನುಬಂಧ-ಎ ಸೇಕ್ರೆಡ್ ಬಾಂಡ್’ ಸಂಗೀತೋತ್ಸವ ಆ. 23ರಂದು ಸಂಜೆ 5ಕ್ಕೆ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ.ಸಂಗೀತೋತ್ಸವದ ಪ್ರಮುಖ ಆಕರ್ಷಣೆಯಾಗಿ ಧಾರವಾಡ ಘರಾಣೆಯ ಆರನೇ ತಲೆಮಾರಿನ ಪ್ರತಿನಿಧಿ, ಖ್ಯಾತ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನ್ ಹಾಗೂ ಅವರ ಶಿಷ್ಯ, ಮಂಗಳೂರಿನ ಯುವ ಸಿತಾರ್ ಪ್ರತಿಭೆ ಅಂಕುಶ್ ಎನ್. ನಾಯಕ್ ಅವರ ಜುಗಲ್ಬಂದಿ ನಡೆಯಲಿದೆ. ಗುರು-ಶಿಷ್ಯರ […]
ಲಯನ್ಸ್ ಕ್ಲಬ್ ಕೆಮ್ಮಣ್ಣು ಉದ್ಘಾಟನೆ: ಸ್ಥಾಪಕಾಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು

ಉಡುಪಿ: ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನೂತನ ಲಯನ್ಸ್ ಕ್ಲಬ್ ಕೆಮ್ಮಣ್ಣು ಇದರ ಉದ್ಘಾಟನೆಯನ್ನು ಲಯನ್ಸ್ ಜಿಲ್ಲೆ 317ಸಿಯ ಗವರ್ನ‌್ರರವರ ಪದಪ್ರಧಾನ ಸಮಾರಂಭದಲ್ಲಿ ಲಯನ್ಸ್ ಅಂತರಾಷ್ಟ್ರೀಯ ನಿರ್ದೇಶಕ ಕೃಷ್ಣ ರೆಡ್ಡಿ ನೆರವೇರಿಸಿದರು. ಕ್ಲಬ್‌ನ ಸ್ಥಾಪಕ ಅಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಲಯನ್ಸ್ ಅಂತರಾಷ್ಟ್ರೀಯ ನಿರ್ದೇಶಕರಾದ ಪಂಕಜ್ ಮೆಹ್ರಾ, ಲಯನ್ ಗವರ್ನರ್ ಕೋಟ್ಯಾನ್ ಶುಭ ಹಾರೈಸಿದರು. ವೇದಿಕೆಯಲ್ಲಿ ಮಾಜಿ ಲಯನ್ಸ್ ಗವರ್ನರ್ ಎನ್.ಎಂ. ಲಯನ್ಸ್ ಕಾರ್ಯದರ್ಶಿ ಸದಾನಂದ ನಾವಡ, ಜಿಲ್ಲಾ ಲಯನ್ಸ್ ಪದಪ್ರಧಾನ […]
ಜೈಲ್ ನಲ್ಲಿ ಮೊಬೈಲ್ ಫೋನ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲು!

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಮೊಬೈಲ್ ಫೋನ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ಇನ್ಸ್‌ಪೆಕ್ಟರ್ ಸುಬ್ರಮಣ್ಯಸ್ವಾಮಿ ಅವರು ದೂರು ನೀಡಿದ್ದಾರೆ. ಶೋಧದ […]