ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಅದರಂತೆ ಇವರಿಬ್ಬರನ್ನು […]
ಸೌಂದರ್ಯ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವವರಿಗೆ MSDC ಯಿಂದ ಸ್ಪೆಷಲ್ ಆಫರ್ !

ಮಣಿಪಾಲ: ಸೌಂದರ್ಯ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ಹಾಗೂ Orane International ವತಿಯಿಂದ ವಿಶೇಷ ಆಫರ್ ಘೋಷಿಸಲಾಗಿದೆ. Masters in Cosmetology ಅಥವಾ B.Voc in Cosmetology ಕೋರ್ಸ್‌ಗೆ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ AI Film Making Course ಉಚಿತವಾಗಿ ನೀಡಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಈ ವಿಶೇಷ ಆಫರ್ ಘೋಷಿಸಲಾಗಿದ್ದು, ಆಗಸ್ಟ್ 17ರವರೆಗೆ ಮಾತ್ರ ಆಫರ್ ಲಭ್ಯವಿರಲಿದೆ. ಕಾಸ್ಮೆಟಾಲಜಿ ಕೋರ್ಸ್‌ಗಳಲ್ಲಿ ಉದ್ಯಮ ಮಾನ್ಯತೆ ಪಡೆದ ತರಬೇತಿ, ಅನುಭವಿ […]
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಫಾನ್ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿನಿಯರಾದ ವೃಷ್ಟಿ ಮತ್ತು ಸನ್ನಿಧಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಆಟಿ ಅಮಾವಾಸ್ಯೆ: ಉಡುಪಿ ಜಿಲ್ಲೆಯ ವಿವಿಧೆಡೆ ಹಾಲೆ ಮರದ ಕಷಾಯ ಕುಡಿಯುವ ಸಾಂಪ್ರದಾಯಿಕ ಆಚರಣೆ

ಉಡುಪಿ: ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಆಟಿ ಅಮಾವಾಸ್ಯೆಯ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧೆಡೆ ಬುಧವಾರ ಹಾಲೆ ಮರದ ಕಷಾಯ ಸೇವಿಸುವ ಸಂಪ್ರದಾಯ ನಡೆಯಿತು. ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಮಹತ್ವವಿದ್ದು, ಅದರಲ್ಲೂ ಆಟಿ ಅಮಾವಾಸ್ಯೆಯಂದು ಹಾಲೆ ಮರದ ತೊಗಟೆಯಿಂದ ತಯಾರಿಸಿದ ಕಷಾಯ ಸೇವಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಆಚರಣೆಯಾಗಿದೆ. ಮನೆಯ ಹಿರಿಯರು ನಸುಕಿನಲ್ಲೇ ಹಾಲೆ ಮರದ ತೊಗಟೆಯನ್ನು ಸಂಗ್ರಹಿಸಿ, ಅದನ್ನು ಕಲ್ಲಿನಲ್ಲಿ ಅರೆದು ರಸ ತೆಗೆದು ಕಷಾಯ ತಯಾರಿಸಿ ಮನೆಯ ಸದಸ್ಯರಿಗೆ ಕುಡಿಸುತ್ತಾರೆ. […]
ಶಿಕ್ಷಕರಾಗುವ ಕನಸು ಕಾಣುವವರಿಗೆ ಸಿಹಿಸುದ್ದಿ: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಅರ್ಹತಾ ವಿವರಗಳನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕ ಭಾಗದಲ್ಲಿ 6,967 ಹುದ್ದೆಗಳು ಭರ್ತಿಯಾಗಲಿವೆ. ಇದರಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ (GPT) 3,228, ಪ್ರೌಢಶಾಲಾ ಸಹ ಶಿಕ್ಷಕರ 2,214, ಪ್ರಾಥಮಿಕ ಶಾಲಾ ಶಿಕ್ಷಕರ 800, […]