ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್

ಉಡುಪಿ: ನಾಯಕತ್ವವು ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ. ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ ನಾಯಕತ್ವದ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ವಿದ್ಯಾರ್ಥಿ ಸಮೂಹಕ್ಕೆ ಮಾರ್ಗದರ್ಶನದ ಅಗತ್ಯವಿದೆ ಎಂದು ಮಹಾತ್ಮಾಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ ನಾಯಕ್ ಹೇಳಿದರು. ಅವರು ಮಂಗಳವಾರ ಭಾರತೀಯ ರೆಡ್ ಕ್ರಾಸ್ ಉಡುಪಿ ಜಿಲ್ಲೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ ಜಿಲ್ಲೆಯ ರೆಡ್‌ಕ್ರಾಸ್ ಘಟಕ ನಾಯಕರ ತರಬೇತಿ ಶಿಬಿರವನ್ನು ಉದ್ಘಾಟಿಸಿ […]
ತುಳು ಭಾಷೆ, ಸಂಸ್ಕೃತಿ ಉಳಿಸಲು ನಿರಂತರ ಪ್ರಯತ್ನ ಅಗತ್ಯ- ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ತುಳುನಾಡಿನ ಸಂಪ್ರದಾಯ, ಆಚರಣೆ ಹಾಗೂ ಆಚಾರ–ವಿಚಾರಗಳನ್ನು ತುಳು ಭಾಷಿಕರೇ ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯ ಪರಿಚಯ ಮಾಡಿಕೊಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಉಡುಪಿ ತುಳುಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ಆಟಿದ ತಿರ್ಲ್ 2026’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ತುಳುನಾಡಿನ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ತುಳು […]
ಕನಸಿಗೆ ರೆಕ್ಕೆ ಕಟ್ಟಿ ಆಕಾಶಕ್ಕೆ ಹಾರಿದ ಶೈನಿ ಅಸ್ಮಾ ಸಲ್ಡಾನ, ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಎನ್ನುವ ಹೆಗ್ಗಳಿಕೆ

ಕಾರ್ಕಳ: ಐದು ವರ್ಷದ ಬಾಲಕಿಯ ಮನದಲ್ಲಿ ಮೂಡಿದ್ದ ಪೈಲಟ್ ಆಗಬೇಕೆಂಬ ಕನಸು, ವರ್ಷಗಳ ಕಠಿಣ ಪರಿಶ್ರಮ, ಛಲ ಮತ್ತು ತಾಳ್ಮೆಯ ಮೂಲಕ ನನಸಾಗಿದೆ. ಕಾರ್ಕಳ ತಾಲೂಕಿನ ಕೌಡೂರು ರಂಗನಪಲ್ಕೆಯ ಶೈನಿ ಅಸ್ಮಾ ಸಲ್ಡಾನ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL) ಪಡೆಯುವ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೌಡೂರು ರಂಗನಪಲ್ಕೆಯ ಅಶೋಕ್ ಜಾಕೋಬ್ ಸಲ್ಡಾನ ಮತ್ತು ಮರಿಯಾ ಗ್ರೆಟ್ಟಾ ಸಲ್ಡಾನ ದಂಪತಿಯ ಪುತ್ರಿಯಾಗಿರುವ ಶೈನಿ […]
ಬಂಟ್ವಾಳ: ಐದನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

ಬಂಟ್ವಾಳ: ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರಿಗೆ ಎದುರಾಗಿದ್ದ ಅಪಾಯವನ್ನು ತಪ್ಪಿಸಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ತಯಾರಿ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಈ ಶಬ್ದ ಕೇಳಿದ […]
ಚಿತ್ರದುರ್ಗದಲ್ಲಿ ಅದ್ಧೂರಿಯ ವಿಶ್ವಕರ್ಮ ಪ್ರೀಮಿಯರ್ ಲೀಗ್- ಗುರುಗಣೇಶ್ ನೇಜಾರು ಚಾಂಪಿಯನ್ಸ್

ಚಿತ್ರದುರ್ಗ-ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ(ರಿ)ಇವರ ಆಶ್ರಯದಲ್ಲಿ,ಅಧ್ಯಕ್ಷರಾದ ಎಮ್.ಶಂಕರಮೂರ್ತಿ ಇವರ ಸಾರಥ್ಯದಲ್ಲಿ ಚಿತ್ರದುರ್ಗ ಹಳೆ ಮಾಧ್ಯಮಿಕ ಶಾಲೆ ಮೈದಾನದಲ್ಲಿ ನಡೆದ ವಿಶ್ವಕರ್ಮ ಪ್ರೀಮಿಯರ್ ಲೀಗ್ VPL-2026 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಕಾಶ್ ಆಚಾರ್ ನೇಜಾರು ಮಾಲೀಕತ್ವದ ಗುರುಗಣೇಶ್ ನೇಜಾರು ಚಾಂಪಿಯನ್ಸ್ ಆಗಿ ಮೂಡಿಬಂದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 16 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಿದ್ದರು. ಲೀಗ್ ಹಂತದ ಹೋರಾಟದ ಬಳಿಕ ಉಪಾಂತ್ಯ ಪಂದ್ಯದಲ್ಲಿ ಕ್ರಮವಾಗಿ ಗುರುಗಣೇಶ್ ನೇಜಾರು-ರತನ್ ರಾಕರ್ಸ್ ಕುಂದಾಪುರ ತಂಡವನ್ನು,ಕಗಿಟಿಸ್ ಬೆಂಗಳೂರು-ಮಾಣಿಕ್ಯ ವಿವಿಸಿ ತಂಡವನ್ನು […]