ಉಡುಪಿ: ಅಧಿಕ ಬಡ್ಡಿ- ಸಾಲ ವಸೂಲಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ; ಮೂವರ ಬಂಧನ

ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್‌ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಸಾಲದ ಕಂತಿನ ಹಣ ಬಾಕಿ ಇದ್ದ ಸಂದರ್ಭದಲ್ಲಿ ಹಣಕ್ಕಾಗಿ ಸಾರ್ವಜನಿಕರನ್ನು ಪೀಡಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಕುಂಜಾಲಿನ ಗಣೇಶ್ ಗಾಣಿಗ ಅವರ KA-03-HF-8253 ನೋಂದಣಿ ಸಂಖ್ಯೆಯ ಮೋಟಾರು ಸೈಕಲ್‌ನ್ನು […]
ಆಟಿ ಅಮಾವಾಸ್ಯೆ: ಉಂಡಾರು ಕ್ಷೇತ್ರದಲ್ಲಿ ‘ದೇವರು ಊಟ ಮಾಡಿದ ದಿನ’

ಉಡುಪಿ: ಕರಾವಳಿಯ ಜನಜೀವನದಲ್ಲಿ ವಿಶೇಷ ಮಹತ್ವ ಪಡೆದಿರುವ ಆಟಿ ಅಮಾವಾಸ್ಯೆಯನ್ನು ಜಿಲ್ಲೆಯ ಇನ್ನಂಜೆ ಸಮೀಪದ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ದೇವರು ಊಟ ಮಾಡಿದ ದಿನ’ ಎಂಬ ವಿಶಿಷ್ಟ ನಂಬಿಕೆಯೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುರಾತನ ಕ್ಷೇತ್ರವಾಗಿರುವ ಉಂಡಾರು ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಆಚರಣೆಗೆ ಪೌರಾಣಿಕ ಹಿನ್ನೆಲೆಯಿದೆ. ಮುಗ್ಧ ವಟುವೊಬ್ಬನ ಅಚಲ ಭಕ್ತಿ ಹಾಗೂ ನಿರ್ಮಲ ಮನಸ್ಸಿಗೆ ಮೆಚ್ಚಿದ ಶ್ರೀ ವಿಷ್ಣುಮೂರ್ತಿ ಸ್ವತಃ ಆತ ಸಮರ್ಪಿಸಿದ ನೈವೇದ್ಯವನ್ನು ಸ್ವೀಕರಿಸಿದನೆಂಬ ಐತಿಹ್ಯವಿದೆ. ಈ ಕಾರಣದಿಂದ ಆಟಿ ಅಮಾವಾಸ್ಯೆಯನ್ನು ಇಲ್ಲಿ ‘ದೇವರು […]
ಹಿಂದೂ ಕಾರ್ಯಕರ್ತನಿಗೆ ಜಿಲ್ಲೆ ಪ್ರವೇಶ ನಿರ್ಬಂಧ: ಹಿಂದೂ ಜಾಗರಣ ವೇದಿಕೆ ಆಕ್ರೋಶ

ಉಡುಪಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಕಳ ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಬೇಕಿದ್ದ ಸಾಮಾಜಿಕ ಸಂಘಟನೆಯ ಕಾರ್ಯಕರ್ತರಿಗೆ ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತದ ಕ್ರಮವನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವೇದಿಕೆಯ ಪ್ರಾಂತ ಸಹ ಸಂಚಾಲಕ ಮಹೇಶ್ ಕಡಗದಾಳು, ‘ವಾಕ್ ಸ್ವಾತಂತ್ರ್ಯವನ್ನು ದಮನಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಾನಸಿಕತೆ ಬ್ರಿಟಿಷರ ಮಾನಸಿಕತೆಯನ್ನು ಬಿಂಬಿಸುವಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇಂತಹ ಯಾವುದೇ ಬೆದರಿಕೆಗೆ ಹಿಂದೂ […]
ಪಿಂಚಣಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಭವಿಷ್ಯ ನಿಧಿ ಪಿಂಚಣಿದಾರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಗುರುವಾರ ನಗರದ ಭವಿಷ್ಯ ನಿಧಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳಿಕ ಪಿಂಚಣಿದಾರರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಹಾಗೂ ಉಡುಪಿ ಜಿಲ್ಲಾ ಹಂಚು […]
ಆ.19 ರಂದು MSDC ಯ ಈ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಕ್ಕಳ ಫ್ರಾಕ್ ವಿನ್ಯಾಸ, ಪ್ಯಾಟರ್ನ್ ತಯಾರಿ, ಹೊಲಿಗೆ ತಂತ್ರಗಳನ್ನು ಕಲಿಯಿರಿ, ಸ್ವ ಉದ್ಯೋಗದಲ್ಲಿ ಬದುಕು ಕಟ್ಟಿಕೊಳ್ಳಿ:

ಮಣಿಪಾಲ: ಮಕ್ಕಳ ಫ್ರಾಕ್ ವಿನ್ಯಾಸ, ಪ್ಯಾಟರ್ನ್ ತಯಾರಿ ಹಾಗೂ ಹೊಲಿಗೆ ತಂತ್ರಗಳನ್ನು ಕಲಿಯಲು ಆಸಕ್ತರಿಗಾಗಿ ಮಣಿಪಾಲದ MSDCಯಲ್ಲಿ ವಿಶೇಷ ಕಾರ್ಯಾಗಾರ ಆಯೋಜಿಸಲಾಗಿದೆ. ಈ ಕಾರ್ಯಾಗಾರವು ಆಗಸ್ಟ್ 19ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮಣಿಪಾಲದ Dreamzone, MSDC, 2ನೇ ಮಹಡಿ, ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ನಲ್ಲಿ ನಡೆಯಲಿದೆ. ‘Designer Kid’s Frock Workshop’ ಹೆಸರಿನಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಆರಂಭಿಕ ಹಂತದ ಕಲಿಕಾರ್ಥಿಗಳಿಗೆ ಸೂಕ್ತವಾಗಿರುವ ಈ ಕಾರ್ಯಾಗಾರಕ್ಕೆ ಎಲ್ಲ ವಯೋಮಾನದವರು ಭಾಗವಹಿಸಬಹುದಾಗಿದೆ. ಏನೇನು ಕಲಿಯಬಹುದು? ಕಾರ್ಯಾಗಾರದಲ್ಲಿ […]