ಹೋಟೆಲ್ ಆಯ್ತು, ಇನ್ನು ರಾಜ್ಯದ ಹಾಸ್ಟೆಲ್‌, ಪಿಜಿಗಳಲ್ಲೂ ಆಹಾರ ತಪಾಸಣೆಗೆ ಆರೋಗ್ಯ ಸಚಿವರ ಆದೇಶ

ಬೆಂಗಳೂರು: ಹೋಟೆಲ್‌ಗಳಲ್ಲಿನ ಆಹಾರ ಗುಣಮಟ್ಟದ ಪರಿಶೀಲನೆ ಬಳಿಕ ಇದೀಗ ರಾಜ್ಯದ ಹಾಸ್ಟೆಲ್‌ಗಳು ಮತ್ತು ಪಿಜಿಗಳಲ್ಲೂ ಆಹಾರ ತಪಾಸಣೆ ನಡೆಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಹಾಸ್ಟೆಲ್‌ಗಳ ಜೊತೆಗೆ ಪಿಜಿಗಳು ಹಾಗೂ ಕ್ಯಾಂಟೀನ್‌ಗಳಲ್ಲಿಯೂ ಆಹಾರ ಪರೀಕ್ಷೆ ನಡೆಸಲಾಗುವುದು. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಿಲ್ಲಾ […]

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಯಿಂದ ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) 2023ರ ಕಲಂ 163ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ. ಅದರಂತೆ ಆಗಸ್ಟ್ 14ರಿಂದ ನವೆಂಬರ್ 13ರವರೆಗೆ ಮೂರು ತಿಂಗಳ ಅವಧಿಗೆ ಪುನೀತ್ ಅತ್ತಾವರ ಅವರು ಉಡುಪಿ ಜಿಲ್ಲೆಯ ಯಾವುದೇ ಪ್ರದೇಶಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ನಿರ್ಬಂಧದ […]

ತಮಿಳುನಾಡು ಬಸ್‌ಗಳಿಗೆ ತಾತ್ಕಾಲಿಕ ತಡೆ ತೆರವು; ಬೆಂಗಳೂರಿನಲ್ಲಿ ಎಂದಿನಂತೆ ಸಂಚಾರ

ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ತಮಿಳುನಾಡಿನಿಂದ ಬೆಂಗಳೂರಿಗೆ (Bengaluru) ಬರುವ ಹಾಗೂ ಇಲ್ಲಿಂದ ತಮಿಳುನಾಡಿಗೆ (Tamil Nadu) ತೆರಳುವ ಬಸ್‌ಗಳ ಸಂಚಾರಕ್ಕೆ ಪೊಲೀಸರು ನೀಡಿದ್ದ ತಾತ್ಕಾಲಿಕ ತಡೆಯನ್ನು ತೆರವುಗೊಳಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಯಾವುದೇ ಬಂದ್ ವಾತಾವರಣ ಇಲ್ಲದ ಹಿನ್ನೆಲೆಯಲ್ಲಿ ತಮಿಳುನಾಡು ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಂದ್‌ನ ಸ್ವರೂಪ ನೋಡಿಕೊಂಡು ಬಸ್‌ಗಳ ಸಂಚಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದರು. ಆದರೆ, ಸದ್ಯ ಪರಿಸ್ಥಿತಿ ಸಹಜವಾಗಿರುವುದರಿಂದ ಎಂದಿನಂತೆ ಬಸ್‌ಗಳನ್ನು ಓಡಿಸಲು ಸೂಚಿಸಲಾಗಿದೆ.  ಮಿಳುನಾಡು ಸಾರಿಗೆ […]

ಅಕ್ರಮ ಸಾಲದ ಆ್ಯಪ್‌ಗಳು ಸೇರಿದಂತೆ 3,718 ಮೊಬೈಲ್ ಅಪ್ಲಿಕೇಶನ್‌ ಬ್ಯಾನ್!

ನವದೆಹಲಿ: ಬಳಕೆದಾರರನ್ನು ವಂಚಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಕ್ರಮ ಸಾಲದ ಆ್ಯಪ್‌ಗಳು ಸೇರಿದಂತೆ 3,718 ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಲೋಕಸಭೆಗೆ ತಿಳಿಸಿದ್ದಾರೆ. ಈ ವರ್ಷದ ಜೂನ್ 30ರವರೆಗೆ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಶಿಫಾರಸಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 69(A) ಹಾಗೂ 79(3)(b) ಅಡಿಯಲ್ಲಿ ಈ ಮೊಬೈಲ್ ಆ್ಯಪ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ […]

ಚಾಟ್ ಜಿಪಿಟಿ ಬಳಸಿ ತಾಯಿ-ತಮ್ಮನ ಕೊಲೆ, ಭಾರತೀಯ ಮೂಲದ ಯುವಕ ವಶಕ್ಕೆ!

ವಾಷಿಂಗ್ಟನ್: ಅಮೆರಿಕದ ಮ್ಯಾಸಚುಸೆಟ್ಸ್‌ನಲ್ಲಿ ಭಾರತೀಯ ಮೂಲದ ಯುವಕನೊಬ್ಬ ತನ್ನ ತಾಯಿ ಹಾಗೂ 14 ವರ್ಷದ ತಮ್ಮನನ್ನು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆ ವೇಳೆ ಆರೋಪಿ ಹತ್ಯೆಗೆ ಮುನ್ನ ಇಂಟರ್ನೆಟ್ ಹಾಗೂ ChatGPT ಸೇರಿದಂತೆ AI ತಂತ್ರಜ್ಞಾನ ಬಳಸಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 11ರಂದು ಬೋಸ್ಟನ್‌ನಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಆಕ್ಟನ್‌ನ ಮಾರ್ತಾ ಲೇನ್‌ನಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆಕ್ಟನ್ ನಿವಾಸಿ ಅರ್ಜುನ್ ಅರವಿಂದ್ ಆರೋಪಿ ಎಂದು ಗುರುತಿಸಲಾಗಿದ್ದು, […]